ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಬೆಳಗ್ಗೆಯಿಂದಲೇ ಜಾರಿ!

ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಛಳ ನಿರ್ಧಾರಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ನಾಳೆ ಬೆಳಗ್ಗೆಯಿಂದಲೇ ನೂತನ ಮೀಸಲಾತಿ ಹೆಚ್ಚಳ ನಿಯಮ ಜಾರಿಯಾಗಲಿದೆ. 

Karnataka Governor Thaawarchand Gehlot  Signs Ordinance on increase reservation for SC and ST communities ckm

ಬೆಂಗಳೂರು(ಅ.23): ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಕ್ಕೆ ಮೀಸಲಾತಿ ಹೆಚ್ಚಳ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ನಾಳೆ ಬೆಳಗ್ಗೆಯಿಂದಲೇ ಹೊಸ ನಿಯಮ ಜಾರಿಗೊಳ್ಳಲಿದೆ. ಎಸ್‌ಸಿ ವರ್ಗಕ್ಕೆ ಶೇ.15ರಷ್ಟಿದ್ದ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್‌ಟಿ ವರ್ಗಕ್ಕೆ ಶೇ.3ರಷ್ಟಿದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಲಾಗಿದೆ.  ಇತ್ತೀಚೆಗೆ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಕೈಗೊಂಡಿರುವ ನಿರ್ಧಾರವನ್ನು ಅನುಷ್ಠಾನಗೊಳಿಸಲು ಸುಗ್ರೀವಾಜ್ಞೆ ಹೊರಡಿಸುವುದಕ್ಕೆ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿತ್ತು.  ಸುಗ್ರೀವಾಜ್ಞೆಗೆ ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ಎರಡು ಸಮುದಾಯದ ಬಹು ವರ್ಷಗಳ ಬೇಡಿಕೆ ಈಡೇರಿದೆ. 

ಇತ್ತೀಚೆಗೆ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆಗೆ ಅನುಮೋದನೆ ಪಡೆಯಲಾಗಿತ್ತು. ಈ ಕುರಿತು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದರು.  ಎಸ್‌ಸಿ/ಎಸ್‌ಟಿ ವರ್ಗದ ಜನಸಂಖ್ಯೆ ಹೆಚ್ಚಾಗಿರುವುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಯಾರಾದರೂ ನ್ಯಾಯಾಲಯದಲ್ಲಿ ಪ್ರಶ್ನಿಸಿದರೂ ತಡೆಯಾಜ್ಞೆ ಸಿಗುವುದಿಲ್ಲ ಎಂಬ ವಿಶ್ವಾಸ ಇದೆ. ಮೀಸಲಾತಿಗೆ ಅರ್ಹವಾಗಿರುವ ಜಾತಿಗಳ ಸಂಖ್ಯೆ ಏರಿಕೆಯಾಗಿದೆ. ಎಸ್‌ಸಿ ವರ್ಗದಲ್ಲಿ ಈ ಮೊದಲು 6 ಇದ್ದ ಜಾತಿಗಳು ಈಗ 103 ಜಾತಿಗೆ ಹೆಚ್ಚಳವಾಗಿವೆ. ಎಸ್‌ಟಿಯಲ್ಲಿ 2-3 ಇದ್ದ ಜಾತಿ 56 ಜಾತಿಗೆ ಏರಿಕೆಯಾಗಿದೆ. ಅಗತ್ಯಕ್ಕನುಗುಣವಾಗಿ ಮೀಸಲಾತಿ ನೀಡುವುದು ಸರ್ಕಾರ ಉದ್ದೇಶವಾಗಿದೆ ಎಂದು ಹೇಳಿದರು.

 

ಪಂಚಮಸಾಲಿ ಮೀಸಲಾತಿ: ಡಿ.12ಕ್ಕೆ 25 ಲಕ್ಷ ಜನರೊಂದಿಗೆ ವಿಧಾನಸೌಧ ಮುತ್ತಿಗೆ, ಕೂಡಲ ಶ್ರೀ

ಎಕ್ಸಿಕ್ಯೂಟಿವ್‌ ಆರ್ಡರ್‌ ತೀರ್ಮಾನವೇ ಸಾಕು ಎಂದು ಭಾವಿಸಲಾಗಿತ್ತು. ಆದರೆ ಯಾರಾದರೂ ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಸಮಸ್ಯೆಯಾಗಬಹುದು ಎಂಬ ಉದ್ದೇಶದಿಂದ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿತ್ತು.. ಅಲ್ಲದೆ, ಯಾವ ಕಾರಣಕ್ಕಾಗಿ ಮೀಸಲಾತಿಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂಬ ವಿವರವನ್ನು ಸುಗ್ರೀವಾಜ್ಞೆಯಲ್ಲಿ ತಿಳಿಸಲಾಗಿದೆ ಎಂದರು. ಸುಗ್ರೀವಾಜ್ಞೆ ತರುವಾಗ ಸಂವಿಧಾನ ಪ್ರಕಾರವೇ ಕ್ರಮ ಜರುಗಿಸುತ್ತೇವೆ. ಸಂವಿಧಾನದ ಪರಿಚ್ಛೇದ 9ರಲ್ಲಿ ಸೇರಿಸುವಂತೆ ಕೇಂದ್ರಕ್ಕೆ ಕೇಳಲಾಗುವುದು. ಕೇಂದ್ರದಲ್ಲಿ ಅನುಮೋದನೆ ನೀಡಬೇಕು. ಅಲ್ಲಿಯವರೆಗೆ ಕಾಯುವುದಕ್ಕಿಂತ ಜಾರಿಗೊಳಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಒಕ್ಕಲಿಗರಿಗೆ ಮೀಸಲು ಹೆಚ್ಚಿಸದಿದ್ದರೆ ಹೋರಾಟ
ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಶೇ.12 ರಷ್ಟುಮೀಸಲಾತಿ ಹೆಚ್ಚಳ ಮಾಡದೇ ಹೋದರೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಲು ನಿರ್ಧರಿಸಲಾಗಿದೆಯೆಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಯಲುವಹಳ್ಳಿ ರಮೇಶ್‌ ಎಚ್ಚರಿಸಿದರು. ನಗರದಲ್ಲಿ ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳಿಗೂ ಮೀಸಲಾತಿ ಹೆಚ್ಚಿಸಲು ಚರ್ಚೆ ನಡೆಸುತ್ತಿದೆ. ಆದರೆ ಒಕ್ಕಲಿಗ ಸಮುದಾಯದಲ್ಲಿ ಕೂಡ ಆರ್ಥಿಕವಾಗಿ ಸಾಕಷ್ಟುಬಡವರಿದ್ದು ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕೆಂದರು.

ಮೀಸಲಾತಿ ಬಗ್ಗೆ ಬಿಜೆಪಿ, ಕಾಂಗ್ರೆಸ್‌ ಬಹಿರಂಗ ಚರ್ಚೆಗೆ ಬರಲಿ: ದೇವೇಗೌಡ
 

Latest Videos
Follow Us:
Download App:
  • android
  • ios