Asianet Suvarna News Asianet Suvarna News

ಕನ್ನಡ ರಾಜ್ಯೋತ್ಸವ ವೇಳೆ 5 ಕನ್ನಡಗೀತೆ ಹಾಕುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಸರ್ಕಾರದ ವತಿಯಿಂದ ಆಚರಿಸಲಾಗುವ ರಾಜ್ಯೋತ್ಸವ ವೇಳೆ 5ಕನ್ನಡ ಗೀತೆಗಳನ್ನು ಹಾಕುವುದು ಕಡ್ಡಾಯಗೊಳಿಸಲಾಗಿದೆ. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಎಲ್ಲಾದರೂ ಇರು.. ಎಂಬ ಗೀತೆಗಳು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

Karnataka government has made it mandatory to play 5 Kannada songs during the Kannada Rajyotsava rav
Author
First Published Oct 21, 2023, 5:10 AM IST

ಬೆಂಗಳೂರು ಅ.21: ಸರ್ಕಾರದ ವತಿಯಿಂದ ಆಚರಿಸಲಾಗುವ ರಾಜ್ಯೋತ್ಸವ ವೇಳೆ 5ಕನ್ನಡ ಗೀತೆಗಳನ್ನು ಹಾಕುವುದು ಕಡ್ಡಾಯಗೊಳಿಸಲಾಗಿದೆ. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಎಲ್ಲಾದರೂ ಇರು.. ಎಂಬ ಗೀತೆಗಳು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ನಾಟಕ ಸಂಭ್ರಮ 50ರ ಹಿನ್ನೆಲೆಯಲ್ಲಿ 'ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ. 

ಬೆಳಗಾವಿ: ಆರೋಗ್ಯದ ಹೆಸರಲ್ಲಿ ಮಹಾಕುತಂತ್ರ; ಎಚ್ಚೆತ್ತುಕೊಳ್ಳಬೇಕಿದೆ ಸಿದ್ದು ಸರ್ಕಾರ!

ನ.1 ರಂದು ರಾಜ್ಯದೆಲ್ಲೆಡೆ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ 50 ಅಭಿಯಾನದ ಅಂಗವಾಗಿ ಆಯ್ಕೆ ಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತೆ ಗಾಯನ) ಸಲ್ಲಿಸಬೇಕು.

ರಾಜ್ಯದ ಎಲ್ಲಾ ಜಿಲ್ಲಾಮಟ್ಟ, ತಾಲೂಕುಮಟ್ಟ ಹಾಗೂ ಗ್ರಾಮಪಂಚಾಯಿತಿಗಳಲ್ಲಿ ನ.1ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು (ಹುಯಿಳಗೋಳ ನಾರಾಯಣರಾಯರು), ಎಲ್ಲಾದರೂ ಇರು ಎಂತಾದರು ಇರು (ಕುವೆಂಪು), ಒಂದೇ ಒಂದೇ ಕರ್ನಾಟಕ ಒಂದೇ (ದ. ರಾ. ಬೇಂದ್ರೆ), ಹೊತ್ತಿತೋ ಹೊತ್ತಿತು ಕನ್ನಡ ದೀಪ (ಸಿದ್ದಯ್ಯ ಪುರಾಣಿಕ) ಮತ್ತು ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ (ಚನ್ನವೀರ ಕಣವಿ) ಗೀತೆಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಮಾತೆಯ ಅಧಿಕೃತ ಚಿತ್ರ ಶೀಘ್ರ ಬಿಡುಗಡೆ

5 ಕನ್ನಡ ಹಾಡುಗಳು:

1 ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಳಗೋಳ ನಾರಾಯಣ ರಾಯರು
2 ಎಲ್ಲಾದರೂ ಇರು ಎಂತಾದರು ಇರು - ಕುವೆಂಪು
3 ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ
4 ಹೊತ್ತಿತೋ ಹೊತ್ತಿತು ಕನ್ನಡ ದೀಪ - ಸಿದ್ದಯ್ಯ ಪುರಾಣಿಕ
5 ಹೆಸರಾಯಿತು ಕರ್ನಾಟಕ - ಚನ್ನವೀರ ಕಣವಿ..

Follow Us:
Download App:
  • android
  • ios