ಬೆಂಗಳೂರು, (ಏ.04): ಇದೇ ಏಪ್ರಿಲ್ 7 ರವರೆಗೆ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದ ಬೆನ್ನಲ್ಲೇ ಜಿಮ್ ಗಳಿಗೆ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಿಮ್ ಗಳಿಗೂ ಶೇ.50 ರಷ್ಟು ಅವಕಾಶ ನೀಡಬೇಕು ಎಂದು ರಾಜ್ಯ ಜಿಮ್ ಅಸೋಸಿಯೇಷನ್ ಸಿಎಂ ಯಡಿಯೂರಪ್ಪರಿಗೆ ಮನವಿ ಮಾಡಿತ್ತು. ಈ ಮನವಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪ ಸ್ಪಂದಿಸಿ  ಶೇ.50 ರಷ್ಟು ಅವಕಾಶ ನೀಡಿದ್ದಾರೆ. 

ಪುನೀತ್ ಮನವಿಗೆ ಸ್ಪಂದಿಸಿದ ಸಿಎಂ: ಸಿನಿಪ್ರಿಯರಿಗೆ ಭರ್ಜರಿ ಸಿಹಿಸುದ್ದಿ

 ಜಿಮ್ ಗಳಲ್ಲಿ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಕೊರೋನಾ ನಿಯಮ ಪಾಲಿಸುವಂತೆ ಆದೇಶ ಹೊರಡಿಸಿದೆ. ಜಿಮ್ ಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆ ಮಾಡಬೇಕು. ಜಿಮ್ ಗಳಲ್ಲಿರುವ ಉಪಕರಣವನ್ನು ಪ್ರತಿನಿತ್ಯ ಸ್ಯಾನಿಟೈಸಿಂಗ್ ಮಾಡಬೇಕು, ದೈಹಿಕ ಅಂತರ ಕಾಪಾಡಬೇಕು ಎಂದು ಸೂಚಿಸಿದೆ. 

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಏಪ್ರಿಲ್ 2 ರಂದು ಹೊಸ ಮಾರ್ಗಸೂಚಿ ಪ್ರಕಟ ಮಾಡಿತ್ತು. ಅದರಂತೆ ಜಿಮ್, ಸ್ವಿಮ್ಮಿಂಗ್ ಪೂಲ್ ಗಳನ್ನು ತೆರೆಯದಂತೆ ಆದೇಶ ಹೊರಡಿಸಿತ್ತು. ಇದೀಗ ಜಿಮ್ ಗಳಲ್ಲಿ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.