Asianet Suvarna News Asianet Suvarna News

ಕಾವೇರಿ ವಿಚಾರದಲ್ಲಿ ಕೆಟ್ಟ ಮೇಲೆ ಸರ್ಕಾರಕ್ಕೆ ಬುದ್ಧಿ ಬರುತ್ತಿದೆ! ಮಾಜಿ ಸಿಎಂ ಮಾತಿನ ಮರ್ಮವೇನು?

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದ್ದು, ಈಗ ಕಾನೂನು ತಜ್ಞರು, ರೈತರನ್ನು ಕರೆದು ಮಾತನಾಡಿಸುತ್ತಿದೆ.

Karnataka government get lesson from Cauvery water issue said Basavaraj Bommai sat
Author
First Published Sep 29, 2023, 4:26 PM IST

ಬೆಂಗಳೂರು (ಸೆ.29): ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದ್ದು, ಈಗ ಕಾನೂನು ತಜ್ಞರು, ರೈತರನ್ನು ಕರೆದು ಮಾತನಾಡಿಸುತ್ತಿದೆ. ಈ ಕೆಲಸ ಮೊದಲೇ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಲ್ಲಿ ಸಿಎಂ ಡಿಸಿಎಂ ನಡುವೆ ಹೊಂದಾಣಿಕೆಯಿಲ್ಲ ಆದರೆ, ಗೃಹ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದು ಸಾಬೀತಾಗಿದೆ. ಕೊಳ್ಳೆ ಹೊಡೆದ ಮೇಲೆ ಬಾಗಿಲು ಹಾಕಿದಂತೆ ಈಗ ಕಾನೂನು ಹೊರಾಟ ಮಾಡಲು ಹೊರಟಿದ್ದಾರೆ. ಕಾನೂನು ತಜ್ಞರ ಜೊತೆ ಮಾತನಾಡುವ ಕೆಲಸವನ್ನು ಮುಂಚೆಯೇ ಮಾಡಬೇಕಿತ್ತು. ಈಗಲಾದರೂ ಸರ್ಕಾರ ಪ್ರಾಮಾಣಿಕವಾಗಿ ಕಾನೂನು ಹೋರಾಟ ಮಾಡಿ, ಮುಂದಿನ ದಿನಗಳಲ್ಲಿ ರಾಜ್ಯದ ವಿರುದ್ದ ಬರುವ ಆದೇಶಗಳು ಬರದಂತೆ ನೋಡಿಕೊಳ್ಳಲಿ ಎಂದರು.

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಿದ್ದರೆ ರಾಜ್ಯ ಸರ್ಕಾರ ಡಿಸ್ಮಿಸ್‌ ಆಗುತ್ತೆ: ಸಿಎಂ ಸಿದ್ದರಾಮಯ್ಯ

ಈ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದೆ. ಕಾನೂನು ತಜ್ಞರು ರೈತರನ್ನು ಮುಂಚೆಯೇ ಮಾತನಾಡಬೇಕಿತ್ತು. ಗಡಿ, ನೆಲ ಜಲ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಮೂರ್ತಿ ಶಿವರಾಜ ಪಾಟಿಲ್ ಪರಿಣಿತರಿದ್ದಾರೆ‌ ಅವರನ್ನು‌ ಕರೆದು ಮಾತನಾಡಿಸಬೇಕಿತ್ತು. ಇನ್ನೂ ಅನೇಕ ಕಾನೂನು ತಜ್ಞರಿದ್ದಾರೆ. ಅವರೊಡನೆ ಮಾತಬಾಡಬೇಕಿತ್ತು ಎಂದರು.

ಕಾವೇರಿ ನದಿ ನೀರಿಗಾಗಿ ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಮ್ಮ ಬಿಜೆಪಿ ಬೆಂಬಲ ಇರುತ್ತದೆ. ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ದಿ ಬಂದಿದೆ. ತಮಿಳುನಾಡಿಗೆ ಈಗ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ಸ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ‌ ಬಂದಿದೆ ಎಂದರು.

Breaking: ಎರಡೆರಡು ಬಂದ್‌ ಮಾಡಿದರೂ ತಲೆಕೆಡಿಸಿಕೊಳ್ಳದ ಪ್ರಾಧಿಕಾರ, ನೀರು ಬಿಡಿ ಎಂದು ಕರ್ನಾಟಕಕ್ಕೆ ಮತ್ತೆ ಸೂಚನೆ!

ಬರ ಪರಿಹಾರ ನೀಡಲಿ:  ರಾಜ್ಯದಲ್ಲಿ ಬರಗಾಲ ಇದ್ದಾಗ ಇಂತಹ ಸರ್ಕಾರ ಇರೋದು ದುರಂತ‌.  ಉತ್ತರ ಕರ್ನಾಟಕದ ನೂರಾರು ತಾಲೂಕುಗಳಲ್ಲಿ ಬರ ಇದೆ. ಇದಕ್ಕೂ ಇವರು ಕೇಂದ್ರದ ಕಡೆಗೆ ಬೆರಳು ತೋರಿಸುತ್ತಾರೆ. ಪ್ರವಾಹ ಬಂದಾಗ ನಾವೇ ಪರಿಹಾರ ಕೊಟ್ಟಿದ್ದೇವೆ. ಕೇಂದ್ರದ ಪರಿಹಾರಕ್ಕಿಂತ ಎರಡು ಪಟ್ಟು ಹಣ ಕೊಟ್ಡಿದ್ದೆವೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಯಾವ ರೀತಿ ವರ್ತಿಸುತ್ತಿದೆ. ಅನ್ನುವುದರ ಮೇಲೆ ಸರ್ಕಾರದ ನಡೆ ಗೊತ್ತಾಗುತ್ತಿದೆ ಎಂದು ಹೇಳಿದರು.

ಇನ್ನು  ಕೋಲಾರದಲ್ಲಿ ಈದ ಮಿಲಾದ್ ಸಂದರ್ಭದಲ್ಲಿ ಖಡ್ಗ ಹಿಡಿದು ಮೆರವಣಿಗೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆಡಳಿತ ಹೇಗಿರುತ್ತದೆಯೋ ಹಾಗೆ ಇಂತವರ ಆಟಗಳು ನಡೆಯುತ್ತವೆ. ಈಗ ಗೂಂಡಾಗಳಿಗೆ, ಗಲಾಟೆ ಮಾಡುವವರಿಗೆ ಯಾವುದೇ ಭಯ ಇಲ್ಲ. ಹೀಗಾಗಿ ಮುಕ್ತವಾಗಿ ಈ ರೀತಿ ತಿರುಗಾಡುವಂತಾಗಿದೆ ಎಂದು ಹೇಳಿದರು.

Follow Us:
Download App:
  • android
  • ios