ಮದ್ಯ ಮಾರಾಟಗಾರರ ಸಂಘದ ಒಕ್ಕೂಟ ನಡೆಸುತ್ತಿರುವ ಪ್ರತಿಭಟನೆ ಮೇ 17ರಂದು ಮಂಗಳವಾರ ಸಚಿವ ಕೆ.ಗೋಪಾಲಯ್ಯ ನೇತೃತ್ವದಲ್ಲಿ ಸಂಧಾನ ಸಭೆ ‘ಇ-ಇಂಡೆಂಟಿಂಗ್’ ವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳ ಚರ್ಚೆ
ಬೆಂಗಳೂರು(ಮೇ.16): ಕೆಎಸ್‌ಬಿಸಿಎಲ್ ಪ್ರಾರಂಭಿಸಿರುವ ‘ಇ-ಇಂಡೆಂಟಿಂಗ್’ ವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಮದ್ಯ ಮಾರಾಟಗಾರರ ಸಂಘದ ಒಕ್ಕೂಟ ನಡೆಸುತ್ತಿರುವ ಪ್ರತಿಭಟನೆಗೆ ಕೊನೆಗೂ ಸ್ಪಂದಿಸಿರುವ ಅಬಕಾರಿ ಇಲಾಖೆ, ಮೇ 17ರಂದು ಮಂಗಳವಾರ ಸಚಿವ ಕೆ.ಗೋಪಾಲಯ್ಯ ನೇತೃತ್ವದಲ್ಲಿ ಸಂಧಾನ ಸಭೆ ಕರೆದಿದೆ.
ಇ-ಇಂಡೆಂಟಿಗ್ ವ್ಯವಸ್ಥೆಯಲ್ಲಿರುವ ತಾಂತ್ರಿಕ ಲೋಪಸರಿಪಡಿಸುವವರೆಗೂ ಕನಿಷ್ಠ 3 ತಿಂಗಳು ಹಳೆಯ ವ್ಯವಸ್ಥೆ ಮುಂದುವರೆಸಬೇಕು. ಈ ವೇಳೆಗೆ ಹೊಸ ವ್ಯವಸ್ಥೆಯಲ್ಲಿನ ಲೋಪ ಸರಿಪಡಿಸಬೇಕು. ಇ-ಇಂಡೆಂಟ್‌ನಲ್ಲಿ ರಾತ್ರಿ 9 ರಿಂದ ಬೆಳಗ್ಗೆ 9 ಗಂಟೆವರೆಗೆ ಮಾತ್ರ ಇಂಡೆಂಟ್ ಸಲ್ಲಿಸಲು ಅವಕಾಶ ನೀಡಿದ್ದು, ಇದನ್ನು ಬದಲಿಸಬೇಕು. ಬ್ರ್ಯಾಂಡ್ ಕೋಡ್‌ಗಳಲ್ಲಿ ಸಮಸ್ಯೆಯಾಗುತ್ತಿದೆ. ಮದ್ಯ ಹಾಗೂ ಬಿಯರ್ ಹಂಚಿಕೆ (ಅನುಪಾತ) ಸರಿಯಿಲ್ಲ. ಸನ್ನದುದಾರರಿಗೆ ಹಾಗೂ ಡಿಪೋ ವ್ಯವಸ್ಥಾಪಕರಿಗೆ ಎಡಿಟಿಂಗ್‌ಗೆ ಅವಕಾಶವಿಲ್ಲ. ಈ ಎಲ್ಲಾ ಸಮಸ್ಯೆ ಬಗೆಹರಿಸಬೇಕು ಎಂದು ಸಚಿವರ ಗಮನಕ್ಕೆ ತರಲಿದ್ದೇವೆ. ಇಲಾಖೆ ಸ್ಪಂದಿಸದಿದ್ದರೆ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ ಹೇಳಿದ್ದಾರೆ.
ಎಲೆಕ್ಟ್ರಿಸಿಟಿ ಬದಲು 'ಎಣ್ಣೆ' ಉತ್ಪಾದಿಸೋ ಜನರೇಟರ್..ಸ್ಮಗ್ಲರ್ ಗಳ ಐಡಿಯಾ ಕಂಡು ಪೊಲೀಸರೇ ಕಂಗಾಲು!
ಕರ್ನಾಟಕ ರಾಜ್ಯ ಪಾನೀಯ ನಿಗಮದ (ಕೆಎಸ್‌ಬಿಸಿಎಲ್) ‘ಇ-ಇಂಡೆಂಟಿಂಗ್’ ವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸುವಂತೆ ಮದ್ಯ ಮಾರಾಟಗಾರರ ಒಕ್ಕೂಟವು ಮಾಚ್‌ರ್ ತಿಂಗಳಿಂದ ಸತತವಾಗಿ ಕೆಎಸ್‌ಬಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು, ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರೂ ಇಲಾಖೆ ಕನಿಷ್ಠ ಸಮಸ್ಯೆ ಕೇಳುವ ಸೌಜನ್ಯವನ್ನೂ ತೋರಿಲ್ಲ.
ಹೀಗಾಗಿ ಮೇ 6 ರಂದು ಶುಕ್ರವಾರ ಕಲಬುರಗಿ, ಮೇ 10 ರಂದು ಬೆಳಗಾವಿ, ಮೇ 12 ರಂದು ಮೈಸೂರು ಹಾಗೂ ಮಂಗಳೂರು ವಿಭಾಗಗಳಲ್ಲಿ ತಲಾ ಒಂದು ದಿನ ಕೆಎಸ್‌ಬಿಸಿಎಲ್ ಡಿಪೋಗಳಿಂದ ಮದ್ಯ ಖರೀದಿ ಮಾಡದೆ ಬಹಿಷ್ಕರಿಸುವ ಮೂಲಕ ಸಾಂಕೇತಿಕವಾಗಿ ಪ್ರತಿಭಟಿಸಿದ್ದೆವು. ಜತೆಗೆ ಮೇ 17 ರಂದು ಬೆಂಗಳೂರು ವಿಭಾಗದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳು ಹಾಗೂ ಮೇ 19 ರಂದು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮದ್ಯ ಖರೀದಿ ಮಾಡದಿರಲು ನಿರ್ಧರಿಸಿದ್ದೆವು. ಇದರ ನಡುವೆ ಸಚಿವರ ಸೂಚನೆಯಂತೆ ಮಂಗಳವಾರ ಸಭೆಗೆ ಹಾಜರಾಗಲು ಸೂಚನೆ ಬಂದಿದೆ. ಸಭೆಯಲ್ಲಿ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಲಿದ್ದು, ಸ್ಪಂದಿಸದಿದ್ದರೆ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
ನಶೆ ಏರುತ್ತಿಲ್ಲ ಎಂದು ಕುಡುಕನ ದೂರು: ತನಿಖೆಗೆ ಆದೇಶ
18 ರಿಂದ 20 ರವರೆಗೆ ಮದ್ಯ ಮಾರಾಟ ನಿಷೇಧ
ಮೈಸೂರು ಗ್ರಾಮ ಪಂಚಾಯತ್ ಉಪಚುನಾವಣೆ 2022ರ ಮತದಾನವು ಮೇ 20 ರಂದು ನಡೆಯಲಿರುವ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಗಿನವಾಳು ಮತ್ತು ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ವಿಧದ ಮಧ್ಯ ತಯಾರಿಕೆ ಮಾರಾಟ ಶೇಖರಣೆ, ಅನಧಿಕೃತ ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ, ಶಾಂತಿಯುತವಾಗಿ ಕಾನೂನು ಸುವವ್ಯಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮೇ 18ರ ಸಂಜೆ 5 ಗಂಟೆಯಿಂದ ಮೇ 20 ಸಂಜೆ 5 ಗಂಟೆಯವರೆಗೆ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶಿಸಿದ್ದಾರೆ.
