ರಾಜ್ಯದ ಸಿ ಮತ್ತು ಡಿ ಗ್ರೂಪ್ ನೌಕರರ ವರ್ಗಾವಣೆ ನೀತಿಯಲ್ಲಿ ಬದಲಾವಣೆ ಮಾಡಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಬೆಂಗಳೂರು (ನ.17): ರಾಜ್ಯದ ಸಿ ಮತ್ತು ಡಿ ಗ್ರೂಪ್ ನೌಕರರ ವರ್ಗಾವಣೆ ನೀತಿಯಲ್ಲಿ ಬದಲಾವಣೆ ಮಾಡಲು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಮೂಲಕ ಪತಿ ಪತ್ನಿ ವರ್ಗಾವಣೆ ಆಗಲು ಇದ್ದ ತೊಡಕು ನಿವಾರಣೆಯಾಗಿದೆ. ಪೊಲೀಸ್ ಇಲಾಖೆಯಲ್ಲಿ 7 ವರ್ಷ ಸೇವೆ ಪೂರ್ಣಗೊಳಿಸಿದ್ರೆ ಅಂತರ ಜಿಲ್ಲಾ ವರ್ಗಾವಣೆ ಕೊಡಬಹುದು. ಇದರಲ್ಲಿ ಇನ್ನೂ ಸಡಿಲಿಕೆ ಮಾಡಿಕೊಳ್ಳಲು ಆಯಾ ಇಲಾಖೆಗೆ ಬಿಡಲಾಗಿದೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಇನ್ನು ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪಿಸಲು ನಿರ್ಧಾರ ಮಾಡಲಾಗಿದೆ. 600 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಡಲು ತೀರ್ಮಾನಿಸಲಾಗಿದೆ. ಅರ್ಚಕರ ಹಳ್ಳಿಯಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ. 

ರಾಜ್ಯದಲ್ಲಿ ಹೊಸದಾಗಿ 7 ವನ್ಯಧಾಮ ಆರಂಭಕ್ಕೆ ಸಂಪುಟ ಸಭೆ ಸಹಮತ ನೀಡಿದೆ. ಉತ್ತಾರೆಗುಡ್ಡ ವನ್ಯಜೀವಿಧಾಮ, ಬಂಕಾಪುರ ವನ್ಯಜೀವಿಧಾಮ, ಅರಸೀಕೆರೆ ಕರಡ ಧಾಮ, ಹಿರೆಸೂಲೇಕೆರೆ ಕರಡಿ ಸಂರಕ್ಷಣಾ ಮೀಸಲು ಪ್ರದೇಶ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಬೋನಾಳ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶಗಳನ್ನು ಘೋಷಿಸುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.

ಇನ್ನು ಬೆಂಗಳೂರಿನ‌ ದಾಸನಪುರ ಹೋಬಳಿ ಗಂಗೋಡನಹಳ್ಳಿ ಸರ್ವೇ 18 ರಲ್ಲಿ 15 ಗುಂಟೆ ಜಮೀನನ್ನು " ನಮ್ಮನೆ ಸುಮ್ಮನೆ" ಅನ್ನೋ ಸಂಸ್ಥೆಗೆ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.

ಇನ್ನು ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ ಡಿಸೆಂಬರ್ 19ರಿಂದ ಡಿಸೆಂಬರ್ 30 ವರೆಗೆ ನಡೆಯಲಿದೆ. ಈ ಬಗ್ಗೆ ಇಂದು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರ ಜೊತೆಗೆ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳಗ್ಳಲಾಗಿದೆ.

ಭಾರತ್ ಜೋಡೋ ಯಾತ್ರೆ, ಚಳಿಗಾಲದ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರು!

ಎನ್ ಹೆಚ್ ಎಂ ಫಂಡ್ ನಲ್ಲಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ಸಂಪುಟ ಸಭೆಯಲ್ಲಿ ತಿರ್ಮಾನ ತೆಗೆದುಕೊಳ್ಳಲಾಗಿದೆ. ಏಳು ಆಸ್ಪತ್ರೆಗಳಿಗೆ 158 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದೆ. ತಾಯಿ ಮತ್ತು ಮಗು ಆಸ್ಪತ್ರೆ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದ್ದು, ತರಿಕೆರೆಯಲ್ಲಿ 100 ಹಾಸಿಗೆ ತಾಯಿ ಮಗು ಆಸ್ಪತ್ರೆ, ಲಿಂಗಸುಗೂರಿನಲ್ಲಿ 59 ಹಾಸಿಗೆ ತಾಯಿ‌ ಮಗು ಆಸ್ಪತ್ರೆ, ಹರಿಹರದಲ್ಲಿ50 ಹಾಸಿಗೆ ತಾಯಿ ಮಗು ಆಸ್ಪತ್ರೆ, ಗೋಕಾಕ್ ನಲ್ಲಿ 200 ಬೆಡ್ ತಾಯಿ ಮಗು ಆಸ್ಪತ್ರೆ ಮೇಲ್ದರ್ಜೆಗೆ ಅನುಮತಿ ನೀಡಲಾಗಿದೆ.

Bommai Cabinet Meeting: ಡಿಸೆಂಬರ್ 19 ರಿಂದ ಚಳಿಗಾಲದ ಅಧಿವೇಶನ ಆರಂಭ

ಇನ್ನು ಶ್ರೀಕಂಠೇಶ್ವರ ದೇಗುಲ ವಿಐಪಿ ಕೊಠಡಿ ನಿರ್ಮಾಣಕ್ಕೆ 16 ಕೋಟಿ, ಇಎಸ್ ಐ ಆಸ್ಪತ್ರೆ ಉಪಕರಣ ಖರೀದಿಗೆ ಸಂಪುಟ ಒಪ್ಪಿಗೆ ನೀಡಿದೆ. ಸುಮಾರು 44 ಕೋಟಿ ವೆಚ್ಷಕ್ಕೆ ಅನುಮೋದನೆ ಸಿಕ್ಕಿದೆ. ಬಳ್ಳಾರಿ ತಾಲೂಕಿನ 6 ಜನವಸತಿ ಪ್ರದೇಶಕ್ಕೆ ನೀರು. ಕುಡಿಯುವ ನೀರು ಪೂರೈಕೆಗೆ 11 ಕೋಟಿ, ಅಂಜನಾಪುರದಲ್ಲಿ ಸಾರಿಗೆ ಕಟ್ಟಡ ನಿರ್ಮಾಣ.ಇದಕ್ಕಾಗಿ 25 ಕೋಟಿ ಅನುದಾನ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ.