ಶಿವಕುಮಾರ್ ಶ್ರೀ ಲಿಂಗೈಕ್ಯರಾದ ದಿನವನ್ನು 'ದಾಸೋಹ' ದಿನವನ್ನಾಗಿ ಆಚರಿಸಲು ಸುತ್ತೋಲೆ
* ಶಿವಕುಮಾರ್ ಸ್ವಾಮೀಜಿ ಲಿಂಗೈಕೈರಾದ ದಿನವನ್ನ ದಾಸೋಹದ ದಿನ ಎಂದು ಅಚರಿಸಲು ಸರ್ಕಾರ ತೀರ್ಮಾನ
* ದಾಸೋಹ ದಿನದ ರೂಪರೇಷೆಗಳನ್ನ ತಯಾರಿಸಿ ಕಾರ್ಯಕ್ರಮ ಜಾರಿಗೊಳಿಸಲು ಸೂಚನೆ
* ದಾಸೋಹ ದಿನ ಆಚರಣೆ ಮಾಡ್ತೀನಿ ಎಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಘೋಷಣೆ ಮಾಡಿದ್ದರು..
ಬೆಂಗಳೂರು, (ಸೆ.03): ತ್ರಿವಿಧ ದಾಸೋಹಿ ಸಿದ್ಧಗಂಗಾ ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಜನವರಿ 21ನ್ನು 'ದಾಸೋಹ' ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸುತ್ತೋಲೆ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಎಂ. ರಾಜು ಇಂದು (ಸೆ.03) ಸುತ್ತೋಲೆ ಹೊರಡಿಸಿದ್ದು, ದಾಸೋಹ ದಿನದ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.
ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ 111 ಅಡಿ ಪ್ರತಿಮೆ ನಿರ್ಮಾಣ
ಸಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಶ್ರೀಗಳು ತಮ್ಮನ್ನು ತಾವು ತೊಡಗಿಸಿಕೊಂಡು ಲಿಂಗೈಕ್ಯರಾಗಿದ್ದರು.ಈ ಅಭೂತಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ , ಶ್ರೀಗಳು ಲಿಂಗೈಕ್ಯರಾಗಿದ ದಿನವನ್ನು ಅಂದರೆ ಜನವರಿ 21ರಂದು ಸರ್ಕಾರದ ವತಿಯಿಂದ 'ದಾಸೋಹ ದಿನ'ವೆಂದು ಆಚರಿಸುವಂತೆ ಈ ಮೂಲಕ ತಿಳಿಸಲಾಗಿದೆ ಎಂದು ಸತ್ತೋಲೆಯಲ್ಲಿ ತಿಳಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ 2ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಈ ದಾಸೊಹ ದಿನದ ಘೋಷಣೆ ಮಾಡಿದ್ದರು. ಇದೀಗ ಈ ದಾಸೋಹ ದಿನದ ಆಚರಣೆಗೆ ರಾಜ್ಯ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ.