Ravi D channannavar Transfer ರವಿ ಡಿ ಚನ್ನಣ್ಣನವರ್ ವರ್ಗಾವಣೆ ತಡೆಹಿಡಿದ ಕರ್ನಾಟಕ ಸರ್ಕಾರ

* ರವಿ ಡಿ ಚನ್ನಣ್ಣನವರ್ ವರ್ಗಾವಣೆ ತಡೆಹಿಡಿದ ಕರ್ನಾಟಕ ಸರ್ಕಾರ
* ರವಿ ಡಿ ಚನ್ನಣ್ಣನವರ್ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆಗೊಂಡಿದ್ದರು
* ನಿನ್ನೆ(ಜ.27) ಅಷ್ಟೇ ರವಿ ಡಿ ಚನ್ನಣ್ಣನವರ್ ಸೇರಿದಂತೆ 9 ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು

Karnataka Govt orders to keep in abeyance transfer of Ravi D channannavar rbj

ಬೆಂಗಳೂರು, (ಜ.28): ಐಪಿಎಸ್ ರವಿ ಡಿ ಚನ್ನಣ್ಣನವರ್ (Ravi D Channannavar) ಅವರನ್ನ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿ ಹೊರಡಿಸಲಾಗಿದ್ದ ಆದೇಶವನ್ನು ತಡೆಹಿಡಿಯಲಾಗಿದೆ.

ನಿನ್ನೆ(ಜ.27) ಅಷ್ಟೇ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು ಇದರಲ್ಲಿ ರವಿ ಡಿ ಚನ್ನಣ್ಣನವರ್ ಸಹ ಇದ್ದರು. ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ(Transfer) ಮಾಡಲಾಗಿತ್ತು.

ಆದ್ರೆ, ಇದೀಗ  ಕರ್ನಾಟಕ ಸರ್ಕಾರ ಏಕಾಏಕಿ ರವಿ ಡಿ ಚನ್ನಣ್ಣನವರ್ ಅವರ ವರ್ಗಾವಣೆ ಆದೇಶನ್ನು ತಡೆಯಿಡಿಲಾಗಿದೆ ಎಂದು ಸುತ್ತೋಲೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರವಿ ರವಿ ಡಿ ಚನ್ನಣ್ಣನವರ್ ವರ್ಗಾವಣೆಗೆ ಸರ್ಕಾರ ಬ್ರೇಕ್ ಹಾಕಿದೆ. 

ರವಿ ಡಿ. ಚನ್ನಣ್ಣನವರ್ ಸೇರಿ ಕರ್ನಾಟಕದ 9 IPS​ ಅಧಿಕಾರಿಗಳ ವರ್ಗಾವಣೆ

ಪೊಲೀಸ್ ಇಲಾಖೆಯಿಂದ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮಕ್ಕೆ ವರ್ಗಾವಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಒಂದು ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆದಿವೆ..

ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಸದ್ಯ ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ತಮ್ಮ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ಕೂಡ ತಂದಿದ್ದಾರೆ. ಇದನ್ನೆಲ್ಲ ಗಮನಿಸಿದ ಬಿಜೆಪಿ ಸರ್ಕಾರ ಶಿಕ್ಷೆ ರೂಪದಲ್ಲಿ ಇವರನ್ನು ವಾಲ್ಕೀಕಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಿದೆ ಎನ್ನುವ ಮಾತುಗಳು ಕೇಳಿಬಂದಿವೆ.

ರವಿ ಡಿ ಚನ್ನಣ್ಣನವರ್ ವಿರುದ್ಧ ಗಂಭೀರ ಆರೋಪ
ಕೆಲವು ದಿನಗಳಿಂದ ರವಿ ಡಿ ಚೆನ್ನಣ್ಣವರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಇವರ ವಿರುದ್ಧ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ಈ ದೂರಿನ ಪ್ರತಿ ಹೊರ ಬಿದ್ದಿದ್ದೇ ದೊಡ್ಡ ವಿವಾದ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ರವಿ ಡಿ. ಚನ್ನಣ್ಣನವರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಪ್ರಕರಣ ಸಂಬಂಧ ಮಂಜುನಾಥ್ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್ 25 ಲಕ್ಷ, ಡಿವೈಎಸ್‍ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ.

Latest Videos
Follow Us:
Download App:
  • android
  • ios