ದೀಪಾವಳಿ, ಕನ್ನಡ ರಾಜ್ಯೋತ್ಸವ ಆಚರಣೆಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ

* ದೀಪಾವಳಿ ಹಬ್ಬ ಆಚರಣೆಗೆ  ಗೈಡ್‌ಲೈನ್ಸ್ ಬಿಡುಗಡೆ 
* ಕನ್ನಡ ರಾಜ್ಯೋತ್ಸವಕ್ಕೂ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ
* ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ

Karnataka Govt Releases Deepavali and kannada rajyotsava Covid Guidelines rbj

ಬೆಂಗಳೂರು, (ಅ.30): ದೀಪಾವಳಿ ಹಬ್ಬ ( Deepavali Festival) ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧ ರಾಜ್ಯ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.

ದೀಪಾವಳಿ ಹಬ್ಬ  ಆಚಕಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದ್ರೆ, ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ( Green Crackers) ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ಸರ್ಕಾರ ತಿಳಿಸಿದೆ.

ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ ಮಾಡಲು ಸರ್ಕಾರ ಆದೇಶ

ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.

ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ, ನವೆಂಬರ್ 01ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ರಾಜ್ಯದ ಜನತೆಯ ಹಿತದೃಷ್ಠಿಯಿಂದ ಮತ್ತು ಕೋವಿಡ್ ( Covid) ಹರಡುವಿಕೆಯನ್ನ ತಡೆಗಟ್ಟುವ ನಿಟ್ಟಿನಲ್ಲಿ, ದೀಪಾವಳಿ ಹಬ್ಬದ ಆಚರಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ನಿರ್ಧರಿಸಲಾಗಿದೆ. 

ಕನ್ನಡ ರಾಜ್ಯೋತ್ಸವ ಆಚರಣೆಗೂ ಗೈಡ್‌ಲೈನ್ಸ್ 
 ದೀಪಾವಳಿ ಹಬ್ಬಕ್ಕೆ ಮಾತ್ರವಲ್ಲದೇ ಕನ್ನಡ ರಾಜ್ಯೋತ್ಸವಕ್ಕೂ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು. ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಎಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆಗೆ 500 ಜನರಿಗೆ ಮಾತ್ರ ಅವಕಾಶ ಇರುತ್ತದೆ. ಸಾಮಾಜಿಕ ಅಂತರವಿಲ್ಲದೇ ನಡೆಸುವ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುತ್ತದೆ ಎಂದು ತಿಳಿಸಲಾಗಿದೆ.

 ದೇವಾಲಯಗಳಲ್ಲಿ ಗೋಪೂಜೆ ಮಾಡಲು ಆದೇಶ
ದೀಪಾವಳಿ ಬಲಿಪಾಡ್ಯಮಿ ದಿನದಂದು (Deepavali Balipadyami) (ನವೆಂಬರ್ 5) ರಾಜ್ಯದ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಮಾತೆಯನ್ನು ಪೂಜಿಸಿ ಆರಾಧಿಸಲು ಆದೇಶ ಹೊರಡಿಸಲಾಗಿದೆ.

ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆ ಇಂದು (ಅ.26) ಆದೇಶ ಹೊರಡಿಸಿದೆ.

ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಆದೇಶದಲ್ಲಿ ಸೂಚಿಸಲಾಗಿದೆ.

Latest Videos
Follow Us:
Download App:
  • android
  • ios