Asianet Suvarna News Asianet Suvarna News

ಅಸ್ಥಿ ವಿಸರ್ಜನೆಗೆ ಅಡ್ಡಿಪಡಿಸುವಂತಿಲ್ಲ : 4 ಜನಕ್ಕೆ ಅವಕಾಶ

  • ಅಸ್ಥಿ ವಿಸರ್ಜನೆಗೆ ತೆರಳುವವರನ್ನು ಮಾರ್ಗ ಮಧ್ಯೆ ಯಾರೂ ತಡೆಯಬಾರದು 
  • ರಾಜ್ಯ ಸರ್ಕಾರದಿಂದ ಅಸ್ಥಿ ವಿಸರ್ಜನೆಗೆ ಅವಕಾಶ 
  • ಸೂಕ್ತ ಎನಿಸುವ ಸ್ಥಳಗಳಲ್ಲಿ ವಿಸರ್ಜಿಸಲು, ಇದಕ್ಕಾಗಿ ಗರಿಷ್ಠ ನಾಲ್ಕು ಜನರು ತೆರಳಲು ಅವಕಾಶ 
Karnataka Govt Gives Permission To Ashes immersion snr
Author
Bengaluru, First Published May 25, 2021, 8:36 AM IST

ಬೆಂಗಳೂರು (ಮೇ.25):  ಕೋವಿಡ್‌ ಸೋಂಕಿನಿಂದ ಅಥವಾ ಇತರೆ ಕಾರಣಗಳಿಂದ ಸಾವನ್ನಪ್ಪಿರುವ ವ್ಯಕ್ತಿಯ ಅಸ್ಥಿ ವಿಸರ್ಜನೆಗೆ ತೆರಳುವವರನ್ನು ಮಾರ್ಗ ಮಧ್ಯೆ ಯಾರೂ ತಡೆಯಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೃತ ವ್ಯಕ್ತಿಗಳ ಅಸ್ಥಿಯನ್ನು ಅವರವರ ಧಾರ್ಮಿಕ ವಿಧಾನಗಳನ್ವಯ ಅವರಿಗೆ ಸೂಕ್ತ ಎನಿಸುವ ಸ್ಥಳಗಳಲ್ಲಿ ವಿಸರ್ಜಿಸಲು, ಇದಕ್ಕಾಗಿ ಗರಿಷ್ಠ ನಾಲ್ಕು ಜನರು ತೆರಳಲು ಅವಕಾಶ ಕಲ್ಪಿಸಿಕೊಡಲಾಗಿದೆ. ಈ ವೇಳೆ ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮೃತರ ಅಸ್ಥಿ ವಿಸರ್ಜನೆಗೆ ಸಾರ್ವಜನಿಕರಾಗಲಿ ಅಥವಾ ಸಂಬಂಧಿಸಿದ ಪ್ರಾಧಿಕಾರಗಳಾಗಲಿ ಅಡ್ಡಿಪಡಿಸುವಂತಿಲ್ಲ. ಈ ಆದೇಶವನ್ನು ಬಿಬಿಎಂಪಿ, ಪೊಲೀಸ್‌ ಇಲಾಖೆ, ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು, ಸ್ಥಳೀಯ ಪ್ರಾಧಿಕಾರಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಸರ್ಕಾರದ ಬಳಿ 1000 ಅನಾಥ ಶವಗಳ ಅಸ್ಥಿ: ಸಚಿವ ಅಶೋಕ್ ..

ಮೃತ ವ್ಯಕ್ತಿಗಳ ಅಂತ್ಯಸಂಸ್ಕಾರ ಬಳಿಕ ಅಸ್ಥಿಯನ್ನು ಅವರವರ ಧರ್ಮಾನುಸಾರ ವಿಸರ್ಜಿಸುವ ಪದ್ಧತಿ ರೂಢಿಯಲ್ಲಿದೆ. ಇಂತಹ ಕ್ರಿಯೆಗೆ ತೆರಳುವ ಮೃತರ ಸಂಬಂಧಿಕರು ಅಥವಾ ವಾರಸುದಾರರ ಸಂಚಾರಕ್ಕೆ ಮತ್ತು ವಿಸರ್ಜನಾ ಸ್ಥಳದಲ್ಲಿ ಅವಕಾಶ ಮಾಡಿಕೊಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಇದನ್ನು ಪರಿಗಣಿಸಿದ ಕಂದಾಯ ಸಚಿವ ಆರ್‌.ಅಶೋಕ್‌ ಅವರು ಮೃತರ ಅಸ್ಥಿಯನ್ನು ಅವರವರ ಧಾರ್ಮಿಕ ವಿಧಿ-ವಿಧಾನಗಳನುಸಾರ ಅವರಿಗೆ ಸೂಕ್ತವೆನಿಸುವ ಸ್ಥಳದಲ್ಲಿ ವಿಸರ್ಜಿಸಲು ಯಾವುದೇ ಅಡಚಣೆಯನ್ನು ನೀಡದೆ ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಆದೇಶದಲ್ಲಿ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios