Asianet Suvarna News Asianet Suvarna News

16,000 ಕಲಾವಿದರಿಗೆ ರಾಜ್ಯ ಸರ್ಕಾರದ ಪ್ಯಾಕೇಜ್‌ ಬಿಡುಗಡೆ

  • ಕೋವಿಡ್‌ ಮಿನಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ  ಕಲಾವಿದರು
  • ಕಲಾವಿದರಿಗೆ ತಲಾ ಮೂರು ಸಾವಿರ ರು.ನಂತೆ ಆರ್ಥಿಕ ನೆರವು
  • ರಾಜ್ಯ ಸರ್ಕಾರದಿಂದ 4.82 ರು. ಅನುದಾನ ಮಂಜೂರು 
Karnataka Govt releases Fund For Artists Package snr
Author
Bengaluru, First Published May 28, 2021, 7:22 AM IST

 ಬೆಂಗಳೂರು (ಮೇ.28):  ಕೋವಿಡ್‌ ಮಿನಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ 16,095 ಜನ ಕಲಾವಿದರಿಗೆ ತಲಾ ಮೂರು ಸಾವಿರ ರು.ನಂತೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ 4.82 ರು. ಅನುದಾನ ಮಂಜೂರು ಮಾಡಿದೆ.

ಕಲಾವಿದರಿಗೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಅದರಂತೆ ಕನ್ನಡ ಸಂಸ್ಕೃತಿ ಇಲಾಖೆ ಮೂಲಕ ಕಲಾವಿದರಿಗೆ ಪರಿಹಾರ ನೀಡಲು ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿ 4.82 ಕೋಟಿ ರು.ಗಳಿಗೆ ಷರತ್ತು ಬದ್ಧ ಮಂಜೂರಾತಿ ನೀಡಿದೆ. ಇಲಾಖೆಯು ಈ ಅನುದಾನವನ್ನು ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಬೇಕು. ಪರಿಹಾರ ಮೊತ್ತವನ್ನು ಫಲಾನುಭವಿಗಳ ಕಾತೆಗೆ ನೇರವಾಗಿ ವರ್ಗಾಯಿಸಬೇಕು. ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ಮಾಸಾಶನ ಪಡೆದಿರುವರೇ ಇಲ್ಲವೇ ಎಂದು ಪರಿಶೀಲಿಸಿಕೊಂಡು ಮಾರ್ಗಸೂಚಿಯನುಸಾರ ನೆರವು ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೋವಿಡ್ ಪ್ಯಾಕೇಜ್: ಅರ್ಜಿ ಸಲ್ಲಿಕೆಗೆ ಚಾಲನೆ, ಈ ದಾಖಲೆಗಳು ಅತ್ಯವಶ್ಯಕ .

ಈ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು, ಪರಿಹಾರಕ್ಕೆ ಕಲಾವಿದರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಪ್ರತಿ ಜಿಲ್ಲೆಯಲ್ಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನು ಒಳಗೊಂಡ ಐದು ಜನರ ಸಮಿತಿಯು ಅರ್ಹ ಕಲಾವಿದರನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಬೇಕು. 15 ದಿನಗಳಲ್ಲಿ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಮಿಕರಿಗೂ ನೆರವು ಬಿಡುಗಡೆ

ಕೋವಿಡ್‌ ಮಿನಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿರುವ ವಿವಿಧ ವರ್ಗಗಳಿಗೆ 1250 ಕೋಟಿ ರು. ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರಿಗೆ 749 ಕೋಟಿ ರು. ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದೆ. ಪ್ರತಿ ಕಾರ್ಮಿಕನಿಗೆ 3000 ರು. ನೆರವು ನೀಡಲಾಗುತ್ತದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios