Asianet Suvarna News Asianet Suvarna News

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ : ಸರ್ಕಾರದ ಆದೇಶ

  • ಬಜೆಟ್‌ನಲ್ಲಿ ಘೋಷಿಸಿದಂತೆ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ಸ್ಥಾಪನೆ
  • ನಿಗಮದ ಚಟುವಟಿಕೆಗಾಗಿ 500 ಕೋಟಿ ರು. ಮೀಸಲು
  • ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013 ರಡಿಯಲ್ಲಿ ನೋಂದಾಯಿಸಿ ಸ್ಥಾಪನೆ
Karnataka Govt Released Fund For vokkaliga nigama snr
Author
Bengaluru, First Published Jul 18, 2021, 8:12 AM IST

 ಬೆಂಗಳೂರು (ಜು.18):  ಬಜೆಟ್‌ನಲ್ಲಿ ಘೋಷಿಸಿದಂತೆ ಒಕ್ಕಲಿಗ ಸಮುದಾಯದ ಅಭಿವೃದ್ಧಿಗಾಗಿ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ಸ್ಥಾಪನೆ ಮಾಡಿ, ನಿಗಮದ ಚಟುವಟಿಕೆಗಾಗಿ 500 ಕೋಟಿ ರು. ಮೀಸಲಿಟ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಾರ್ಚ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಂಡಿಸಿದ್ದ ಬಜೆಟ್‌ನಲ್ಲಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರು. ಮೀಸಲಿಡುವುದಾಗಿ ಘೋಷಿಸಿದ್ದರು.

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಇದರಂತೆ, ಒಕ್ಕಲಿಗ ಸಮುದಾಯಗಳಾದ ಪ್ರವರ್ಗ 3 ‘ಎ’ ವರ್ಗದಲ್ಲಿ ನಮೂದಿಸಲಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್‌ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್‌ ಒಕ್ಕಲಿಗ, ದಾಸ್‌ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್‌, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್‌, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಗಳ ಅಭಿವೃದ್ಧಿಗಾಗಿ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಲಾಗಿದೆ.

ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013 ರಡಿಯಲ್ಲಿ ನೋಂದಾಯಿಸಿ ಸ್ಥಾಪಿಸುವುದು. ಹಾಗೂ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಜಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios