Asianet Suvarna News Asianet Suvarna News

ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ: ಜಾತ್ರೆ, ಧಾರ್ಮಿಕ ಉತ್ಸವ ರದ್ದು!

ಕರ್ನಾಟಕದಲ್ಲಿ ಕೊರೊನಾ  2ನೇ ಅಲೆ ಶುರುವಾಗಿದ್ದು, ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಇದರಿಂದ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

Karnataka Govt bans all temple fairs and religious functions for corona second wave rbj
Author
Bengaluru, First Published Mar 27, 2021, 10:37 PM IST

ಬೆಂಗಳೂರು, (ಮಾ.27): ರಾಜ್ಯದಲ್ಲಿ ಕೊರೋನಾ ಸೋಂಕಿನ 2ನೇ ಅಲೆ ಎದುರಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜಾತ್ರೆ, ಧಾರ್ಮಿಕ ಉತ್ಸವಕ್ಕೆ ನಿರ್ಬಂಧ ಹೇರಲಾಗಿದೆ. 

ಉತ್ಸವ ಹಾಗೂ ಜಾತ್ರೆಗಳಿಗೆ ನಿರ್ಬಂಧ ವಿಧಿಸಿ ಇಂದು (ಶನಿವಾರ) ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 

2ನೇ ಅಲೆ ಜಯಿಸಿದರೆ ಕೊರೋನಾದಿಂದ ಪಾರಾದಂತೆ: ಸುಧಾಕರ್

ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ನಡೆಯಬೇಕಿದ್ದ ದೊಡ್ಡಬಸವೇಶ್ವರ ರಥೋತ್ಸವವನ್ನ ರದ್ದುಪಡಿಸಲಾಗಿದ್ದು, ಭಕ್ತಾದಿಗಳ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಧಾರ್ಮಿಕ ಧತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಕಾಶ್ ರಾವ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಇನ್ನು ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಗುಡ್ಡದ ಮೇಲಿರುವ ಉಚ್ಚಂಗಮ್ಮ ದೇವಸ್ಥಾನದಲ್ಲಿ ಹೋಳಿ ಹುಣ್ಣಿಮೆ ಪ್ರಯುಕ್ತ ಭಕ್ತರು ಹೆಚ್ಚು ಸೇರುವ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

Follow Us:
Download App:
  • android
  • ios