ಕಾಂಗ್ರೆಸ್ ಗ್ಯಾರಂಟಿಗಳಿಗೆ ಹಣ ಒದಗಿಸಲು ಹಿಂದುಳಿದ ವರ್ಗಗಳ ಇಲಾಖೆ ಹಣಕ್ಕೂ ಕೈ ಹಾಕಿದ ಸರ್ಕಾರ?
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಣಕ್ಕೂ ರಾಜ್ಯ ಸರ್ಕಾರದಿಂದ ಕತ್ತರಿ ಹಾಕಲಾಗಿದೆ.
ಬೆಂಗಳೂರು (ಜು.28): ರಾಜ್ಯದಲ್ಲಿ ಪಂಚ ಗ್ಯಾರಂಟಿಗಳಿಗೆ ಹಣ ಒದಗಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (SC/ST) ಅಭಿವೃದ್ಧಿಗೆಮೀಸಲಿಟ್ಟ ಹಣವನ್ನು ಸರ್ಕಾರ ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಕೆಲವು ಸಾಕ್ಷ್ಯಗಳೂ ಸಿಕ್ಕಿದ್ದವು. ಆದರೆ, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (OBC) ಹಣವನ್ನೂ ಕೂಡ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲು ಮುಂದಾಗಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಹೌದು, ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಸಿದ ಬೆನ್ನಲ್ಲೇ ಹಿಂದುಳಿದ ವರ್ಗಗಳ ಕಲ್ಯಾಣ ಹಣಕ್ಕೂ ಕಾಂಗ್ರೆಸ್ ಸರ್ಕಾರ ಕೈ ಹಾಕಿದೆ. ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಹಣವನ್ನು ಬಳಕೆ ಮಾಡಲಿ ನೀಡಿದ್ದ ಮಂಜೂರಾತಿ ಆದೇಶಕ್ಕೆ ಕತ್ತರಿ ಹಾಕುವ ಮೂಲಕ ಹಿಂದುಳಿದ ವರ್ಗಗಳಿಗೆ ಶಾಕ್ ನೀಡಿದೆ. ಹಿಂದುಳಿದ ವರ್ಗಗಳ ಹರಿಕಾರ ಎನಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣಕ್ಕೂ ತಡೆಯೊಡ್ಡುವ ಮೂಲಕ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಶಾಕ್ ನೀಡಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಜನತೆಗೆ ಮೊದಲ ಸ್ಮಾರ್ಟ್ ಸವಲತ್ತು; 'ಗುಂಡಿ ಗಮನ' ಆ್ಯಪ್ ಬಿಡುಗಡೆ ಮಾಡಿದ ಬಿಬಿಎಂಪಿ
ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಗಳ ಏಳಿಗೆಗಾಗಿ ಮೀಸಲಿದ್ದ ಅನುದಾನವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರು ರದ್ದುಗೊಳಿಸಿದ್ದಾರೆ. ಅಂದರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಸಮುದಾಯಗಳ ಅಭಿವೃದ್ಧಿಗೆ ಮಂಜೂರಾಗಿದ್ದ ಅನುದಾನಕ್ಕೆ ಈಗ ಕತ್ತರಿ ಹಾಕಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಒಟ್ಟು 1,093 ವಿವಿಧ ಸಂಘ ಸಂಸ್ಥೆಗಳಿಗೆ ಮಂಜೂರಾಗಿದ್ದ ಮಂಜೂರಾತಿ ಆದೇಶ ರದ್ದುಗೊಳಿಸಲಾಗಿದೆ. ಈ ಅನುದಾನದಲ್ಲಿ ಸಮುದಾಯ ಭವನ, ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗಳಿಗೆ ಬರೋಬ್ಬರಿ 312 ಕೋಟಿ ರೂ. ಮಂಜೂರು ಮಾಡಲಾಗಿತ್ತು.
ಉಪನಗರ ಸಂಪಿಗೆ ರೈಲ್ವೆ ಮಾರ್ಗಕ್ಕೆ 1442 ಕೋಟಿ ವೆಚ್ಚ, ಆ.9 ಟೆಂಡರ್ ಅರ್ಜಿ ಹಾಕಲು ಕೊನೆ ದಿನ
ಆದರೆ, ಜುಲೈ 16ರಂದು ಸರ್ಕಾರದಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರು ಮಾಡಲಾಗಿದ್ದ ಅನುದಾನವನ್ನು ಸರ್ಕಾರದಿಂದ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಒಟ್ಟು 312 ಕೋಟಿ ರೂ. ಮಂಜೂರಾತಿಯನ್ನೂ ರದ್ದುಗೊಳಿಸಿ, 1093 ಸಂಘ ಸಂಸ್ಥೆಗಳಿಗೆ ಶಾಕ್ ನೀಡಲಾಗಿದೆ. ಈ ಎಲ್ಲ ಸಂಘ ಸಂಸ್ಥೆಗಳ ಅಭಿವೃದ್ಧಿಗೆ ಮಂಜೂರು ಮಾಡಲಾಗಿದ್ದ ಮೊದಲನೇ ಕಂತಿನ ಅನುದಾನ ಬಿಡುಗಡೆ ಆಗದಿರುವ ಕಾರಣ ಎಲ್ಲಾ ಸಂಸ್ಥೆಗಳಿಗೆ ಮಾಡಲಾಗಿದ್ದ ಮಂಜೂರಾತಿಯನ್ನು ಕ್ಯಾನ್ಸಲ್ ಮಾಡಲಾಗಿದೆ. ಇನ್ನು ರದ್ದತಿ ಆದೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದ ಮೇರೆಗೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತಿಳಿಸಲಾಗಿದೆ.