ಬೆಂಗಳೂರು, (ಡಿ.16) : ಸರ್ಕಾರಿ ಸೇವೆಯು ಸಾರ್ವಜನಿಕ ಸೇವೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕಛೇರಿಗಳಿಗೆ ಬರುವಂತ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ಹಾಗೂ ಸಮಾಧಾನವಾಗಿ ವರ್ತಿಸುವಂತೆ ರಾಜ್ಯ ಸರ್ಕಾರ, ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದೆ.

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಆಸು-ತಪಾಸಣೆ)ಯ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಸಿ.ಹರ್ಷರಾಣಿ, ಸರ್ಕಾರಿ ಸೇವೆಯು ಸಾರ್ವಜನಿಕ ಸೇವೆಯಾಗಿರುವುದರಿಂದ, ಸಾರ್ವಜನಿಕರು ತಮ್ಮ ಸಮಸ್ಯೆಯ ಕುರಿತು ವ್ಯವಹರಿಸಲು ಸರ್ಕಾರಿ ಕಛೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ, ಸಮಾಧಾನವಾಗಿ ವರ್ತಿಸ ಬೇಕೆಂದು ತಿಳಿಸಿದೆ.

ಬಲಿಷ್ಠ ಭಾರತ ತಂಡ ಪ್ರಕಟ, ಕೋತಿ ದಾಳಿಯಿಂದ ಬಚಾವ್ ಆದ ಶಾಸಕ; ಡಿ.16ರ ಟಾಪ್ 10 ಸುದ್ದಿ!

ಇನ್ನೂ ಮುಂದುವರೆದು, ತಾರತಮ್ಯ ಮಾಡದೇ ಬಂದವರೆಲ್ಲರಿಗೂ ಕುರ್ಚಿಗಳಲ್ಲಿ ಕುಳಿತುಕೊಳ್ಳಲು ಹೇಳುವಂತೆ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗಳಿಗೆ ಹಾಗೂ ಅಧೀನ ಇಲಾಖೆಗಳ ಮುಖ್ಯಸ್ಥರ ಮೂಲಕ ಎಲ್ಲಾ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ತಿಳಿಸುವಂತೆ ಸೂಚಿಸಿದ್ದಾರೆ.