Asianet Suvarna News Asianet Suvarna News

ಕೋವಿಡ್‌ ಹೆಚ್ಚಳ ಹಿನ್ನೆಲೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಗೈಡ್‌ಲೈನ್ಸ್‌ ಹೊರಡಿಸಿದ ಕರ್ನಾಟಕ

ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಸರ್ಕಾರ  ಸುತ್ತೋಲೆ ಹೊರಡಿಸಿದೆ. ಜೊತೆಗೆ  ಸಾರ್ವಜನಿಕರು ಸಲಹಾ ಸೂಚನೆ ಪಾಲಿಸುವಂತೆ ಮನವಿ ಮಾಡಿಕೊಂಡಿದೆ.
 

karnataka government guidelines for COVID-19 scare gow
Author
First Published Dec 19, 2023, 12:36 PM IST

ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಮುಂಜಾಗ್ರತಾ ಕ್ರಮಗಳ ಕುರಿತು ಸರ್ಕಾರ  ಸುತ್ತೋಲೆ ಹೊರಡಿಸಿದೆ. ಜೊತೆಗೆ  ಸಾರ್ವಜನಿಕರು ಸಲಹಾ ಸೂಚನೆ ಪಾಲಿಸುವಂತೆ ಮನವಿ ಮಾಡಿಕೊಂಡಿದೆ.

ಸರ್ಕಾರದ ಸುತ್ತೋಲೆ ಇಂತಿದೆ: 
1. ಭಾರತ ಸರ್ಕಾರದ ಮಾರ್ಗಸೂಚಿಗಳ ಅನ್ವಯ, ಅನಗತ್ಯ ಗಾಬರಿಯಿಂದ ಈಗಲೇ ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಸರ್ವೇಕ್ಷಣೆಯನ್ನು ಹೆಚ್ಚಿಸುವುದು ಅಥವಾ ನಿರ್ಬಂಧಗಳನ್ನು ಹೇರುವ ಅವಶ್ಯಕತೆಯಿರುವುದಿಲ್ಲ

2. ಆದಾಗ್ಯೂ, ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಎಚ್ಚರಿಕೆಯಿಂದ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ನಡೆಸುವುದು ಹಾಗೂ ವರದಿ ಸಲ್ಲಿಸುವುದು ಅಗತ್ಯವಾಗಿದೆ

3. ಸರ್ಕಾರಿ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ, ಎಲ್ಲಾ SARI ಪ್ರಕರಣಗಳು ಹಾಗೂ 20 ILI ಪ್ರಕರಣಗಳ ಪೈಕಿ 1 ILI ಪ್ರಕರಣವನ್ನು ಕೋವಿಡ್ -19 ಪರೀಕ್ಷೆಗೆ ಒಳಪಡಿಸಬೇಕು

4. ಈ ಕೆಳಕಂಡ ಪ್ರಕರಣಗಳ ಮಾದರಿಗಳನ್ನು Whole genome sequencing (WGS) ಪರೀಕ್ಷೆಗೆ ರವಾನಿಸಬೇಕು

A. ಅಂತರರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್ -19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು (irrespective of Ct value are to be sent for WGS).

B.ಗುಂಪು - ಗುಂಪಾಗಿ ವರದಿಯಾಗುವ ಪ್ರಕರಣಗಳು / ಹೆಚ್ಚು ಪ್ರಕರಣಗಳು ಮತ್ತು ಹಾಗೂ ಅಥವಾ ಮರಣಗಳು ವರದಿಯಾಗುವ ಫೋಕಲ್ ಔಟ್ ಬ್ರೇಕ್ ಗಳ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು WGS ಪರೀಕ್ಷೆಗೆ ಕಳುಹಿಸಬೇಕು.

C.ತೀವ್ರ ಸ್ವರೂಪದ ರೋಗಲಕ್ಷಣಗಳನ್ನು ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, SARI ಪ್ರಕರಣಗಳು ಹಾಗೂ ಸುದೀರ್ಘ ಅವಧಿಯವರೆಗೆ ಆಸ್ಪತ್ರೆಯಲ್ಲಿ ದಾಖಲಾದ ಪ್ರಕರಣಗಳು

D. ಕೋವಿಡ್ - 19 ನ ಮರು ಸೋಂಕಿಗೆ ಒಳಗಾದವರು

E. ಕೋವಿಡ್ 19 ಲಸಿಕೆಯ ಎರಡು ಡೋಸ್ ವ್ಯಾಕ್ಸಿನ್ ಪಡೆದ ನಂತರವೂ ಕೋವಿಡ್ 19ನ ಸೋಂಕು ದೃಢಪಟ್ಟವರು.

F. ಕೋವಿಡ್ 19 ಮರಣ ಪ್ರಕರಣಗಳು

G. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವರದಿಯಾಗುವ 25 ಕ್ಕಿಂತ ಕಡಿಮೆ Ct value ಇರುವ ಮಾದರಿಗಳನ್ನು (ಅಂತರ ರಾಷ್ಟ್ರೀಯ ಪ್ರಯಾಣ ಹಿನ್ನೆಲೆಯುಳ್ಳವರನ್ನು ಹೊರತು ಪಡಿಸಿ) BMC&RJ ಬೆಂಗಳೂರು, ಇಲ್ಲಿಗೆ WGS ಪರೀಕ್ಷೆಗೆ ಕಳುಹಿಸುವ ನಿಟ್ಟಿನಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಅಗತ್ಯ ಸಮನ್ವಯವನ್ನು ವಹಿಸಬೇಕು

ಇನ್ನು ಸಾರ್ವಜನಿಕರಿಗೆ ಸಲಹಾ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ ಕೆಲವೊಂದು ನಿಮಯ ಪಾಲಿಸುವಂತೆ ಹೇಳಿದೆ.

ಸಾರ್ವಜನಿಕರು ಸಲಹಾ ಸೂಚನೆ ಪಾಲಿಸುವಂತೆ ಮನವಿ

1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು

2. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ

3. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. 

4. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.

5. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ

6. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.

7. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ 

8. ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

 

Latest Videos
Follow Us:
Download App:
  • android
  • ios