ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ 6 ಕಂಡೀಷನ್ ಹಾಕಿ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್‌ ಸಂಚಾರಕ್ಕೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. ಸ್ಮಾರ್ಟ್ ಕಾರ್ಡ್ ನೀಡುವ ತನಕ ಆಧಾರ ಕಾರ್ಡ್ ಸಹಿತ ಗುರುತಿನ ಕಾರ್ಡ್ ತೋರಿಸಿ ಪ್ರಯಾಣ ಮಾಡಬಹುದು.

Karnataka government released guidelines for free bus travel for women kannada news gow

ಬೆಂಗಳೂರು (ಜೂ.5): ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್‌ ಸಂಚಾರದ ಶಕ್ತಿ ಯೋಜನೆಗೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. 6 ಕಂಡೀಷನ್ ಹಾಕಿ ಈ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.  ರಾಜ್ಯದೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇದ್ದು, ಐಷಾರಾಮಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಬಿಎಂಟಿಸಿ ಬಸ್ಸುಗಳಲ್ಲಿ ಮಾತ್ರ ಪುರುಷರಿಗೆ ಶೇ. 50 ಮೀಸಲು ಆಸನ ಇಲ್ಲ. ಉಳಿದ ಎಲ್ಲಾ ನಿಗಮಗಳ ಬಸ್ಸುಗಳಲ್ಲಿ ಪುರುಷರಿಗೆ ಶೇ. 50 ಮೀಸಲು ಇಡಲು ಆದೇಶ ಹೊರಡಿಸಿದ್ದು, ಪುರುಷರಿಗೆ ಆಸನ ಮೀಸಲಿಟ್ಟಿರುವುದು  ದೇಶದಲ್ಲೇ ಮೊದಲಾಗಿದೆ. ಇನ್ನು ಮಹಿಳೆಯರ ಉಚಿತ ಪ್ರಯಾಣಕ್ಕೆ  ಮೂರು ತಿಂಗಳ ಅವಧಿಯೊಳಗೆ ಸ್ಮಾರ್ಟ್ ಕಾರ್ಡ್ ನೀಡಲು ತಿರ್ಮಾನ ತೆಗೆದುಕೊಳ್ಳಲಾಗಿದೆ. ಸ್ಮಾರ್ಟ್ ಕಾರ್ಡ್ ನೀಡುವ ತನಕ ಆಧಾರ ಕಾರ್ಡ್ ಸಹಿತ ಕೇಂದ್ರ ಸರ್ಕಾರ ವಿತರಿಸಿರುವ ಗುರುತಿನ ಕಾರ್ಡ್ ತೋರಿಸಿ ಪ್ರಯಾಣ ಮಾಡಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಉಚಿತ ಪ್ರಯಾಣಕ್ಕೆ 6 ಕಂಡೀಷನ್ ಹಾಕಿ ಯೋಜನೆಯ ಆದೇಶ ಹೊರಡಿಸಿದ ಸರ್ಕಾರ:

  • ರಾಜ್ಯದೊಳಗೆ ಸಂಚರಿಸುವ ಬಸ್ಸುಗಳಲ್ಲಿ ಮಾತ್ರ ಜಾರಿ
  • ಐಷಾರಾಮಿ ಬಸ್ಸುಗಳಾದ ರಾಜಹಂಸ, ಎಸಿ, ಸ್ಲೀಪರ್, ವಾಯುವಜ್ರ ದಂತಹ ಬಸ್ಸುಗಳಲ್ಲಿ ಯೋಜನೆ ಅನ್ವಯಿಸುವುದಿಲ್ಲ
  • ಬಿಎಂಟಿಸಿ ಬಸ್ಸು ಬಿಟ್ಟು, ಮಿಕ್ಕ ಎಲ್ಲಾ ನಿಗಮಗಳ ಬಸ್ಸುಗಳಲ್ಲಿ ಪುರುಷರಿಗೆ ಶೇ. 50 ಮೀಸಲು ಕಡ್ಡಾಯ.
  • ಫ್ರೀ ಪ್ರಯಾಣದ ವೆಚ್ಚವನ್ನು ಶೂನ್ಯ ಟಿಕೆಟ್ ಹಾಗೂ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಭರಿಸಲಾಗುವುದು.
  • ಮೂರು ತಿಂಗಳಲ್ಲಿ ಸೇವಾ ಸಿಂಧು ಕೇಂದ್ರಗಳಲ್ಲಿ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಣೆ
  • ಸ್ಮಾರ್ಟ್ ಕಾರ್ಡ್ ಸಿಗುವ ತನಕ ಕರ್ನಾಟಕ ಸರ್ಕಾರ ಅಥವಾ ಕೇಂದ್ರ ಸರ್ಕಾರ ವಿತರಿಸಿರುವ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಲು ಅನುಮತಿ.

.ಪಂಚ ಗ್ಯಾರಂಟಿಗಳಿಗೆ ಮುಹೂರ್ತ ಫಿಕ್ಸ್ : ಎಲ್ಲಾ ಯೋಜನೆಗಳಿಗೆ ಒಂದೇ ಕಡೆ ಅರ್ಜಿ ಸಲ್ಲಿಸಬಹುದಾ..?

ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ"ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ಸರಕಾರ ನೀಡಿದೆ.  'ಶಕ್ತಿ ಯೋಜನೆ"ಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳ  ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಅದರಂತೆ ಈ ಕೆಳಗಿನ ನಾಲ್ಕು ಬಸ್‌ಗಳಲ್ಲಿ ಪ್ರಯಾಣಿಸಬಹುದು. 
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ),
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬೆಂ.ಮ.ಸಾ.ಸಂಸ್ಥೆ),
ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ) 
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ)

Congress guarantee: 11ರಿಂದ ಬಸ್‌ಗಳಲ್ಲಿ ಮಹಿಳೆಯರಿಗೆ ಪ್ರಯಾಣ ಫ್ರೀ; ಆದ್ರೂ ಸಿಗುತ್ತೆ ಟಿಕೆಟ್!

ಇದಕ್ಕೂ ಮುನ್ನ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಜೂನ್ 11 ರಿಂದ ಉಚಿತ ಪ್ರಯಾಣಕ್ಕೆ ಚಾಲನೆ ನೀಡಲಿದ್ದೇವೆ. ವಿಧಾನಸೌಧದ ಮುಂಭಾಗದಲ್ಲೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತೇವೆ. ಸಾರಿಗೆ ಇಲಾಖೆಯ ನಿವೃತ್ತ ನೌಕರರಿಗೆ ಉಚಿತ ಬಸ್ ಪಾಸ್ ವಿಚಾರದ ಬಗ್ಗೆ ಬೇಡಿಕೆಯಿದೆ ಈ ಬಗ್ಗೆ ಮಾತಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. 

Latest Videos
Follow Us:
Download App:
  • android
  • ios