ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ.

ಬೆಂಗಳೂರು, (ಜುಲೈ.06) : ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಮತ್ತಷ್ಟು ಸಡಿಲಿಸಿದ್ದು, ಹೊರ ರಾಜ್ಯ ಅಥವಾ ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಿ, ಸಾಂಸ್ಥಿಕ ಕ್ವಾರಂಟೈನ್ ರದ್ದುಗೊಳಿಸಿದೆ.

ಅಂತರರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಇದ್ದ ಹೋಂ ಕ್ವಾರಂಟೈನ್ ನಿಯಮಗಳನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. 

ಈ ಹಿಂದೆ ಇದ್ದ 7 ದಿನದ ಹೋಂ ಕ್ವಾರಂಟೈನ್ ಕಡ್ಡಾಯ ಎನ್ನುವ ನಿಯಮವನ್ನು ಬದಲಾವಣೆ ಮಾಡಲಾಗಿದ್ದು, ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸಿದರೆ 14 ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿರಬೇಕು. 

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ ರೆಡಿಯಾಗ್ತಿದೆ ದೇಶದ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್

Scroll to load tweet…

ಜನರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸಿದರೆ 7 ದಿನದ ಸಾಂಸ್ಥಿಕ ಕ್ವಾರಂಟೈನ್, 7 ದಿನದ ಹೋಂ ಕ್ವಾರಂಟೈನ್‌ ಕಡ್ಡಾಯವಾಗಿತ್ತು. ಇನ್ನು ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯದಿಂದ ಬಂದರೆ 7 ದಿನದ ಹೋಂ ಕ್ವಾರಂಟೈನ್‌ಗೆ ಒಳಪಡಬೇಕಿತ್ತು.

ಇದೀಗ ಹೊಸ ಆದೇಶದಂತೆ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನದ ಹೋಂ ಕ್ವಾರಂಟೈನ್ ಪಾಲಿಸಬೇಕು. ರೈಲು, ವಿಮಾನದ ಮೂಲಕ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವವರು ಹೊಸ ಕ್ವಾರಂಟೈನ್ ನಿಯಮಗಳನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Scroll to load tweet…