Asianet Suvarna News Asianet Suvarna News

ಸರ್ಕಾರಿ ಆಸ್ಪತ್ರೆಗಳಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಹುದ್ದೆ ಖಾಲಿ: ಸುಮೊಟೊ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್‌

ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ 16,500ಕ್ಕೂ ಅಧಿಕ ಹುದ್ದೆಗಳು ಖಾಲಿ ಇರುವುದಕ್ಕೆ ಹೈಕೋರ್ಟ್‌ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.

Karnataka govt hospitals have 16500 medical staff vacancies High Court files self PIL sat
Author
First Published Nov 7, 2023, 3:27 PM IST

ಬೆಂಗಳೂರು (ನ.07): ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳು ವೈದ್ಯಕೀಯ ಕಾಲೇಜುಗಳು ಸೇರಿದಂತೆ 16,500ಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿಯ ಹುದ್ದೆಗಳು ಖಾಲಿಯಿದ್ದರೂ ಸರ್ಕಾರ ಮಾತ್ರ ನೇಮಕಾತಿ ಮಾಡಿಕೊಳ್ಳದೇ ಸಾರ್ವಜನಿಕರಿಗೆ ಗುಣಮಟ್ಟದ ಚಿಕಿತ್ಸೆ ನೀಡವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ರಾಜ್ಯ ಸರ್ಕಾರದ ವಿರುದ್ಧ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ದಾಖಲಿಸಿಕೊಂಡಿದೆ.

ರಾಜ್ಯದ ಆಸ್ಪತ್ರೆಗಳಲ್ಲಿ 16500 ವೈದ್ಯಕೀಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದೆ, ಈ ಮೂಲಕ ಪ್ರಕರಣದ ಮಾಹಿತಿಯನ್ನು ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ರಾಜ್ಯದಲ್ಲಿ454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಜೊತೆಗೆ, ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಮೂಲಸೌಕರ್ಯ ಸಮಸ್ಯೆಯಿದೆ. ರಾಜ್ಯದ ಆಸ್ಪತ್ರೆಗಳಲ್ಲಿ 1,60,000  ಬೆಡ್ ಗಳ ಅವಶ್ಯಕತೆ ಇದೆ. 

ಜಯನಗರ ಶಾಪಿಂಗ್‌ ಕಾಂಪ್ಲೆಕ್ಸ್‌ ಫುಟ್‌ಪಾತ್ ಒತ್ತುವರಿ ವ್ಯಾಪಾರಿಗಳನ್ನು ತೆರವುಗೊಳಿಸಿದ ಬಿಬಿಎಂಪಿ!

ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಶೇ.39.1 ರಷ್ಟು ನರ್ಸ್ ಗಳ ಕೊರತೆ ಇದೆ. ವೈದ್ಯಕೀಯ ಸೌಕರ್ಯದ‌ ಕೊರತೆಗೆ ಹೈಕೋರ್ಟ್ ಕಳವಳ ವ್ಯಕ್ತವಾಗಿದೆ. ಈ ವರದಿಗಳನ್ನು ಆಧರಿಸಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ. ಕೋರ್ಟ್ ಗೆ ನೆರವಾಗಲು ಅಮೈಕಸ್ ಕ್ಯೂರಿಯಾಗಿ ವಕೀಲ ಶ್ರೀಧರ್ ಪ್ರಭು ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠವು ಸುಮೊಟೋ ಪಿಐಎಲ್‌ ದಾಖಲಿಸಿಕೊಂಡಿದ್ದು, ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಸರ್ಕಾರಕ್ಕೆ ನೋಟಿಸ್‌ ನೀಡಲಾಗಿದೆ.

ಬೆಂಗಳೂರು (ನ.07): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಜಯನಗರ ಬಿಡಿಎ ಶಾಪಿಂಗ್​ ಕಾಂಪ್ಲೆಕ್ಸ್ ಬಳಿ ವ್ಯಾಪಾರ- ವಹಿವಾಟು ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಭರ್ಜರಿ ಶಾಕ್ ನೀಡಿದೆ. ಅಂದರೆ ಅನಧಿಕೃತವಾಗಿ ಪೆಟ್ಟಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ಎಲ್ಲ ಬೀದಿ ಬದಿ ವ್ಯಾಪಾರಿಗಳನ್ನು ಬಿಬಿಎಂಪಿ ಅಧಿಕಾರಿಗಳು ಜೆಸಿಬಿ ಮೂಲಕ ತೆರವುಗೊಳಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ತೆರವು ಕಾರ್ಯಾಚರಣೆ ಕೈಗೊಂಡಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ 45 ತರಕಾರಿ ಅಂಗಡಿಗಳು ಹಾಗೂ 17 ಡಬ್ಬಿ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವು ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಪರವಾಗಿ ಬ್ಯಾಟ್‌ ಬೀಸಿದ ನಟ ಅಹಿಂಸಾ ಚೇತನ್‌

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿ ಉಂಟಾಗಿದೆ. ಫುಟ್‌ಪಾತ್‌ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವು ಕಾರ್ಯವನ್ನು ಬಿಬಿಎಂಪಿ ಕೈಗೆತ್ತಿಕೊಂಡಿದೆ. ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ ಎದುರು ನೋಡುತ್ತಿದ್ದ ಫುಟ್‌ಪಾತ್‌ ಅನ್ನು ಒತ್ತುವರಿ ಮಾಡಿಕೊಂಡು ಅಂಗಡಿ-ಮುಂಗಟ್ಟು ಇಟ್ಟುಕೊಂಡಿದ್ದ ವ್ಯಾಪಾರಿಗಳನ್ನು ತೆರವು ಮಾಡಲಾಗುತ್ತಿದೆ. ಬಿಬಿಎಂಪಿ ಮಾರ್ಷಲ್‌ಗಳ ತಂಡ ಸ್ಥಳಕ್ಕೆ ಆಗಮಿಸಿ, ಬೀದಿಬದಿ ವ್ಯಾಪಾರಿಗಳನ್ನು ಫುಟ್‌ಪಾತ್‌ನಿಂದ ತೆರವು ಮಾಡಲಾಗುತ್ತಿದ್ದು, ಅವರ ಅಂಗಡಿಗಳನ್ನ ಜೆಸಿಬಿ‌ ಮೂಲಕ ಕೆಡವಿ ಹಾಕಲಾಗುತ್ತಿದೆ.

Follow Us:
Download App:
  • android
  • ios