Petrol Diesel Price Drop:ಕೇಂದ್ರದ ಬೆನ್ನಲ್ಲೇ ರಾಜ್ಯದಿಂದಲೂ ಪೆಟ್ರೋಲ್, ಡಿಸೇಲ್ ದರ ಇಳಿಕೆ
* ಮೋದಿ ಬೆನ್ನಲ್ಲೇ ಸಿಎಂ ಬೊಮ್ಮಾಯಿಂದಲೂ ಸಿಹಿ ಸುದ್ದಿ
* ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
* ದೀಪಾವಳಿ ಗಿಫ್ಟ್ ಕೊಟ್ಟ ರಾಜ್ಯ ಹಾಗೂ ಕೇಂದ್ರ ಸರ್ಕಾರ
ಬೆಂಗಳೂರು, (ನ.03): ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ (petrol and diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಮೂಲಕ ದೇಶದ ಜನತೆಗೆ ದೀಪಾವಳಿ (Deepavali) ಉಡುಗೊರೆ ಕೊಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರವೂ ಸಹ ಪೆಟ್ರೋಲ್, ಡಿಸೇಲ್ ಮೇಲಿನ ಸುಂಕ ಕಡಿತಸೊಳಿಸುವ ಮೂಲಕ ಜನಸಾಮಾನ್ಯರ ಮೇಲಿನ ಹೊರೆ ಕಡಿಮೆ ಮಾಡಿದೆ.
ಹೌದು....ಸಿಎಂ ಬೊಮ್ಮಾಯಿ ಸರ್ಕಾರ ಪೆಟ್ರೋಲ್, ಡಿಸೇಲ್ ಪ್ರತಿ ಲೀಟರ್‌ಗೆ ತಲಾ 7 ರೂಪಾಯಿ ಬೆಲೆ ಕಡಿತಗೊಳಿಸಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರೇ ಇಂದು (ನ.03) ಮಾಹಿತಿ ನೀಡಿದ್ದು,ರಾಜ್ಯ ಸರಕಾರದ ಈ ನಿರ್ದಾರ ನಾಳೆ ಅಂದ್ರೆ ನವೆಂಬರ್ 04ರ ಸಾಯಂಕಾಲದಿಂದ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.
Petrol Diesel Price Drop; ಪೆಟ್ರೋಲ್ 5, ಡೀಸೆಲ್ 10 ರು. ಅಬಕಾರಿ ಸುಂಕ ಕಡಿತ
ಇನ್ನು ಕೇಂದ್ರ ಸರ್ಕಾರ ಕೂಡ ಡೀಸೆಲ್ 10 ಹಾಗೂ ಪೆಟ್ರೋಲ್ ಮೇಲಿನ ಸುಂಕ 5ರೂ. ಕಡಿತ ಮಾಡಿದೆ. ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸುಂಕ ಕಡಿತಗೊಳಿಸಿದ್ದರಿಂದ ಕರ್ನಾಟಕದಲ್ಲಿ ಪೆಟ್ರೋಲ್ 12 ಮತ್ತು ಡೀಸೆಲ್ 17 ರೂ ಕಡಿಮೆಯಾಗಲಿದೆ.
ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರದ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2,100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
ರಾಜ್ಯ ಸರ್ಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸರ್ಕಾರದಿಂದಲೂ ಇಳಿಕೆ
ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಆಗಲಿದೆ. ಕೇಂದ್ರ ಸರ್ಕಾರ ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂಪಾಯಿ ಹಾಗೂ ಪೆಟ್ರೋಲ್ ಮೇಲೆ ಅಬಕಾರಿ ಸುಂಕ 5 ರೂಪಾಯಿ ಕಡಿತಗೊಳಿಸಿದೆ. ಇಂದು (ನವೆಂಬರ್ 3) ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ.
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಭಾರಿ ಹೊರೆಯಾಗಿತ್ತು. ದಿನಬಳಕೆಯ ವಸ್ತುಗಳ ದರವೂ ಹೆಚ್ಚಳವಾಗಿತ್ತು. ಇದೀಗ ದೀಪಾವಳಿಯ ಸಂದರ್ಭದಲ್ಲಿ ಇಂಧನ ದರ ಇಳಿಕೆ ಮಾಡಲಾಗಿದೆ.