ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರೋರಿಗೆ ರೂಲ್ಸ್ ಬದಲಿಸಿದ ಸರ್ಕಾರ

ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್‌ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಮತ್ತೆ ಬದಲಾವಣೆಯನ್ನು ಮಾಡಿದೆ.

Karnataka Govt releases new quarantine guidelines For inter state returnees Over Covid19

ಬೆಂಗಳೂರು, (ಜೂ.28): ಈಗಾಗಲೇ ಜಾರಿಯಲ್ಲಿರುವ ಕ್ವಾರಂಟೈನ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಹೊಸ ಆದೇಶವನ್ನು ಸರ್ಕಾರ ಹೊರಡಿಸಿದೆ.

ಸರ್ಕಾರದ ಹೊಸ ಆದೇಶದ ಪ್ರಕಾರ ಮಹಾರಾಷ್ಟ್ರದಿಂದ ಆಗಮಿಸುವವರಿಗೆ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ಕಡ್ಡಾಯ. 

ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರೋರಿಗೆ ಮತ್ತೊಂದು ರೂಲ್ಸ್ ಮಾಡಿದ ಸರ್ಕಾರ

ಇನ್ನು ಮಹಾರಾಷ್ಟ್ರ ಹೊರತಾಗಿ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಬದಲು  14 ದಿನಗಳ ಕಾಲ ಹೋಮ್ ಕ್ವಾರಂಟೈನ್‌ ಪಾಲನೆ ಮಾಡುವಂತೆ ಆದೇಶದಲ್ಲಿ ಉಲ್ಲೇಖಿಸಿದೆ.

ಅದರಲ್ಲೂ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿದ್ದವರನ್ನು  ಕ್ವಾರಂಟೈನ್‍ನಲ್ಲಿರಿಸಲು ಸರ್ಕಾರ ಹರಸಾಹಸ ಪಡುತ್ತಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣ ಮಾಡಲು ಸಾಕಷ್ಟು ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ.

Latest Videos
Follow Us:
Download App:
  • android
  • ios