ಬೆಂಗಳೂರು, (ಏ.25) : ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿರುವುದರಿಂದ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ, ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿದೆ.

ಹೌದು...ಕೊರೋನಾ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಐವರಿಗಿಂತ ಹೆಚ್ಚು ಸೇರುವಂತಿಲ್ಲ. ಇನ್ನು ಕೊರೋನಾ ಅಲ್ಲದೇ ಬೇರೆ ಕಾರಣಗಳಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಯಲ್ಲಿ 20 ಜನರೂ ಸೇರುವಂತಿಲ್ಲ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಇಂದು (ಭಾನುವಾರ) ಆದೇಶ ಹೊರಡಿಸಿದ್ದಾರೆ.

ವೀಕೆಂಡ್ ಲಾಕ್‌ಡೌನ್‌ ಮಧ್ಯೆ ಕರ್ನಾಟಕದಲ್ಲಿ ಅಬ್ಬರಿಸಿದ ಕೊರೋನಾ!

ಕರ್ಪ್ಯೂ ಜಾರಿ ಮಾಡುವ ಸಂದರ್ಭದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿತ್ತು. 

ಆದ್ರೆ, ಇದೀಗ ಇದನ್ನು ಮತ್ತಷ್ಟು ಕಡಿಮೆ ಮಾಡಿ ಮಾಡಲಾಗಿದ್ದು, ಮಾರ್ಗಸೂಚಿ ಪಾಲಿಸಿ ಐದು ಮಂದಿ ಮಾತ್ರ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆ ಆದೇಶ ಹೊರಡಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 34,804 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಇನ್ನು 143 ಮಂದಿ ಬಲಿಯಾಗಿದ್ದಾರೆ.