ವಿವಿಧ ಟ್ರೆಸ್ಟ್,ಪ್ರತಿಷ್ಠಾನಗಳಿಗೆ ಅಧ್ಯಕ್ಷ- ಸದಸ್ಯರನ್ನ ನೇಮಿಸಿದ ಸರ್ಕಾರ, ಸೂಲಿಬೆಲೆ ತಿರಸ್ಕಾರ
ಕನ್ನಡ ಮತ್ತು ಸಂಸ್ಕತಿ ಇಲಾಖೆಯಡಿಯ ಕೆಲ ಟ್ರಸ್ಟ್, ಪ್ರತಿಷ್ಠಾನಗಳಿಗೆ ಹೊಸದಾಗಿ ಅಧ್ಯಕ್ಷರು, ಸದಸ್ಯರನ್ನು ನೇಮಿಸಲಾಗಿದೆ. ಹೊಸದಾಗಿ ನೇಮಕಗೊಂಡಿರುವಂತ ಟ್ರಸ್ಟ್, ಪ್ರತಿಷ್ಠಾನದ ಅಧ್ಯಕ್ಷರ ಪಟ್ಟಿ ಈ ಕೆಳಗಿನಂ
ಬೆಂಗಳೂರು, (ಆಗಸ್ಟ್.24): ಕನ್ನಡ ಮತ್ತು ಸಂಸ್ಕೃತ ಇಲಾಖೆಯಡಿ ಬರುವ ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷರು ಮತ್ತು ಸದಸ್ಯರಗಳನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಇಂದು(ಬುಧವಾರ) ಅಧಿಸೂಚನೆ ಹೊರಡಿಸಿದ್ದು, ಸರ್ಕಾರದಿಂದ ರಚಿಸಲ್ಪಟ್ಟ 21 ಟ್ರಸ್ಟ್, ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ, ಕನ್ನಡ ಮತ್ತು ಸಂಸ್ಕತಿ ಇಲಾಖೆಯಡಿಯ ಕೆಲ ಟ್ರಸ್ಟ್, ಪ್ರತಿಷ್ಠಾನಗಳಿಗೆ ಹೊಸದಾಗಿ ಅಧ್ಯಕ್ಷರು, ಸದಸ್ಯರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ 10 ಪಾಲಿಕೆಗಳ ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ನಿಗದಿ
ಪ್ರಮುಖವಾಗಿ ಶ್ರೀಗಳನಾಥ್ ಮತ್ತು ನಾ ಶ್ರೀ ರಾಜಪುರೋಹಿತ ಪ್ರತಿಷ್ಠಾನಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆದ್ರೆ, ಇದನ್ನು ಚಕ್ರವರ್ತಿ ಸೂಲಿಬೆಲೆ ಅವರು ತಿಸ್ಕರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸೂಲಿಬೆಲೆ
ಗಳಗನಾಥರ ಕುರಿತಂತೆ ಅಪಾರ ಗೌರವ ಹೊಂದಿರುವ ನನಗೆ, ನನ್ನನ್ನು ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದು ಅಚ್ಚರಿಯೂ ಮತ್ತು ಸಂತಸವೂ ಆಯ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದಕ್ಕೆ ಸಮಯ ಕೊಡುವಷ್ಟು ಪುರಸೊತ್ತಿಲ್ಲದಿರುವುದರಿಂದ ಅತ್ಯಂತ ವಿನೀತನಾಗಿಯೇ ಈ ಗೌರವವನ್ನು ಮರಳಿಸಬೇಕಾಗಿ ಬಂದಿದೆ. ಗಳಗನಾಥರ ಕುರಿತಂತೆ ನನ್ನಷ್ಟೇ ಅಥವಾ ಅದಕ್ಕಿಂತಲೂ ಹೆಚ್ಚು ಪ್ರೀತ್ಯಾದರಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳು ನನ್ನ ದೃಷ್ಟಿಯಲ್ಲಿದ್ದಾರೆ. ಸಂಬಂಧಪಟ್ಟವರಿಗೆ ಅದನ್ನು ತಿಳಿಸುವೆ. ಸೂಕ್ತವೆನಿಸಿದರೆ ಅವರನ್ನು ಆಯ್ಕೆ ಮಾಡಬಹುದು.
ಗಳಗನಾಥರ ಕನ್ನಡ ಸೇವೆಗೆ ನಾವೆಷ್ಟು ಋಣಿಯಾದರೂ ಕಡಿಮೆಯೇ. ಅವರ ಕೆಲಸ ಮಾಡುವ ಈ ಅವಕಾಶ ಸ್ವೀಕರಿಸಲಾಗದಿರುವುದಕ್ಕೆ ಖಂಡಿತವಾಗಿಯೂ ಖೇದವಿದೆ. ನನ್ನನ್ನು ಸೂಕ್ತವೆಂದು ಆಯ್ಕೆ ಮಾಡಿದವರಿಗೆ ಧನ್ಯವಾದಗಳು ಎಂದಿದ್ದಾರೆ.
ಹೊಸದಾಗಿ ನೇಮಕಗೊಂಡಿರುವಂತ ಟ್ರಸ್ಟ್, ಪ್ರತಿಷ್ಠಾನದ ಅಧ್ಯಕ್ಷರ ಪಟ್ಟಿ
1) ದರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಗೆ ಅಧ್ಯಕ್ಷರಾಗಿ ಮನೋಜ್ ಪಾಟೀಲ್
2) ಪುತಿನಾ ಟ್ರಸ್ಟ್ - ಡಾ. ಹೆಚ್ ಎಸ್ ವೆಂಕಟೇಶ ಮೂರ್ತಿ ಅಧ್ಯಕ್ಷರಾಗಿ ನೇಮಕ.
3) ಮಲ್ಲಿಕಾರ್ಜುನ ಮನ್ಸೂರ್ ರಾಷ್ಟ್ರೀಯ ಸ್ಮಾರಕ - ನಾಗರಾಜ್ ಹವಾಲದಾರ
4)ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ - ಡಾ. ವತ್ಸಲಾ ಮೋಹನ್.
5)ಡಾ.ಕೆ ಶಿವರಾಂ ಕಾರಂತ ಪ್ರತಿಷ್ಠಾನ - ಆನಂದ್ ಸಿ ಕುಂದುರ್
6) ಡಾ. ವಿಕೃ ಗೋಕಾಕ್ ಪ್ರತಿಷ್ಠಾನ -ಅನಿಲ್ ಗೋಕಾಕ್
7)ಸ್ವರ ಸಮ್ರಾಟ್ ಪಂ ಬಸವರಾಜ್ ರಾಜ್ ಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ - ಶ್ರೀಪಾದ್ ಹೆಗಡೆ
8 ) ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ - ಶ್ರೀನಿವಾಸ್ ಪಾಡಿಗಾರ
9)ಬೆಟಗೇರಿ ಕೃಷ್ಣ ಶರ್ಮಾ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ - ಡಾ ಕವಿತಾ ಕುಸಗಲ್
10) ಹುತಾತ್ಮ ಮೈಲಾರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ - ಸುಧೀರ್ ಸಿಂಹ ಘೋರ್ಪಡೆ
11) ಶ್ರೀಗಳನಾಥ್ ಮತ್ತು ನಾ ಶ್ರೀ ರಾಜಪುರೋಹಿತ ಪ್ರತಿಷ್ಠಾನ - ಚಕ್ರವರ್ತಿ ಸೂಲಿಬೆಲೆ
12) ಕೆ ಎಸ್ ನರಸಿಂಹ ಸ್ವಾಮಿ ಟ್ರಸ್ಟ್ - ಡಾ. ಬಿವಿ ರಾಜರಾಮ್
13) ಬಸವರಾಜ್ ಕಟ್ಟಿಮನಿ ಪ್ರತಿಷ್ಠಾನ - ಡಾ. ಗುರುಪಾದ ಮರಿಗುದ್ದಿ
14) ಡಿ.ವಿ ಹಾಲಭಾವಿ ರಾಷ್ಟ್ರೀಯ ಸ್ಮಾರಕ - ಪಿಎಸ್ ಕಡೆಮನೆ