ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಡಿ.ಕೆಂಪಣ್ಣ ಸಾವು!
ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರು (ಸೆ.19): ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಶೇ.40 ಪರ್ಸೆಂಟ್ ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದ ಡಿ.ಕೆಂಪಣ್ಣ (83) ಅವರು ಗುರುವಾರ ಬೆಳಗ್ಗೆ ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಡಿ.ಕೆಂಪಣ್ಣ ಅವರು ರಾಜ್ಯ ಸರ್ಕಾರವನ್ನೇ ಎದುರು ಹಾಕಿಕೊಂಡು ಸರ್ಕಾರದ ಸಚಿವರು ಹಾಗೂ ಶಾಸಕರ ವಿರುದ್ಧ ಕಮೀಷನ್ ಆರೋಪ ಮಾಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಪತ್ರವನ್ನು ಬರೆದಿದ್ದರು. ಈ ಕಮೀಷನ್ ಆರೋಪವನ್ನು ಅಸ್ತ್ರವಾಗಿ ಬಳಸಿಕೊಂಡ ವಿಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ 2023ರ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ವಿವಾದವಾಗಿ ಮುನ್ನೆಲೆಗೆ ತಂದರು.
ಬೆಂಗಳೂರು ಏರ್ಪೋರ್ಟ್ ಜೊತೆ ಕೈಜೋಡಿಸಿದ ಕನ್ನಡ ಸಾಹಿತ್ಯ ಪರಿಷತ್: ಬಿಎಐಎಲ್‌ನಲ್ಲಿ ಮಂಡ್ಯ ಸಮ್ಮೇಳನದ ಮಾಹಿತಿ!
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರ ಆರೋಪವು ಆಡಳಿತಾರೂಢ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ಸೋಲು ಕಾಣುವಂತೆ ಮಾಡಿತ್ತು ಎಂದರೂ ತಪ್ಪಾಗುವುದಿಲ್ಲ. ರಾಜ್ಯ ಸರ್ಕಾರದ ಎಲ್ಲ ನಾಯಕರು ಕಮೀಷನ್ ದಂಧೆ ಆಸೆಗೆ ಬಿದ್ದು ಆಡಳಿತ ಮಂಕಾಗಿದೆ ಎಂಬುದನ್ನು ಕಾಂಗ್ರೆಸ್ ನಾಯಕರು ಬಿಂಬಿಸಿದ್ದರು. ಇದರ ಬೆನ್ನಲ್ಲಿಯೇ ರಾಜ್ಯದ ಜನತೆಯಲ್ಲಿ ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆ ಎಬ್ಬಿಸುವಂತೆ ಕಾಂಗ್ರೆಸ್ ತಂತ್ರ ರೂಪಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ನಂತರ ಕಾಂಗ್ರೆಸ್‌ನಿಂದ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಆಭಿಯಾನವನ್ನೂ ಮಾಡಿತ್ತು. ಮತ್ತೊಂದೆಡೆ ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳನ್ನು ಕೊಟ್ಟ ಕಾರಣ ಕಾಂಗ್ರೆಸ್ ಪಕ್ಷದ 135 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿದೆ.