ತಂಬಾಕು ಖರೀದಿಗೆ 21 ವರ್ಷ ಕಡ್ಡಾಯ, ಹುಕ್ಕಾಬಾರ್‌ಗಳ ನಿಷೇಧಕ್ಕೆ ನಿರ್ಧಾರ! ದಿನೇಶ್‌ ಗುಂಡೂರಾವ್‌

ಕರ್ನಾಟಕದಲ್ಲಿ ತಂಬಾಕು ಖರೀದಿ ವಯಸ್ಸಿನ ಮಿತಿ 21 ವರ್ಷಕ್ಕೆ ಹೆಚ್ಚಿಸಲಾಗುವುದು. ಹುಕ್ಕಾಬಾರ್‌ಗಳನ್ನು ಕೂಡ ಷೇಧಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Karnataka govt decision taken to 21 years mandatory for buying tobacco and ban hookah bars sat

ಬೆಂಗಳೂರು (ಸೆ.19): ರಾಜ್ಯದಲ್ಲಿ ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ ಮಾತ್ರ ಕಾನೂನಿನಲ್ಲಿ ಅವಕಾಶವಿದ್ದು, ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ 21 ವರ್ಷದವರೆಗೆ ಮಿತಿಯನ್ನು ಹೆಚ್ಚಳ ಮಾಡಲಾಗುವುದು.ಈ ಮೂಲಕ 21 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಸ ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಇತರ ತಂಬಾಕು ಉತ್ಪನ್ನಗಳ ನಿಷೇಧಿಸುವ ಬಗ್ಗೆ ಚರ್ಚಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ, ಕಾನೂನನಲ್ಲಿ ಇದ್ದ ಅವಕಾಶವನ್ನ ಪರಿಷ್ಕರಿಸಲಾಗುತ್ತದೆ. ಈಗ 18 ವರ್ಷದ ಬದಲು 21 ವರ್ಷದ ಮೇಲ್ಪಟ್ಟವರು ಎಂದು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಈ ಮೂಲಕ  21 ವರ್ಷದ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ಜನತೆಗೆ ಮತ್ತೊಂದು ದರ ಏರಿಕೆ ಶಾಕ್‌: ಆಸ್ತಿ ನೋಂದಣಿ ಮಾರ್ಗಸೂಚಿ ದರ ಶೇ.30 ಹೆಚ್ಚಳ!

ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವೆನೆಯನ್ನ ಶಾಲೆಗಳ ಜೊತೆಗೆ, ದೇವಸ್ಥಾನಗಳು, ಆಸ್ಪತ್ರೆಗಳ ಸುತ್ತ ಮುತ್ತಲು ನಿಷೇಧಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ತರಲಾಗುವುದು. ಈ ಹಿಂದಿನ ಕೋಟ್ಪಾ ಕಾಯ್ದೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆಯನ್ನ ನಿಷೇಧಿಸಲಾಗಿತ್ತು. ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನ ನಿಷೇಧಿಸುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು. 

ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಹುಕ್ಕಾ ಬಾರ್ ಗಳಿಗೆ ಯುವಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಯುವಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.‌ ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಹುಕ್ಕಾ ಬಾರ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯನ್ನ ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು. ಹುಕ್ಕಾ ಬಾರ್ ಗಳಿಗೆ ನಿಯಂತ್ರಣ ಹೇರುವಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರು ಕೆಲವು ಸಲಹೆ ನೀಡಿದ್ದು, ಕೋಟ್ಪಾ ಕಾಯ್ದೆ ತಿದ್ದುಪಡಿಯಲ್ಲಿ ಹುಕ್ಕಾ ಬಾರ್ ಗಳಲ್ಲಿ ನಡೆಯುವ ಮಾದಕ ವಸ್ತುಗಳ ಸೇವನೆಗೆ ನಿಷೇಧ ಹೇರಲಾಗುವುದು.

ಬೆಂಗಳೂರು ಸುತ್ತಲಿನ 75,000 ಎಕರೆ ಭೂಮಿಗೆ ನಕಲಿ ದಾಖಲೆ ಸೃಷ್ಟಿ! ತನಿಖೆಗೆ ಸಿಎಂ ಆದೇಶ

ಶಾಲೆ-ಕಾಲೇಜು ಮಾತ್ರವಲ್ಲ ದೇವಸ್ಥಾನ, ಆಸ್ಪತ್ರೆ ಬಳಿಯೂ ತಂಬಾಕು ಮಾರುವಂತಿಲ್ಲ: ಯಾವುದೇ ಶಾಲೆ,‌ ಕಾಲೇಜು, ಆಸ್ಪತ್ರೆ, ಶಿಶುಪಾಲನಾ ಕೇಂದ್ರಗಳು, ಹೆಲ್ತ್ ಕೇರ್ ಸೆಂಟರ್, ದೇವಸ್ಥಾನಗಳು, ಮಂದಿರಿಗಳು, ಮಸೀದಿಗಳು, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ.‌ ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಇಂದಿನ ಯುವಜನತೆ ತಮ್ಮ ಅಮೂಲ್ಯ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.  ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಬುಡಸಮೇತ ಕಿತ್ತೆಸೆಯುವ ಗಟ್ಟಿ ನಿರ್ಧಾರವನ್ನ ಮಾಡಿದ್ದೇವೆ ಎಂದರು.

ತಂಬಾಕು ಸೇವನೆಯ ಬಳಿಕ ಯುವಕರು ಡ್ರಗ್ಸ್, ಮಾದಕ ವಸ್ತುಗಳ ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದರು. ಇದಕ್ಕೆಲ್ಲಾ  ತಂಬಾಕು ಸೇವನೆಯೇ ಒಂದು ರೀತಿಯಲ್ಲಿ ಅಡಿಪಾಯ ಹಾಕಿ ಕೊಡುತ್ತಿತ್ತು. ಹೀಗಾಗಿ ಮೂಲದಲ್ಲೇ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Latest Videos
Follow Us:
Download App:
  • android
  • ios