Breaking: ಪ್ರತಿ ಭಾನುವಾರ ಕರ್ನಾಟಕ ಕಂಪ್ಲೀಟ್ ಬಂದ್, ಸರ್ಕಾರಿ ನೌಕರರಿಗೆ 5 ದಿನ ಕೆಲಸ.!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಮುಂದುವರಿದಿದ್ದು, ಕೊನೆಗೆ ರಾಜ್ಯ ಸರ್ಕಾರ ವೀಕೆಂಡ್ ಕಂಪ್ಲೀಟ್ ಲಾಕ್ ಡೌನ್ ಮೊರೆ ಹೋಗಿದೆ. ಯಾವಾಗಿನಿಂದ..?

Karnataka govt decides total Lockdown on Sundays From July 5th Over Covid19

ಬೆಂಗಳೂರು, (ಜೂನ್.27): ಕೊರೋನಾ ಸೋಂಕು ತಡೆಗೆ ಬಿಎಸ್‌ವೈ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದು, ರಾಜ್ಯವ್ಯಾಪಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡವು ನಿರ್ಧಾರ ಕೈಗೊಂಡಿದೆ.

"

ಹೌದು..ಜು.5ರಿಂದ ರಾಜ್ಯ ವ್ಯಾಪಿ ಭಾನುವಾರ ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು (ಶನಿವಾರ)  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ಈ ತೀರ್ಮಾನ ಕೈಗೊಳ್ಳಲಾಗಿದೆ.

ಯೋಗಿ ಕೊಂಡಾಡಿದ ಟ್ರಂಪ್,ಅಂತರ್ ಜಿಲ್ಲಾ ಓಡಾಟಕ್ಕೆ ಬ್ರೇಕ್; ಜೂ.27ರ ಟಾಪ್ 10 ಸುದ್ದಿ!

ಅಲ್ಲದೇ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ (ಭಾನುವಾರದ ಜತೆ ಪ್ರತಿ ಶನಿವಾರವೂ ರಜೆ)  ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು. ಆದ್ರೆ, ಸದ್ಯಕ್ಕೆ ವಾರದಲ್ಲಿ ಎರಡು ದಿನ ಲಾಕ್‌ಡೌನ್ ಬೇಡ ಕೇವಲ ಸಂಡೇ ಮಾತ್ರ ಇರಲಿ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಒಪ್ಪಿಗೆ ನೀಡಿದರು.

ರಾಜ್ಯದಲ್ಲಿ ಜೂನ್ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಇದೇ ಜುಲೈ 3 ರವರೆಗೆ ನಡೆಯಲಿವೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾದಂತೆ ಜುಲೈ 5ರಿಂದ ಪ್ರತಿ ಭಾನುವಾರ ಲಾಕ್‌ಡೌನ್‌ ಘೋಷಿಸಲಾಗಿದೆ.

ಅಗತ್ಯ ಸೇವೆ ಲಭ್ಯ
ಹೆಚ್ಚುತ್ತಿರುವ ಕೊರೋನಾ ತಡೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಜುಲೈ 5ರಿಂದ ಪ್ರತಿ ಭಾನುವಾರ ಬಂದ್. ಆದ್ರೆ, ಆಟೋ-ಟ್ಯಾಕ್ಸಿ, ಕ್ಯಾಬ್, ಬಸ್ ಯಾವುದು ಓಡಾಡುವುದಿಲ್ಲ. ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ಇರುತ್ತದೆ. 
 

Latest Videos
Follow Us:
Download App:
  • android
  • ios