ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದತಿಗೆ ಸಿಎಂ ಸೂಚನೆ. ಅನ್ನಭಾಗ್ಯ ಯೋಜನೆಯಲ್ಲಿ ಪೌಷ್ಟಿಕ ಆಹಾರ ಕಿಟ್‌ಗಳ ಪರಿಚಯ. ಪರಿಶಿಷ್ಟ ಜಾತಿ-ಪಂಗಡಗಳಿಗೆ ಹೊಸ ನ್ಯಾಯಬೆಲೆ ಅಂಗಡಿಗಳ ಹಕ್ಕು.

ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಆಹಾರ ಇಲಾಖೆಯ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಆಹಾರ ಸಚಿವ ಮುನಿಯಪ್ಪ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಪತ್ರಿಕೆಗಳಲ್ಲಿ ಬಂದ ವರದಿಗಳ ಹಿನ್ನೆಲೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ವಿಚಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಯಿತು. “ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಯಾವುದೇ ತೊಂದರೆ ಆಗಬಾರದು, ಬದಲಿಗೆ ಅವರಿಗೆ ಸುಲಭವಾಗಿ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಆದರೆ ಅನರ್ಹ ಕಾರ್ಡ್‌ಗಳನ್ನು ಯಾವುದೇ ಮುಲಾಜಿಲ್ಲದೆ ತಕ್ಷಣವೇ ರದ್ದುಪಡಿಸಬೇಕು” ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅನ್ನಭಾಗ್ಯ ಯೋಜನೆಗೆ ಹೊಸ ರೂಪರೇಖೆ

ಅಧಿಕಾರಿಗಳ ವಿವರ ಪ್ರಕಾರ, ರಾಜ್ಯದಲ್ಲಿ ಈಗಾಗಲೇ ಗುರುತಿಸಲ್ಪಟ್ಟ 3,65,614 ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದ್ದು ಅಥವಾ ವರ್ಗ ಬದಲಾವಣೆ ಮಾಡಲಾಗಿದೆ. ಸಭೆಯಲ್ಲಿ ಅನ್ನಭಾಗ್ಯ ಯೋಜನೆಗೂ ಸಂಬಂಧಿಸಿದ ಮಹತ್ವದ ವಿಚಾರಗಳು ಚರ್ಚಿಸಲ್ಪಟ್ಟವು. ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯಗಳು ಮತ್ತು ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ವ್ಯವಸ್ಥೆ ಮಾಡಲು ಸಿಎಂ ಸೂಚನೆ ನೀಡಿದರು. ಇದರ ಕುರಿತು ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಆದೇಶಿಸಲಾಯಿತು.

ಪರಿಶಿಷ್ಟ ಜಾತಿ–ಪಂಗಡಕ್ಕೆ ಆದ್ಯತೆ

ಸಿಎಂ ಅವರ ನಿರ್ದೇಶನ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳ ಹಕ್ಕು ಆದ್ಯತೆಯ ಮೇಲೆ ನೀಡಲಾಗುತ್ತದೆ.

  • ಪಾರದರ್ಶಕತೆಗೆ ತಂತ್ರಜ್ಞಾನ ಬಳಕೆ
  • ಆಹಾರ ಧಾನ್ಯಗಳನ್ನು ಸಾಗಿಸುವ ಎಲ್ಲಾ ವಾಹನಗಳಲ್ಲಿ ಜಿಪಿಎಸ್ ಟ್ರಾಕರ್ ಅಳವಡಿಸಬೇಕು.
  • ರಾಜ್ಯದ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಕನಿಷ್ಠ ಬೆಂಬಲ ಬೆಲೆ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ನಡೆಯಲಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಸಿಬ್ಬಂದಿ ನೇಮಕಾತಿ

ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಭೆಯಲ್ಲಿ ಭರವಸೆ ನೀಡಿದರು. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿ ಇರುವ ಅಗತ್ಯ ಸಿಬ್ಬಂದಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.