ಬ್ರೇಕಿಂಗ್: ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ: ಎಷ್ಟು ದಿನ?
ಮೂರನೇ ಲಾಕ್‌ಡೌನ್ ನಂತರ ಮುಂದೇನು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು, ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಹಾಗಾದ್ರೆ ನಾಲ್ಕನೇ ಹಂತದ ಲಾಕ್‌ಡೌನ್ ಎಷ್ಟು ದಿನ..?
ಬೆಂಗಳೂರು, (ಮೇ.17): ಕರ್ನಾಟಕದಲ್ಲಿ ಇನ್ನೆರಡು ದಿನ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಮೂರನೇ ಹಂತದ ಲಾಕ್‌ಡೌನ್ ಇಂದಿಗೆ (ಭಾನುವಾರ) ಅಂತ್ಯವಾಗಲಿದೆ.
ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ರಾಜ್ಯ ಸರ್ಕಾರ ಮೇ. 19 ರವರೆಗ ಲಾಕ್‌ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದು, ಇನ್ನೆರಡು ಹಳೇ ನಿಯಮಗಳೇ ಮುಂದುವರಿಯಲಿವೆ. ಬಳಿಕ ಕೇಂದ್ರ ಸರ್ಕಾರದ ಮುಂದಿನ ಗೈಡ್‌ಲೈನ್ಸ್ ಮೇಲೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಲಿದೆ.
ಲಾಕ್‌ಡೌನ್‌ನಿಂದ ನೇಣಿಗೆ ಕೊರಳೊಡ್ಡಿದ ನಟ, ರಾಜ್ಯಕ್ಕೆ ಮತ್ತೆ ಕೊರೋನಾ ಕಂಟಕ; ಮೇ.17ರ ಟಾಪ್ 10 ಸುದ್ದಿ!
ಕೇಂದ್ರ ಸರ್ಕಾರದ ನಾಲ್ಕನೇ ಹಂತದ ಗೈಡ್‌ಲೈನ್ಸ್ ಬರುವ ಮೊದಲೇ ಮೇ.19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.
ಕೋವಿಡ್-19 ನಿಯಂತ್ರಣಕ್ಕೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ತಿಳಿಸಿದ್ದಾರೆ.