ವೀರಶೈವ ಲಿಂಗಾಯತರಿಗೆ ಬಂಪರ್‌ ಗಿಫ್ಟ್‌: ಶೈಕ್ಷಣಿಕ, ಸ್ವಯಂ ಉದ್ಯೋಗ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದವರಿಗೆ ನಿಗಮದ ವಿವಿಧ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Karnataka Government has invited applications to get loan facility for Veerashaiva Lingayats sat

ಬೆಂಗಳೂರು (ಅ.03): ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ಧಿಗಾಗಿ 2023-24ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ವಿವಿಧ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಸಾಲ ಯೋಜನೆಗಳಾದ ಬಸವ ಬೆಳಗು ಯೋಜನೆ (Fresh Students)ಯನ್ನು ವೀರಶೈವ-ಲಿಂಗಾಯತ  ಸಮುದಾಯಕ್ಕೆ ಸೇರಿದ ಹಾಗೂ ಕುಟುಂಬ ವಾರ್ಷಿಕ ಆದಾಯ ರೂ.3.50 ಲಕ್ಷ ಮಿತಿಯಲ್ಲಿರುವ ವೃತ್ತಿಪರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಶೇ.2 ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಇನ್ನು ಬಸವ ಬೆಳಗು ಯೋಜನೆ'ಯ 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದ ಸರ್ಕಾರ

ವಿದೇಶ ವಿದ್ಯಾವಿಕಾಸ ಯೋಜನೆ (Fresh Students): ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬ ವಾರ್ಷಿಕದ ಆದಾಯ 1 ಲಕ್ಷ ರೂ. ಮಿತಿಯಲ್ಲಿರುವ ವಿದ್ಯಾರ್ಥಿಗಳು, 25 World Ranking 500 ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಕೆಟ್ ಡಿ, ಮಾನ್ಸರ್ ಕೋರ್ಸ್ ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ 10 ಲಕ್ಷ ರೂ. ನಂತೆ 3 ವರ್ಷದ ಅವರಿಗೆ ಒಟ್ಟು 10 ಲಕ್ಷ ರೂ.ಗಳನ್ನು ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.  ವಿದೇಶ ವಿದ್ಯಾವಿಕಾಸ ಯೋಜನೆಯ 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.

ಜೀವಜಲ ಯೋಜನೆ: ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂ. ಗಳ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಕಾಯಕಕಿರಣ ಯೋಜನೆಯಡಿ ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಈ ಕೆಳಕಂಡಂತೆ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.1,00,000/- ಗಳಿಗೆ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಠ ರೂ.80,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡುವುದು. ಘಟಕ ವೆಚ್ಚ ರೂ.2,00,000/- ಗಳಿಗೆ ಶೇ.15ರಷ್ಟು ಗರಿಷ್ಠ ರೂ.10,000/-ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ.15ರಷ್ಟು ಗರಿಷ್ಠ ರೂ.1,70,000/-ಗಳನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡುವುದು.

ವಿಭೂತಿ ಘಟಕ, ಖಾನಾವಳಿ ತೆರೆಯಲು ಸಾಲ ಸೌಲಭ್ಯ: ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸುವವರಿಗೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳು ಮತ್ತು 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು, ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂ. 4.00 ಲಕ್ಷ ಇದರಲ್ಲಿ ರೂ.3,60,000/- "ನಾಟ ಮತ್ತು ರೂ. 40,000/- ಸಹಾಯಧನ ವಾರ್ಷಿಕ ಬಡ್ಡಿದರ ಶೇರ್ತ ದರದಲ್ಲಿ ನೆರವು ನೀಡಲಾಗುವುದು. ಭೋಜನಾಲಯ ಕೇಂದ್ರ ಸ್ಥಾಪನೆಗೆ ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು, ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5.00 ಲಕ್ಷ ಇದರಲ್ಲಿ ರೂ.4,60,000/- ಸಾಲ ಮತ್ತು ರೂ.10,000/- ಸಹಾಯಧನ ನೆರವು ನೀಡಲಾಗುವುದು. ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20+30 ಅಳತೆಯುಳ್ಳ ನಿವೇಶನ ಹೊಂದಿರಬೇಕು.

ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ: ಮಕ್ಕಳನ್ನು ಬೇಗನೆ ಎಬ್ಬಿಸಿ ಶಾಲೆಗೆ ಕಳಿಸುವುದು ಪೋಷಕರ ಜವಾಬ್ದಾರಿ!

ಹಳದಿ ಬೋರ್ಡ್‌ ಕಾರು ಖರೀದಿಗೆ ಲೋನ್‌ ವ್ಯವಸ್ಥೆ: ಸ್ವಾವಲಂಭಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಯಡಿ ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರ ವಾಹನ (ಹಳದಿ ಬೊರ್ಡ್) ಖರೀದಿಗೆ' ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 300 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು, ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿದರದಲ್ಲಿ ಸಾಲ ಪಡೆಯುವುದು.

ಕೃಷಿ ಅವಲಂಬಿತ ಚಟುವಟಿಕೆಗೆ ಸಾಲ ಸೌಲಭ್ಯ: ಸ್ವಯಂ ಉದ್ಯೋಗ ಸಾಲ ಯೋಜನೆಯಡಿ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ/ ಕೃಷಿ ಅವಲಂಬಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಅರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.20 ರಷ್ಟು ಅಥವಾ ಗರಿಷ್ಟ ರೂ. 100 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

ಇಲ್ಲಿದೆ ಅರ್ಜಿ ಹಾಕುವ ಲಿಂಕ್‌: ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗಳು ಅಕ್ಟೋಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522/ 9900012351 ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)ದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios