Asianet Suvarna News Asianet Suvarna News

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್: ಶೇ. 4 ತುಟ್ಟಿಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡಾ 38.75ಗೆ ಏರಿಕೆಯಾಗಿದೆ. 

Karnataka government dasara Gift given to govt Employees 4 percent gratuity Increase sat
Author
First Published Oct 21, 2023, 6:10 PM IST

ಬೆಂಗಳೂರು (ಅ.21): ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇಕಡಾ 38.75ಗೆ ಏರಿಕೆಯಾಗಿದೆ.

ಯುಜಿಸಿ/ಎಐಸಿಟಿಇ/ ಐಸಿಎಆರ್‌ (UGC/ AICTE/ ICAR) ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್‌ಜೆಪಿಸಿ (NJPC) ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ (ಶೇ.46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಬೆಲೆ ಏರಿಕೆ ಹಾಗೂ ಇತರೆ ಕಾರಣಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಸರ್ಕಾರಿ ನೌಕರರಿಗೆ ಈ ತುಟ್ಟಿ ಭತ್ಯೆ ಹೆಚ್ಚಳದಿಂದ ಸಂತಸ ಹೆಚ್ಚಾಗಿದೆ. 

ನವರಾತ್ರಿ ಹಬ್ಬಕ್ಕೆ ಗುಡ್ ನ್ಯೂಸ್, ಸರ್ಕಾರಿ ನೌಕರರಿಗೆ ಶೇ.4 ರಷ್ಟು DA ಹೆಚ್ಚಳಕ್ಕೆ ಅನುಮೋದನೆ!

ಮೂಲ ವೇತನಕ್ಕೆ ಮಾತ್ರ ಅನ್ವಯ: ತುಟ್ಟಿಭತ್ಯೆಯ ಉದ್ದೇಶಕ್ಕಾಗಿ 'ಮೂಲ ವೇತನ" ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ)- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,  (ಆ)- 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವ್ಯಯಕ್ತಿಕ ವೇತನ ಯಾವುದಾದರೂ ಇದ್ದರೆ ಆ ವೈಯಕ್ತಿಕ ವೇತನ, (ಇ)- ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮುಖ್ಯವಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ, ಇತರ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ಕರ್ನಾಟಕ ಸರ್ಕಾರಿ ನೌಕರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ: ಜನವರಿಯಿಂದ ಪೂರ್ವಾನ್ವಯ

  • ತುಟ್ಟಿಭತ್ಯೆಗೆ ಷರತ್ತುಗಳು ಅನ್ವಯ: 
  • ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.
  •  ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
  • ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ, ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ 'ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಅದೇಶಗಳನ್ನು ಹೊರಡಿಸಲಾಗುವುದು.
  • ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. 
  • ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮ ಇರುವ ಭಿನ್ನಾಂಶಗಳನ್ನು ಕಡೆಗಣಿಸತಕ್ಕದ್ದು.
  • ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2023ರ ಮೇ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
  •  ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.
Follow Us:
Download App:
  • android
  • ios