ಬೆಂಗಳೂರು(ಮೇ.13): ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲು ತರಾತುರಿಯಲ್ಲಿ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿದ್ದ ರಾಜ್ಯ ಸರ್ಕಾರದ ನಿರ್ಣಯವನ್ನು ರಾಜ್ಯಪಾಲ ವಿ.ಆರ್‌. ವಾಲಾ ಅವರು ಸರ್ಕಾರಕ್ಕೇ ವಾಪಸು ಕಳುಹಿಸಿದ್ದಾರೆ.‘ರೈತರು ಹಾಗೂ ಎಪಿಎಂಸಿಗಳ ಹಿತಕ್ಕೆ ಧಕ್ಕೆ ತಂದ ಕಾರ್ಪೋರೆಟ್‌ ಕಂಪನಿಗಳ ಹಿತ ಕಾಯುವ ಸುಗ್ರೀವಾಜ್ಞೆ ಇದು’ ರೈತ ಸಂಘಟನೆಗಳು ಹಾಗೂ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.

ಕೇಂದ್ರದಿಂದ ರಾಜ್ಯದ ವಿಷಯದಲ್ಲಿ ಹಸ್ತಕ್ಷೇಪ: ಮಾಜಿ ಸಿಎಂ ಸಿದ್ದು ಕಿಡಿ

ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರ ಅಂಕಿತಕ್ಕೆ ಸೋಮವಾರ ರಾಜ್ಯಪಾಲರ ಕಚೇರಿಗೆ ಕಳುಹಿಸಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ರಾಜ್ಯಪಾಲ ವಿ.ಆರ್‌. ವಾಲಾ, ‘ರೈತರ ಮೇಲೆ ಪರಿಣಾಮ ಬೀರುವ ಗಂಭೀರವಾದ ತಿದ್ದುಪಡಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆದಿರಬೇಕು. ಹೀಗಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಕರೆದು ಸಂಪುಟ ಸದಸ್ಯರ ಅಭಿಪ್ರಾಯವನ್ನು ಪಡೆಯಬೇಕು. ಬಳಿಕ ಸಭೆಯ ನಿರ್ಧಾರದ ಆಧಾರದ ಮೇಲೆ ಪ್ರಸ್ತಾವನೆಯನ್ನು ಕಳುಹಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ವಾಪಸು ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೃತಕ ಅಭಾವ ಸೃಷ್ಟಿಸುವ ಮಾಫಿಯಾ: 3.5 ಕೋಟಿ ಮೌಲ್ಯದ ಬಿತ್ತನೆ ಬೀಜ ವಶ

‘ಮೇ 5 ರಂದು ಎಲ್ಲ ರಾಜ್ಯಗಳಿಗೆ ಪತ್ರ ಬರೆದು ಎಪಿಎಂಸಿ ಕಾಯಿದೆ ತಿದ್ದುಪಡಿ ಕುರಿತು ಮಾದರಿ ಪತ್ರ ಕಳುಹಿಸುತ್ತೇವೆ. ಅದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತನ್ನಿ’ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಇದರಂತೆ ಇತ್ತೀಚೆಗೆ ಕೇಂದ್ರವು ಕಳುಹಿಸಿದ್ದ ಮಾದರಿ ಪತ್ರದ ಅನ್ವಯ ತಿದ್ದುಪಡಿ ನಿಯಮಾವಳಿ ರೂಪಿಸಿ, ತಿದ್ದುಪಡಿಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಇದರ ಅಂಕಿತಕ್ಕೆ ಸೋಮವಾರ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು ಎಂದು ತಿಳಿದುಬಂದಿದೆ.