Asianet Suvarna News Asianet Suvarna News

ರಾಜ್ಯದ 11 ಹಿರಿಯ ಐಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ಕಾಂಗ್ರೆಸ್‌ ಸರ್ಕಾರ

ರಾಜ್ಯದಲ್ಲಿ ಸಚಿವ ಸಂಪುಟ ಕಸರತ್ತನ್ನು ಪೂರ್ಣಗೊಳಿಸಿದ ರಾಜ್ಯ ಸರ್ಕಾರ ಮಂಗಳವಾರ 11 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Karnataka government has transferred 11 senior IAS officers sat
Author
First Published Jun 6, 2023, 8:12 PM IST

ಬೆಂಗಳೂರು (ಜೂ.06): ರಾಜ್ಯದಲ್ಲಿ ಸಚಿವ ಸಂಪುಟ ಕಸರತ್ತನ್ನು ಪೂರ್ಣಗೊಳಿಸಿದ ರಾಜ್ಯ ಸರ್ಕಾರ ಕಳೆದ ವಾರ 6 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಈಗ ಪುನಃ ಮಂಗಳವಾರ 11 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಸಚಿವಾಲಯಗಳ ಮುಖ್ಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಸಚಿವರು ಆಪ್ತ ಮತ್ತು ದಕ್ಷ ಅಧಿಕಾರಿಗಳನ್ನು ತಮ್ಮ ಇಲಾಖೆಗಳಿಗೆ ನಿಯೋಜನೆ ಮಾಡಿಕೊಂಡಿದ್ದಾರೆ.

ಕೃಷಿ ಇಲಾಖೆಗೆ ವಿ. ಅನ್ಬುಕುಮಾರ್, ಪಾಟೀಲ್ ಯಲಗೌಡ ಶಿವನಗೌಡ ಸಾರಥಿಗಳು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್​ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರನ್ನು ಬೆಂಗಳೂರಿನ ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಈ ಹುದ್ದೆಯನ್ನು ರವಿಶಂಕರ್ ಜೆ ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ತುಮಕೂರು ಉಪ ಜಿಲ್ಲಾಧಿಕಾರಿ ಪಾಟೀಲ್ ಯಲಗೌಡ ಶಿವನಗೌಡ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ಶರತ್ ಬಿ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು.

ರಾಜ್ಯದ ವಿಧಾನಪರಿಷತ್‌ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.30 ಮತದಾನ

ತೋಟಗಾರಿಕರ ಇಲಾಖೆಗೆ ಮೋಹನ್ ರಾಜ್ ಕೆ.ಪಿ. ವರ್ಗ:
ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಯನ್ನಾಗಿ ಮೋಹನ್ ರಾಜ್ ಕೆ.ಪಿ.ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ರಾಜೇಂದ್ರ ಕುಮಾರ್ ಕಟಾರಿಯಾ ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು.

ಪ್ರವಾಸೋದ್ಯಮ ಇಲಾಖೆಗೆ ಕಪಿಲ್‌ ಮೋಹನ್:
ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಪಿಲ್ ಮೋಹನ್ ಅವರನ್ನು ನೇಮಿಸಲಾಗಿದೆ. ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ನಿಭಾಯಿಸುತ್ತಿದ್ದರು. 

ಶಿಕ್ಷಣ ಇಲಾಖೆಗೆ ಉಮಾಶಂಕರ್‌: 
ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. 

ಸಹಕಾರ ಇಲಾಖೆಗೆ ಮಂಜುನಾಥ್‌ ಪ್ರಸಾದ್‌: ಉಮಾಶಂಕರ್ ಎಸ್.ಆರ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಎನ್. ಮಂಜುನಾಥ ಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ವರ್ಗ: ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್ಎಂಇ ಮತ್ತು ಗಣಿ) ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯನ್ನು ಪಂಕಜ್ ಕುಮಾರ್ ಪಾಂಡೆ ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು.

ಬೆಂಗಳೂರು ಉಪನಗರ ರೈಲು ಯೋಜನೆ ಮೈಸೂರು, ಕೋಲಾರಕ್ಕೂ ವಿಸ್ತರಣೆ

  • ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯ ಗಿರೀಶ್ ಆರ್. ಅವರನ್ನು ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
  • ಅಟಲ್ ಸ್ನೇಹಿ ಕೇಂದ್ರ (AJSK)ದ ನಿರ್ದೇಶಕ ಸ್ಥಾನಕ್ಕೆ ಕರೀಗೌಡ ಅವರನ್ನು ನೇಮಿಸಿ ಆದೇಶಿಸಲಾಗಿದೆ. 
  • ಜಗದೀಶ ಜಿ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. 
  • ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯರನ್ನಾಗಿ  ಡಾ. ಎಂ. ಮಹೇಶ್ ಅವರನ್ನು ನೇಮಿಸಲಾಗಿದೆ.
Follow Us:
Download App:
  • android
  • ios