Asianet Suvarna News Asianet Suvarna News

ಸಂಧ್ಯಾ ಸುರಕ್ಷಾ, ದಿವ್ಯಾಂಗ,ವಿಧವಾ ವೇತನ ಹೆಚ್ಚಳ: ಅಧಿಕೃತ ಆದೇಶ ಹೊರಡಿಸಿದ ಸಿಎಂ

* ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ದಿವ್ಯಾಂಗ ವೇತನ ಹೆಚ್ಚಳ
* ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
* ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನ ಘೋಷಣೆ ಮಾಡಿದ್ದ ಬಸವರಾಜ ಬೊಮ್ಮಾಯಿ

Karnataka Govt issued official order of increase monthly pension schemes rbj
Author
Bengaluru, First Published Jul 31, 2021, 8:26 PM IST

ಬೆಂಗಳೂರು, (ಜು.31): ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ  ಮಾಸಾಶನಗಳ ಹೆಚ್ಚಳ ಘೋಷಣೆ ಮಾಡಿದ್ದರು. ಇಂದು (ಶನಿವಾರ) ಮಾಸಾಶನಗಳನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈತ ಮಕ್ಕಳಿಗೆ ಶಿಕ್ಷಣ ವೇತನ,  ಸಂಧ್ಯಾ ಸುರಕ್ಷಾ ಯೋಜನೆ,  ವಿಧವಾ ವೇತನ ಹೆಚ್ಚಳ ಮಾಡಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ ದಿನ(ಜುಲೈ.28)ರಂದು ಘೋಷಿಸಿದ್ದರು. ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಿಡಿಸಿದೆ.

ಸಿಎಂ ಆದ ಮೊದಲ ದಿನವೇ ಮಹತ್ವದ ಘೋಷಣೆ ಮಾಡಿದ ಬಸವರಾಜ ಬೊಮ್ಮಾಯಿ..!

ಅಂಗವೈಕಲ್ಯವಿರುವವರಿಗೆ ಮಾಸಿಕವಾಗಿ ಈಗ ನೀಡಲಾಗುತ್ತಿರುವ 600 ರೂಪಾಯಿಗಳ ವೇತನವನ್ನು 800 ರೂಗೆ ಏರಿಕೆ ಮಾಡಲಾಗಿದ್ದು, 3.66 ಸಾವಿರ ಫಲಾನುಭವಿಗಳು ಪ್ರಯೋಜನವಾಗಲಿದ್ದು ಸರ್ಕಾರದ ಬೊಕ್ಕಸಕ್ಕೆ 90 ಕೋಟಿ ಹೆಚ್ಚು ವೆಚ್ಚವಾಗಲಿದೆ

ವಿಧವಾ ವೇತನವನ್ನೂ 600 ರಿಂದ 800 ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ ಹಾಗೂ 414 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆ 1,000ರಿಂದ 1200 ರೂಪಾಯಿಗಳಿಗೆ ಏರಿಕೆ ಮಾಡಿದ್ದು, ಇದರಿಂದ 35 ಲಕ್ಷ ಫಲಾನುಭವಿಗಳಿಗೆ ಲಾಭ ಉಂಟಾಗಲಿದೆ. ಸರ್ಕಾರಕ್ಕೆ 863 ಕೋಟಿ ರೂಪಾಯಿ ಹೆಚ್ಚು ಖರ್ಚಾಗಲಿದೆ.

Follow Us:
Download App:
  • android
  • ios