ಚಾಮರಾಜನಗರ ಆಸ್ಪತ್ರೆ ದುರಂತ : ಘಟನೆಯ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದುರಂತವೊಂದು ನಡೆದಿದ್ದು, ಇದಕ್ಕೆ ರಾಜ್ಯ ಸರ್ಕಾರ ವಿಚಾರಣಾಧಿಕಾರಿಯನ್ನು ನೇಮಿಸಿದೆ.
ಚಾಮರಾಜನಗರ/ಬೆಂಗಳೂರು, (ಮೇ.03): ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಕಳೆದ 24 ಗಂಟೆಯಲ್ಲಿ 24 ಕೊವಿಡ್ ರೋಗಿಗಳು ಸತ್ತಿರುವ ಹಿನ್ನೆಲೆಯಲ್ಲಿ ಸರಕಾರ ಹಿರಿಯ ಐಎಎಸ್ ಶಿವಯೀಗ ಕಳಸದ್ ಅವರನ್ನು ವಿಚಾರಣಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ.
ಸಾವಿನ ಹಿಂದಿನ ಕಾರಣಗಳನ್ನು ಹುಡುಕಿ ಮೂರು ದಿನಗಳೊಳಗೆ ವರದಿ ನೀಡುವಂತೆ ಆದೇಶ ಹೊರಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 3 ದಿನಗದೊಳಗೆ ವರದಿ ಸಲ್ಲಿಸುವಂತೆ ಶಿವಯೋಗಿ ಕಳಸದ್ ಅವರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
"
ಚಾಮರಾಜನಗರದಲ್ಲಿ ಘೋರ ಸ್ಥಿತಿ : ಏರುತ್ತಿರುವ ಸಾವಿನ ಸರಣಿ - ಆರೋಗ್ಯ ಸಚಿವರ ದೌಡು
ಜಿಲ್ಲಾಧಿಕಾರಿಗಳನ್ನ ಈ ಬಗ್ಗೆ ಪ್ರಶ್ನಿಸಿದ್ರೆ, ಮೈಸೂರಿನಿಂದ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್‌ಗಳು ಬರಲಿಲ್ಲ ಎನ್ನುತ್ತಿದ್ದಾರೆ. ಇತ್ತ ಮೈಸೂರು ಜಿಲ್ಲಾಡಳಿತ ಬೇರೆ ಜಿಲ್ಲೆಗಳಿಗೆ ಆಕ್ಸಿಜನ್ ಸರಬರಾಜು ಮಾಡುವಂತಿಲ್ಲ ಎಂದು ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ ನೀಡಿದಿಯಂತೆ.ಈ ಹಿನ್ನೆಲೆಯಲ್ಲಿ ಚಾಮರಾಜನಗ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಸರಬರಾಜು ಆಗಿಲ್ಲ.
ಒಟ್ಟಿನಲ್ಲಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ 24 ಹೆಣಗಳು ಬಿದ್ದಿವೆ. ಇದಕ್ಕೆ ಹೊಣೆ ಯಾರು? ಎನ್ನುವ ಪ್ರಶ್ನೆಗಳು ಜೋರಾಗಿ ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ KSRTC ಎಂಡಿ ಶಿವಯೋಗಿ ಕಳಸದ್ ಅವರನ್ನ ವಿಚಾರಣಾಧಿಕಾರಿಯನ್ನಾಗಿ ನೇಮಿಸಿದೆ.
ಮೊಬೈಲ್ ಅಲ್ಲಿ ಬ್ಯಾಟರಿ ಇನ್ನೂ 50% ಇರಬೇಕಾದರೆ ಚಾರ್ಜರ್ ಹುಡುಕ್ತೀವಿ. ಪವರ್ ಬ್ಯಾಂಕ್ ಬೇರೆ ಬ್ಯಾಗಲ್ಲಿ ಇರುತ್ತೆ. ಮೊಬೈಲ್ಗೆ ಇಷ್ಟು ಕೇರ್ ಅಂತದ್ರಲ್ಲಿ ಜೀವ ಉಳಿಸೋ ಆಮ್ಲಜನಕ ಖಾಲಿ ಆಗುತ್ತೆ ಅಂತ ಗೊತ್ತಿದ್ರೂ ಅಲ್ಲಿನ ಅಧಿಕಾರಿಗಳು ಏನ್ ಮಾಡ್ತಿದ್ರು ಆಕ್ಸಿಜನ್ ಇಲ್ಲದೆ ಚಾಮರಾಜನಗರದಲ್ಲಿ ಈ ಸಾವುಗಳಿಗೆ ಹೊಣೆ ಯಾರು?