ಕೊರೋನಾದಿಂದ ಮೃತ ಪಟ್ಟವರ ಮಕ್ಕಳ ನೆರವಿಗೆ ನಿಂತ ರಾಜ್ಯ ಸರ್ಕಾರ

ಕೊವಿಡ್​ನಿಂದ ತಂದೆ, ತಾಯಿ ಅಥವಾ ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ರಾಜ್ಯ ಸರ್ಕಾರ ನಿಂತಿದೆ.

Karnataka govt appoints nodal officer to facilitate-orphaned-children-from-covid rbj

ಬೆಂಗಳೂರು, (ಮೇ.03): ಕೊವಿಡ್​ನಿಂದ ತಂದೆ, ತಾಯಿ ಅಥವಾ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸರ್ಕಾರದಿಂದ ಅಗತ್ಯ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಿಸಿದೆ. 

ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾದ ಕೆ.ಪಿ.ಮೋಹನ್‌ರಾಜ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇಂದು (ಸೋಮವಾರ) ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೊರೋನಾ ಸುನಾಮಿ: ಇಲ್ಲಿದೆ ಜಿಲ್ಲಾವಾರು ಅಂಕಿ-ಸಂಖ್ಯೆ

ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸರ್ಕಾರದಿಂದ ಅತ್ಯಾವಶ್ಯಕ ಸೌಕರ್ಯಗಳನ್ನು ಆದ್ಯತೆಯ ಆಧಾರದ ಮೇಲೆ ಒದಗಿಸುವ ಸಲುವಾಗಿ ಅಗತ್ಯ ಕ್ರಮವಹಿಸುವ ಜವಾಬ್ಧಾರಿಯನ್ನು ನೋಡಲ್ ಅಧಿಕಾರಿಗೆ ವಹಿಸಲಾಗಿದೆ.

ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿಗೆ ಜಿಲ್ಲೆಗಳಲ್ಲಿನ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಶೇ 10ರಷ್ಟು ಹಾಸಿಗೆ ಮೀಸಲಿಡುವಂತೆ ಹಾಸಿಗೆ ಮೀಸಲಿಡಲು ಆರೋಗ್ಯ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿ ಹಾಗೂ ಅವರ ಕುಟುಂಬಕ್ಕೆ ಚಿಕಿತ್ಸೆ ಒದಗಿಸಲು ಅನುಕೂಲವಾಗುವಂತೆ ಈ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್ ಹಾಗೂ ಔಷಧಿ ಸಿಗದೇ ಕೊರೋನಾ ಸೊಂಕಿತರು ನರಳಾಡಿ, ನರಳಾಡಿ ಪ್ರಾಣ ಬಿಡುತ್ತಿದ್ದಾರೆ. 

Latest Videos
Follow Us:
Download App:
  • android
  • ios