Asianet Suvarna News Asianet Suvarna News

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರೋರಿಗೆ ಮತ್ತೊಂದು ರೂಲ್ಸ್ ಮಾಡಿದ ಸರ್ಕಾರ

ಕರ್ನಾಟಕದಲ್ಲಿ ಹೊರ ರಾಜ್ಯದಿಂದ ಬಂದವರಿಂದ ಕೊರೋನಾ ಪಾಸಿಟಿವ್‌ ಕೇಸ್‌ಗಳು ತೀವ್ರಗತಿಯಲ್ಲಿ ಏರುತ್ತಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗಾಗಿ ಮತ್ತೊಂದು ಹೊಸ ರೂಲ್ಸ್ ಜಾರಿ ಮಾಡಿದೆ.

Karnataka Govt Makes 14-Day Quarantine Mandatory For All inter state Returnees for Covid19
Author
Bengaluru, First Published Jun 22, 2020, 2:33 PM IST

ಬೆಂಗಳೂರು, (ಜೂನ್. 22): ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಅದರಲ್ಲೂ ಹೊರ ರಾಜ್ಯಗಳಿಂದ ಬರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ  ಹೊರ ರಾಜ್ಯಗಳಿಂದ ಬರೋರಿಗೆ ಕರ್ನಾಟಕ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ.

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನ ಕ್ವಾರಂಟೈನ್​ ಈಗ ಕಡ್ಡಾಯ ಮಾಡಲಾಗಿದೆ. ಇತ್ತೀಚೆಗೆ ಸರ್ಕಾರ ಈ ಅವಧಿಯನ್ನು ಕಡಿತ ಮಾಡಿತ್ತು. ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಕ್ವಾರಂಟೈನ್​ ಅವಧಿ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರೋರಿಗೆ ಹೊಸ ರೂಲ್ಸ್

ಇತ್ತೀಚೆಗೆ ಕ್ವಾರಂಟೈನ್​ ನಿಯಮ ಸಡಿಲಗೊಳಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರ 7 ದಿನ ಸಾಂಸ್ಥಿಕ ಕ್ವಾರಂಟೈನ್​ ಮತ್ತು 7 ದಿನ ಹೋಂ ಕ್ವಾರಂಟೈನ್​ಗೆ ಸೂಚಿಸಿತ್ತು. 

ಇತರ ರಾಜ್ಯದಿಂದ ಬರುವವರಿಗೆ 14 ದಿನಗಳ ಹೋಂ ಕ್ವಾರಂಟೈನ್​ಗೆ ಒಳಪಡಿಸಲಾಗುತ್ತಿತ್ತು.  ನಂತರದ ಬದಲಾವಣೆಯಲ್ಲಿ ದೆಹಲಿ ಮತ್ತು ಗುಜರಾತ್​ ರಾಜ್ಯದಿಂದ ಬಂದವರಿಗೆ 3ದಿನ ಸಾಂಸ್ಥಿಕ ಕ್ವಾರಂಟೈನ್​, 11 ದಿನ ಹೋಂ ಕ್ವಾರಂಟೈನ್​ ಎಂದು ಹೇಳಲಾಗಿತ್ತು. ಈಗ ಹೊರ ರಾಜ್ಯದಿಂದ ಬರುವವರಿಗೆ 14 ದಿನ ಕ್ವಾರಂಟೈನ್​ ಕಡ್ಡಾಯ ಮಾಡಲಾಗಿದೆ.

Follow Us:
Download App:
  • android
  • ios