Asianet Suvarna News Asianet Suvarna News

Chennaveera Kanavi ಕವಿ ಚನ್ನವೀರ ಕಣವಿ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧಾರ

* ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಸರ್ಕಾರ ನಿರ್ಧಾರ
* ಈ ಬಗ್ಗೆ ಆದೇಶ ಹೊರಡಿಸಿದ ಸಿಎಂ ಬಸವರಾಜ ಬೊಮ್ಮಾಯಿ
* ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚನ್ನವೀರ ಕಣವಿ

Karnataka government decides bear chennaveera kanavi hospital bill rbj
Author
Bengaluru, First Published Jan 20, 2022, 10:43 PM IST

ಬೆಂಗಳೂರು, (ಜ.20) : ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ (Kannada Litterateur Chennaveera Kanavi) ಅವರ ಆಸ್ಪತ್ರೆ ವೆಚ್ಚ (Hospital Bill) ಭರಿಸಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಇಂದು(ಗುರುವಾರ(ಗುರುವಾರ) ಆದೇಶ ಹೊರಡಿಸಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಕಣವಿ ಜನವರಿ 14 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಸಂದರ್ಭದಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವ ಬಗ್ಗೆ ಖಚಿತವಾಗಿದೆ.ಅವರಿಗೆ ನಿರಂತರ ಚಿಕಿತ್ಸೆ ಹಾಗೂ ವೈದ್ಯಕೀಯ ಆಮ್ಲಜನಕ ನೀಡುತ್ತಿರುವುದು ತಿಳಿದುಬಂದಿದೆ.

Chennaveera Kanavi Health ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕ

ಕಣವಿ ಅವರು ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು, ಹಾಗೂ ಅವರು ರಾಜ್ಯದ ಬೌದ್ಧಿಕ ಸಂಪತ್ತು. ಅವರು ಚೇತರಿಸಿಕೊಂಡು ಆರೋಗ್ಯ ಪೂರ್ಣ ಜೀವನ ನಡೆಸಬೇಕು ಎಂಬುದು ನಮ್ಮ ಬಯಕೆ. ಹೀಗಾಗಿ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಧಾರವಾಡದ (Dharwad) ಎಸ್‌ಡಿಎಂ ಆಸ್ಪತ್ರೆಗೆ (SDM Hospital) ಸಿಎಂ ಪತ್ರ ಬರೆದಿದ್ದಾರೆ.

ವೆಂಟಿಲೇಟರ್‌ನಲ್ಲಿ ಕವಿ
ಉಸಿರಾಟದ ತೊಂದರೆಯಿಂದ ಸ್ಥಳೀಯ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಕವಿ ನಾಡೋಜ ಚೆನ್ನವೀರ ಕಣವಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಬುಧವಾರ ಸಂಜೆ ಬಿಡುಗಡೆ ಮಾಡಿರುವ ಆರೋಗ್ಯ ಮಾಹಿತಿ ಪ್ರಕಾರ, ಕಣವಿ ಅವರ ರಕ್ತದ ಒತ್ತಡ ಕಡಿಮೆಯಾಗಿದೆ. ಅದೇ ರೀತಿ ಆಮ್ಲಜನಕದ ಕೊರತೆ ಆಗುತ್ತಿದ್ದು ಅವರಿಗೆ ಕೊಳವೆ ಮೂಲಕ ಆಮ್ಲಜನಕ ಪೂರೈಕೆ ಮಾಡಲು ವೆಂಟಿಲೇಟರ್ ಅಳವಡಿಸಲಾಗಿದೆ.  ಹಿಮೋಗ್ಲೋಬಿನ್ ಕೂಡಾ ಕಡಿಮೆಯಾಗಿದ್ದು ರಕ್ತ ಹಾಕಲಾಗುತ್ತಿದೆ. ಉಳಿದಂತೆ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ಕೋವಿಡ್ ಶಿಷ್ಟಾಚಾರದ ಪ್ರಕಾರ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿತ್ತು.

ಚೆಂಬೆಳಕಿನ ಕವಿ ಎಂದೇ ಖ್ಯಾತಿ‌ ಪಡೆದಿರುವ 93 ವರ್ಷದ ಕಣವಿ, ಹುಬ್ಬಳ್ಳಿಯ  ಎಸ್ ಡಿಎಂ ಆಸ್ಪತ್ರೆಗೆ(Hospital) ತಪಾಸಣೆಗೆ ಹೋಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿದಾಗ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅಂದು ಅವರು ಅದೇ  ಎಸ್ ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಯಾವುದೇ ತೊಂದರೆ ಇಲ್ಲ ಆರೋಗ್ಯವಾಗಿದ್ದಾರೆ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಕೋವಿಡ್ ಸೋಂಕು ತಗುಲಿದ್ದ ಡಾ. ಚೆನ್ನವೀರ ಕಣವಿ ಜನವರಿ 14 ರಂದು ಎಸ್.ಡಿ.ಎಮ್.ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಡಾ. ಚೆನ್ನವೀರ ಕಣವಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಧಾರವಾಡ ಜಿಲ್ಲಾಡಳಿತ ಬುಧವಾರ ಈ ಕುರಿತು ಪ್ರತಿಕ್ರಿಯೆ ನೀಡಿದೆ. ಅವರ ಎಲ್ಲಾ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದೆ.

ಧಾರವಾಡ ಜಿಲ್ಲಾಡಳಿತ ಚಿಕಿತ್ಸೆಗೆ ಐಸಿಯು ಬೆಡ್ ಮೀಸಲಿರಿಸಿ, ಉತ್ತಮ ಚಿಕಿತ್ಸೆಗೆ ಕ್ರಮ ಕೈಗೊಂಡಿದೆ ಮತ್ತು ಅವರು ಗುಣಮುಖರಾಗಿ ಮನೆಗೆ ಬರುವವರೆಗೆ ಎಲ್ಲಾ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದ ಭರಿಸಲು ಕ್ರಮವಹಿಸಲಾಗಿದೆ. ಈ ಕುರಿತು ಜನವರಿ 15 ರಂದು ಎಸ್. ಡಿ. ಎಮ್. ಆಸ್ಪತ್ರೆಯ ಆಡಳಿತ ಮಂಡಳಿಗೆ ಹಾಗೂ ಡಾ. ಕಣವಿ ಕುಟುಂಬ ಸದಸ್ಯರಿಗೆ ತಿಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ಹೇಳಿತ್ತು.

Follow Us:
Download App:
  • android
  • ios