* ರಾಜ್ಯ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್* ಸಾರಿಗೆ ನೌಕರರ ಸಂಬಳಕ್ಕೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ* ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಆದೇಶ
ಬೆಂಗಳೂರು, (ಆ.23): ರಾಜ್ಯ ಸರ್ಕಾರ ಜುಲೈ ತಿಂಗಳ ವೇತನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಒಟ್ಟು 60.82 ಕೋಟಿ ಹಣವನ್ನ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಇಂದು (ಆ.23) ಆದೇಶ ಹೊರಡಿಸಿದ್ದಾರೆ.
2021-22 ನೇ ಸಾಲಿನ ಆಯವ್ಯಯದ ಸಹಾಯಧನದಡಿ ಒದಗಿಸಿರುವ ಅನುದಾನದಡಿ ಒಟ್ಟಾರೆ 60.82 ಕೋಟಿ ರೂ ಹಣ ಬಿಡುಗಡೆಗೊಳಿಸಿದ್ದಾರೆ.
ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್‌ಗೆ ಚಾಲನೆ; 6 ಲಕ್ಷ ಕೋಟಿ ರೂ ಯೋಜನೆ ಘೋಷಿಸಿದ ನಿರ್ಮಲಾ!
ಕೆಎಸ್‌ಆರ್‌ಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಸಿಬ್ಬಂದಿ ಜುಲೈ ತಿಂಗಳ ಸಂಬಳಕ್ಕಾಗಿ ಶೇಕಡ 25% ರಷ್ಟು ಹಣವನ್ನ ನೀಡಿದೆ.
ಕೆಎಸ್‌ಆರ್‌ಟಿಸಿಗೆ 27.74 ಕೋಟಿ, ವಾಯುವ್ಯ ಸಾರಿಗೆ ನಿಗಮಕ್ಕೆ 17.48 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ 15.61 ಕೋಟಿ ಹಣವನ್ನ ಬಿಡುಗಡೆ ಮಾಡಿದೆ.
