Asianet Suvarna News Asianet Suvarna News

ಸೂರಿಲ್ಲದವರಿಗೆ ರಾಜ್ಯದಲ್ಲಿ 6 ಲಕ್ಷ ಮನೆಗಳ ನಿರ್ಮಾಣದ ಗುರಿ V Somanna

  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಸಚಿವ ವಿ.ಸೋಮಣ್ಣ ಭರವಸೆ
  • ಸೂರಿಲ್ಲದೇ ಯಾರೂ ತೊಂದರೆ ಅನುಭವಿಸಬಾರದು ಎಂದ ವಸತಿ ಸಚಿವರು.
  • ಜಿ+2 ಮಾದರಿಯ 1008 ಮನೆಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ 
Karnataka Govt planning to build 6 lakh houses  says minister  V Somanna
Author
Bengaluru, First Published May 10, 2022, 5:37 PM IST | Last Updated May 10, 2022, 5:37 PM IST

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ (ಮೇ.10): ಕೊಳಚೆ ಅಭಿವೃದ್ಧಿ ಮಂಡಳಿಯಿಂದ (Karnataka Slum Development Board) ರಾಜ್ಯದಲ್ಲಿ 1.80 ಲಕ್ಷ ಮನೆ ನಿರ್ಮಾಣ ಮಾಡಲಾಗಿದೆ. 40 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಮುಖ್ಯಮಂತ್ರಿಗಳು 6 ಲಕ್ಷ ಮನೆಗಳ ನಿರ್ಮಾಣಕ್ಕೆ ಗುರಿ ನೀಡಿದ್ದಾರೆ. ಈಗಾಗಲೇ 4 ಲಕ್ಷ ಮನೆಗಳನ್ನು ನಗರ ಪ್ರದೇಶದಲ್ಲಿ ಹಾಗೂ 1 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ನಿರ್ಮಿಸಿ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ವಸತಿ ಸಚಿವ ವಿ‌.ಸೋಮಣ್ಣ ಹೇಳಿದರು. 

ಚಳ್ಳಕೆರೆ ನಗರದ ಕೆ.ಹೆಚ್.ಬಿ.ಲೇಔಟ್ ನಲ್ಲಿ ಮಂಗಳವಾರ ವಸತಿ ಇಲಾಖೆ, ರಾಜೀವ್ ಗಾಂಧಿ ವಸತಿ ನಿಗಮ, ಜಿಲ್ಲಾಡಳಿತ ಹಾಗೂ ಚಳ್ಳಕೆರೆ ನಗರ ಸಭೆ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಆವಾಜ್ ಯೋಜನೆಯಡಿ (ನಗರದ) ಎ.ಹೆಚ್.ಪಿ ಘಟಕದಡಿ ಜಿ+2 ಮಾದರಿಯ 1008 ಮನೆಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.  ಈ ಬಗ್ಗೆ ಸಚಿವರು ಟ್ವೀಟ್ ಮಾಡಿ ಕೂಡ ಶಂಕುಸ್ಥಾಪನೆ ಮಾಡಿರುವ ಬಗ್ಗೆ ತಿಳಿಸಿದ್ದಾರೆ.

 

ರಾಜೀವ್ ಗಾಂಧಿ ವಸತಿ ನಿಗಮದಿಂದ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಸರ್ಕಾರದಿಂದ ಮಂಜೂರು ಮಾಡಿದ ಮನೆಗಳನ್ನು ಅಡಮಾನ ಹಾಗೂ ಭೋಗ್ಯಕ್ಕೆ ಪಡೆಯುವ ಪದ್ದತಿಯನ್ನು ತಡೆಯಲಾಗಿದೆ. ಮನೆಗಳನ್ನು ಮಹಿಳಾ ಫಲಾನುಭವಿಗಳ ಹೆಸರಿಗೆ ನೀಡಲಾಗುತ್ತಿದೆ. ಮನೆಗಳಿಗೆ ನೀಡುತ್ತಿರುವ ಅನುದಾನ ಮೊತ್ತ ಹೆಚ್ಚಳಕ್ಕೆ ಕೇಂದ್ರ ಸಚಿವರಿಂದ ಜೊತೆ ಚರ್ಚಿಸಲಾಗುವುದು. ಗ್ರಾಮೀಣ ಭಾಗದಲ್ಲಿ ವಸತಿಯೋಜನೆ ಫಲಾನುಭವಿಗಳ ಆಯ್ಕೆಗೆ ಆದಾಯ ಮಿತಿಯನ್ನು 37 ಸಾವಿರ ರೂಪಾಯಿಗಳಿಂದ 1.20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ನಗರ ಪ್ರದೇಶದಲ್ಲಿ 87 ಸಾವಿರ ಇದ್ದ ಆದಾಯ ಮಿತಿಯನ್ನು 3 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದರು.

Mandya Rain Effect 90ಕ್ಕೂ ಹೆಚ್ಚು ತೆಂಗಿನಮರ ನೆಲಸಮ, ಕಣ್ಣೀರಿಟ್ಟ ವೃದ್ಧೆ

ಮಾಜಿ ಸಚಿವ ತಿಪ್ಪೇಸ್ವಾಮಿ ಹೆಸರಿಡಲು ಸೂಚನೆ: ಕಾಡುಗೊಲ್ಲರು, ಸುಡಗಾಡು ಸಿದ್ದರು ಸೇರಿದಂತೆ ಹಿಂದುಳಿದ ವರ್ಗಗಳಿಗೆ ದೇವರಾಜ ಅರಸು ನಿಗಮದಿಂದ ಮನೆ ನೀಡಲಾಗುತ್ತಿದೆ. ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲೆಮಾರಿ ಅರೆ ಅಲೆಮಾರಿ ಜನಾಂಗದವರಿಗೆ 3500 ಮನೆಗಳ ಮಂಜೂರು ಮಾಡಲಾಗಿದೆ. ಚಳ್ಳಕೆರೆ ನಗರದಲ್ಲಿ ಒಟ್ಟು 48 ಎಕರೆ ಪ್ರದೇಶದಲ್ಲಿ 63 ಕೋಟಿ ವೆಚ್ಚದಲ್ಲಿ ಜಿ+2 ಮಾದರಿಯ 1008 ಮನೆಗಳ ನಿರ್ಮಾಣ ಮಾಡಲಾಗುವುದು. ನಗರ ಸಭೆಯ ಸದಸ್ಯರು ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಾಣವಾಗುವಂತೆ ಕಾಲ ಕಾಲಕ್ಕೆ ಪರಿಶೀಲನೆ ನೆಡಸಬೇಕು.

ನೂತನವಾಗಿ ನಿರ್ಮಿಸಲಾಗುತ್ತಿರುವ ವಸತಿ ಸಂಕೀರ್ಣ ಪ್ರದೇಶಕ್ಕೆ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಮಂತ್ರಿ ತಿಪ್ಪೇಸ್ವಾಮಿ ಅವರ ಹೆಸರನ್ನು ಇಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಮಂಜೂರು ಆಗಿರುವ 198 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ನಿಗದಿತ ಕಾಲಮತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಜಿ+2 ಮಾದರಿಯಲ್ಲಿ ಹಮಾಲರಿಗೂ ಕೂಡ ಮನೆಗಳನ್ನು ನಿರ್ಮಿಸಲಾಗುತ್ತದೆ ಎಂದರು. 

Hubballi-Dharwad 7 ತಿಂಗಳಲ್ಲಿ 75 ಕೆರೆ ನಿರ್ಮಾಣದ ಗುರಿ

Latest Videos
Follow Us:
Download App:
  • android
  • ios