Asianet Suvarna News Asianet Suvarna News

ಕಾಂಗ್ರೆಸ್‌ ಗ್ಯಾರಂಟಿ ಪಡೆದ ಫಲಾನುಭವಿಗಳ ಸಮೀಕ್ಷೆಗೆ ಮುಂದಾದ ಸರ್ಕಾರ; 12 ಕೋಟಿ ರೂ. ಖರ್ಚು ಮಾಡಲು ನಿರ್ಧಾರ

ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿ ಯೋಜನೆಗಳು ಜನರಿಗೆ ಸರಿಯಾಗಿ ತಲುಪಿವೆಯೇ ಎಂದು ಸಮೀಕ್ಷೆ ಮಾಡಲು 1.2 ಲಕ್ಷ ಸ್ವಯಂ ಸೇವಕರನ್ನು ನಿಯೋಜನೆ ಮಾಡಲಾಗಿದೆ.

Karnataka Govt conduct survey of Congress guarantee beneficiaries from 1 2 lakh volunteers sat
Author
First Published Feb 21, 2024, 8:27 PM IST

ಬೆಂಗಳೂರು (ಫೆ.21): ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಸರ್ಕಾರದಿಂದ ಜಾರಿಗೆ ತರಲಾದ ಐದು 'ಗ್ಯಾರಂಟಿ ಯೋಜನೆ'ಗಳು ಸರಿಯಾಗಿ ಜನತೆಗೆ ತಲುಪಿದೆಯೇ, ಗ್ಯಾರಂಟಿ ಯೋಜನೆಗಳ ಸದುಪಯೋಗ ಆಗಿದೆಯೇ ಎಂಬುದನ್ನು ತಿಳಿಯಲು ಸರ್ಕಾರದಿಂದ ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಸಮೀಕ್ಷೆಗಾಗಿ ಸ್ವಯಂ ಸೇವಕರನ್ನು ನೇಮಕ ಮಾಡಲು ಮುಂದಾಗಿದೆ.

ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ 5 ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಪ್ರತಿ ಮನೆ ಮನೆಗೂ ಈ 5 ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ರಾಜ್ಯ ವ್ಯಾಪ್ತಿ ಸಮೀಕ್ಷೆ ಮಾಡಲು 'ಗ್ಯಾರಂಟಿ ಸ್ವಯಂ-ಸೇವಕ'ರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.

ಕರ್ನಾಟಕ ಸೌಹಾರ್ಧ ಸಹಕಾರಿ (ತಿದ್ದುಪಡಿ) ವಿಧೇಯಕ -2024ಕ್ಕೆ ಹಿನ್ನೆಡೆ; ಕೆ.ಎನ್. ರಾಜಣ್ಣಗೆ ಮುಖಭಂಗ

ಜೊತೆಗೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು 'ಗ್ಯಾರಂಟಿ ಸ್ವಯಂ-ಸೇವಕ'ರಾಗಿ ನೇಮಿಸಿ ಅವರು ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ಯಾರಂಟಿ ಯೋಜನೆಗಳು ತಲುಪಿರುವ ಬಗ್ಗೆ, ಹಾಗೂ ಸದರಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಮತ್ತು ಅದರ ಸದ್ಬಳಕೆ ಆಗುತ್ತಿರುವ ಕುರಿತು ಒಂದು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸದರಿ ಕೆಲಸಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಹೆಚ್ಚುವರಿ ಪ್ರೋತ್ಸಾಹ ಧನವನ್ನು ಸಹ ನೀಡಲಾಗುತ್ತದೆ.

2023-24ನೇ ಸಾಲಿನ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗೃಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳು ಸರಿಯಾದ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪಿರುವ ಕುರಿತಂತೆ ಮನೆ ಮನೆಗಳಿಗೆ ತೆರಳಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇಲಾಖೆಗಳ ಸಿಬ್ಬಂದಿಗಳನ್ನೊಳಗೊಂಡಂತೆ ಸಮೀಕ್ಷೆ ಮಾಡಬೇಕು. ಎಲ್ಲ ಸಿಬ್ಬಂದಿ ಸೇರಿ 1.2 ಲಕ್ಷ 'ಗ್ಯಾರಂಟಿ ಸ್ವಯಂ ಸೇವಕ'ರಿಂದ 10 ರಿಂದ 15 ದಿನಗಳ ಅವಧಿಯಲ್ಲಿ ಒಂದು ಬಾರಿ ಒಬ್ಬರಿಗೆ 1000 ರೂ.ನಂತೆ ಪ್ರೋತ್ಸಾಹಧನ ನೀಡಿ ರಾಜ್ಯ ವ್ಯಾಪ್ತಿ ಸಮೀಕ್ಷೆ ನಡೆಸಲು ಸರ್ಕಾರದಿಂದ ತಾತ್ವಿಕ ಅನುಮೋದನೆ ನೀಡಲಾಗಿದೆ.

ಮಂಡ್ಯದಲ್ಲಿ ರಾಜಕೀಯ ಪ್ರವೇಶ ಸುಳಿವು ನೀಡಿದ ಡಾ.ಸಿ.ಎನ್. ಮಂಜುನಾಥ್; ಲೋಕಸಭೆಯೇ ಬೇರೆ, ರಾಜಕೀಯವೇ ಬೇರೆ ಎಂದಿದ್ಯಾಕೆ?

  • 1. ಸಮೀಕ್ಷೆ ಕಾರ್ಯ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ನಡೆಯಬೇಕು.
  • 2. ಈ ಸಮೀಕ್ಷೆಗೆ ಪ್ರತಿ 'ಗ್ಯಾರಂಟಿ ಸ್ವಯಂ ಸೇವಕ‌'ರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡಬೇಕು.
  • 3. ಇದಕ್ಕೆ ತಗಲುವ ವೆಚ್ಚ ರೂ. 12.00 ಕೋಟಿಗಳನ್ನು ಗೃಹಲಕ್ಷ್ಮಿ ಯೋಜನೆಗೆ ಒದಗಿಸಲಾದ ಅನುದಾನದಿಂದ ಭರಿಸಬೇಕು. 
  • 4. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಿಆಸು ಇಲಾಖೆ (ಇ-ಆಡಳಿತ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಂಬಂಧಪಟ್ಟ ಇತರೆ ಇಲಾಖೆಗಳೊಂದಿಗೆ ಸಮಾಲೋಚಿಸಿ ಸಮೀಕ್ಷೆಯನ್ನು ಕೈಗೊಳ್ಳಲು ಪ್ರತಿ 'ಗ್ಯಾರಂಟಿ ಸ್ವಯಂ ಸೇವಕ'ರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡಲು ಕಾರ್ಯವಿಧಾನವನ್ನು (Mechanism) ವಿನ್ಯಾಸಗೊಳಿಸುವುದು.
Follow Us:
Download App:
  • android
  • ios