Asianet Suvarna News Asianet Suvarna News

ಕೊರೋನಾ ವೈರಸ್ ಆತಂಕದ ಮಧ್ಯೆ ಪ್ರವಾಹ ಭೀತಿ: ಕೆಲವೊಂದಷ್ಟು ಪರಿಹಾರ ಘೋಷಿಸಿದ ಸರ್ಕಾರ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಪರಿಹಾರಧನ ಹೆಚ್ಚಿಸಿದೆ. 

Karnataka govt releases revised guidelines For relief for who lost homes in flood
Author
Bengaluru, First Published Aug 8, 2020, 10:00 PM IST

ಬೆಂಗಳೂರು, (ಆ.08): ಮಳೆಯಿಂದಾಗಿ ಮನೆಯಲ್ಲಿನ ಬಟ್ಟೆ, ದಿನಬಳಕೆ, ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿದ್ದಲ್ಲಿ ಕೇಂದ್ರದ ಮಾರ್ಗಸೂಚಿಯ ಜತೆಗೆ ರಾಜ್ಯ ಸರ್ಕಾರವೂ ಸಹ ಹೆಚ್ಚಿನ ಪರಿಹಾರ ನೀಡಲಿದೆ ಎಂದು ತಿಳಿಸಿದೆ. 

ಶೇ. 75 ಕ್ಕಿಂತ ಹೆಚ್ಚು ಹಾನಿಗೀಡಾದ ಮನೆಗಳಿಗೆ ಪರಿಷ್ಕೃತ ಮಾರ್ಗಸೂಚಿಯಂತೆ 5 ಲಕ್ಷ ರೂಪಾಯಿ, ಶೇ. 25 ರಿಂದ 75 ರಷ್ಟು ಹಾನಿಗೀಡಾಗಿ, ವಾಸಿಸಲು ಯೋಗ್ಯವಿಲ್ಲದೆ ಪುನರ್ ನಿರ್ಮಾಣ ಮಾಡಲೇಬೇಕಾದ ಮನೆಗಳಿಗೂ ಸಹ 5 ಲಕ್ಷ ರೂಪಾಯಿ.

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

 ಶೇ. 25 ರಿಂದ 75 ರಷ್ಟು ಹಾನಿಗೀಡಾಗಿ ದುರಸ್ತಿ ಮಾಡಲು ಸಾಧ್ಯವಿರುವಂತಹ ಮನೆಗಳಿಗೆ 3 ಲಕ್ಷ ರೂಪಾಯಿ, ಶೇ.15 ರಿಂದ 25 ರಷ್ಟು ಅಲ್ಪ-ಸ್ವಲ್ಪ ಹಾನಿಗೀಡಾದ ಮನೆಗಳಿಗೆ 50 ಸಾವಿರ ರೂಪಾಯಿ ನೆರವು ನೀಡುವುದಾಗಿ ಪ್ರಕಟಿಸಿದೆ.

ಇದಲ್ಲದೆ, ದಿನಬಳಕೆ ವಸ್ತುಗಳನ್ನು ಕಳೆದುಕೊಂಡವರಿಗೆ ತಕ್ಷಣಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪರಿಹಾರ ನಿಧಿಯಿಂದ 10 ಸಾವಿರ ರೂಪಾಯಿ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ. 

ಮನೆ ಕಳೆದುಕೊಂಡ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಅಭಿವೃದ್ಧಿಪಡಿಸಲಾದ ತಂತ್ರಾಂಶದ ಮೂಲಕ ಹೊಸ ಮನೆ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.

Follow Us:
Download App:
  • android
  • ios