ದಸರಾ ಆಯುಧ ಪೂಜೆಗೆ ಅರಿಶಿಣ, ಕುಂಕುಮ ಹಾಗೂ ರಂಗೋಲಿ ನಿಷೇಧಿಸಿದ ಸರ್ಕಾರ!
ದಸರಾದಲ್ಲಿ ಆಯುಧ ಪೂಜೆಯಲ್ಲಿ ರಾಸಾಯನಿಕಯುಕ್ತ ಅರಿಶಿಣ, ಕುಂಕುಮ ಹಾಗೂ ಸುಣ್ಣ ಬಳಕೆ ಹಾಗೂ ಬಣ್ಣ ಬಣ್ಣದ ರಂಗೋಲಿ ಹಾಕುವುದನ್ನು ನಿಷೇಧಿಸಿ ಸರ್ಕಾರದ ಆದೇಶ ಹೊರಡಿಸಿದೆ.
ಬೆಂಗಳೂರು (ಅ.18): ನಾಡಹಬ್ಬ ದಸರಾದಲ್ಲಿ ಆಯುಧ ಪೂಜೆ ಸಮಯದಲ್ಲಿ ಒಡೆಯಲಾಗುವ ಕುಂಬಳಕಾಯಿಯ ಒಳಗೆ ಹಾಗೂ ರಂಗೋಲಿಯಲ್ಲಿ ರಾಸಾಯನಿಕಯುಕ್ತ ಬಣ್ಣಗಳು, ಅರಿಶಿಣ, ಕುಂಕುಮ ಹಾಗೂ ಸುಣ್ಣ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ನಾಡ ಹಬ್ಬ ದಸರಾದಲ್ಲಿ ಆಯುಧ ಪೂಜೆ ಎನ್ನುವುದು ಭಾರಿ ಪ್ರಮುಖವಾದ ಪೂಜೆಯಾಗಿದೆ. ಈ ವೇಳೆ ಕುಂಬಳಕಾಯಿ ಒಡೆದು ಅದರಲ್ಲಿ ಅರಿಶಿಣ, ಕುಂಕುಮ, ಸುಣ್ಣ ಹಾಗೂ ಇತರೆ ಬಣ್ಣವನ್ನು ಹಾಕುವುದು ನಮ್ಮ ಸಂಪ್ರದಾಯವಾಗಿದೆ. ಇನ್ನು ರಂಗೋಲಿ ಹಾಕುವುದು ಕೂಡ ನಮ್ಮ ಸಂಪ್ರದಾಯವಾಗಿದ್ದು, ಬಣ್ಣ ಬಣ್ಣದ ರಂಗೋಲು ಹಾಕುವುದಕ್ಕೂ ಸರ್ಕಾರ ನಿಷೇಧವನ್ನು ಹೇರಿದೆ. ಇದಕ್ಕೆ ಬಿಜೆಪಿ ನಾಯಕರಿಂದ ಭಾರಿ ದೊಡ್ಡ ಮಟ್ಟದ ವಿರೋಧವೂ ವ್ಯಕ್ತವಾಗಿದೆ.
ಹಿಂದೂ ಆಚರಣೆಗಳ ದ್ವೇಷಕ್ಕೆ ಒಂದಾದ ಸಿದ್ಧರಾಮಯ್ಯ-ಸ್ಟ್ಯಾಲಿನ್, ಆಯುಧಪೂಜೆಯೇ ಟಾರ್ಗೆಟ್!
ಎಲ್ಲೆಲ್ಲಿ ಅರಿಶಿಣ, ಕುಂಕುಮ ಬಳಕೆ ನಿಷೇಧ: ವಿಧಾನಸೌಧ ವಿಕಾಸಸೌಧ ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಸಮಯದಲ್ಲಿ ಕಛೇರಿಗಳ ಒಳಗೆ ಮತ್ತು ಕಾರಿಡಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ಹಾನಿಕಾರಕವಾಗಿರುತ್ತದೆ. ಜೊತೆಗೆ, ಈ ರಾಸಾಯನಿಕ ಬಣ್ಣವು ನೆಲಹಾಸುವಿನ ಮೇಲೆ ಬಿದ್ದು ಸುಮಾರು ತಿಂಗಳುಗಳ ಕಾಲ ಹಾಗೆಯೇ ನೆಲಹಾಸುವಿನ ಮೇಲೆ ಅಂಟಿಕೊಂಡು ಉಳಿಯುತ್ತದೆ. ಇದರಿಂದ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡದ ನೆಲಹಾಸುಗಳ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ. ಈ ಕುರಿತಂತೆ, ಹಿಂದಿನ ಸಾಲುಗಳಲ್ಲಿಯೂ ಸಹ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದಾಗ್ಯೂ, ಕೆಲವು ಇಲಾಖೆ/ಶಾಖೆಗಳಲ್ಲಿ ಈ ಸೂಚನೆಗಳನ್ನು ಪಾಲನೆ ಮಾಡದಿರುವುದು ವಿಷಾದನೀಯವಾಗಿದೆ.
ಆದುದರಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ 2023ರ ಅಕ್ಟೋಬರ್ ಮಾಹೆಯಲ್ಲಿ ಆಯುಧ ಪೂಜೆ ನೆರವೇರಿಸುವಾಗ ಕಛೇರಿಯ ಒಳಗೆ ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣ/ಕುಂಕುಮ/ಅರಿಠಿನ/ಸುಣ್ಣ ಹಾಗೂ ಇನ್ನಿತರ ವಸ್ತುಗಳನ್ನು ಕಡ್ಡಾಯವಾಗಿ ಬಳಸದಂತೆ ಈ ಮೂಲಕ ತಿಳಿಸಲಾಗಿದೆ. ಮುಂದುವರೆದು, ಪೂಜಾ ದಿನದಂದು ಕಛೇರಿಯಿಂದ ಹೊರಡುವ ಮುನ್ನ ದೀಪಗಳನ್ನು ಹಾಗೂ ವಿದ್ಯುತ್ ಸ್ವಿಚ್‌ಗಳನ್ನು ನಂದಿಸಿ ತೆರಳುವಂತೆ ಸೂಚಿಸಲಾಗಿದೆ. ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೇ ವ್ಯವಸ್ಥಿತವಾಗಿ ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ.
ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್‌ಗೆ ಭಾರಿ ಮುಜುಗರ: ಸತೀಶ್ ಜಾರಕಿಹೊಳಿ ದಸರಾ ಟೀಮ್‌ನಿಂದ ತಿರುಗೇಟು!
ಪಾರಂಪರಿಕ ಕಟ್ಟಡಗಳ ಸೌಂದರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ/ನೌಕರರ ಆದ ಕರ್ತವ್ಯವಾಗಿದ್ದು, ಮೇಲೆ ತಿಳಿಸಲಾದ ಸೂಚನೆಗಳನ್ನು ಸ್ವಪ್ರೇರಿತರಾಗಿ ಪಾಲಿಸುವ ಮನಸ್ಥಿತಿಯನ್ನು ರೂಢಿಸಿಕೊಳ್ಳುವುದು ಸೂಕ್ತವಾಗಿರುತ್ತದೆ. ಆದಾಗ್ಯೂ ಸ್ಪಂದಿಸದಿದ್ದಲ್ಲಿ, ಸಂಬಂಧಪಟ್ಟ ಇಲಾಖೆ/ಶಾಖೆಯವರ ಮೇಲೆ ಅನಿವಾರ್ಯವಾಗಿ ಜವಾಬ್ದಾರಿಯನ್ನು ನಿಗಧಿಪಡಿಸಬೇಕಾಗುತ್ತದೆಂದು ಈ ಮೂಲಕ ತಿಳಿಸಲಾಗಿದೆ.