ಬೆಂಗಳೂರು, [ಅ.28]: 2019-20ನೇ ಸಾಲಿನಲ್ಲಿ ಮುಂಗಾರು ಮಳೆ ಕೊರತೆ ಎದುರಿಸಿದ ರಾಜ್ಯದ  49 ತಾಲೂಕುಗಳನ್ನ ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. 

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ಆಧಾರದ ಮೇರೆಗೆ ರಾಜ್ಯ ಸರ್ಕಾರ ಇಂದು [ಸೋಮವಾರ] ಅಧಿಕೃತವಾಗಿ ಘೋಷಣೆ ಮಾಡಿದೆ.

 2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 18 ಜಿಲ್ಲೆಗಳ 49 ತಾಲೂಕುಗಳು ಮಳೆ ಕೊರತೆ ಹಾಗೂ ಅಂತರ್ಜಲ ಕುಸಿತ ಎದುರಿಸುತ್ತಿವೆ ಎಂದು ತಿಳಿಸಿದೆ.

ಮುಂದಿನ 6 ತಿಂಗಳ ಅವಧಿವರೆಗೆ ಅಥವಾ ಮುಂದಿನ ಸರ್ಕಾರದ ಆದೇಶದವರೆಗೆ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ.

ಆನೇಕಲ್​, ಬೆಂಗಳೂರು ಉತ್ತರ, ಪೂರ್ವ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ಕನಕಪುರ, ರಾಮನಗರ, ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ, ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ, ಗುಬ್ಬಿ, ಕೊರಟಗೆರೆ, ಕುಣಿಗಲ್​, ಮಧುಗಿರಿ, ಪಾವಗಡ, ತುರುವೇಕೆರೆ, ತುಮಕೂರು, ಚಳ್ಳೇಕೆರೆ, ಚಿತ್ರದುರ್ಗ, ಮೊಳಕಾಲ್ಮೂರು, ಜಗಳೂರು, ಕೊಳ್ಳೇಗಾಲ, ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರುಗುಪ್ಪ, ಗಂಗಾವತಿ, ಮಾನ್ವಿ, ರಾಯಚೂರು, ಸಿಂಧನೂರು ಹಾಗೂ ಚಿಂಚೋಳಿ ತಾಲೂಕುಗಳು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.