Asianet Suvarna News Asianet Suvarna News

ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್‌ಟಿಗೆ ಸೇರಿದ 11,000 ಕೋಟಿ ರೂ. ಹಣ ಗ್ಯಾರಂಟಿಗಳಿಗೆ ಬಳಸಿಕೊಂಡಿದೆ; ಆರ್. ಅಶೋಕ್

ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂ. ಎಸ್ ಸಿಎಸ್ ಪಿ/ಟಿಎಸ್ ಪಿ ಹಣವನ್ನ ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

Karnataka Govt Rs 11000 Crore SC ST fund used for congress guarantee schemes says R Ashok sat
Author
First Published May 27, 2024, 6:26 PM IST

ಬೆಂಗಳೂರು (ಮೇ 27): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂ. ಎಸ್ ಸಿಎಸ್ ಪಿ/ಟಿಎಸ್ ಪಿ ಹಣವನ್ನ ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಜಿಟಲ್ ತಂಡದಿಂದ ಪ್ರಕಟಿಸಲಾದ 'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂ. ಅವ್ಯವಹಾರ; ಸಚಿವರ ಹೆಸರು ಬರೆದಟಿಟ್ಟು ಅಧಿಕಾರಿ ಆತ್ಮಹತ್ಯೆ' ಎಂದ ವರದಿಯನ್ನು ಟ್ಯಾಗ್ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್ ಅವರ ಎಕ್ಸ್ ಪೋಸ್ಟ್‌ನಲ್ಲಿ 'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಕಿರುಕುಳ ನೀಡಿ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ ಕಾಂಗ್ರೆಸ್ ಸರ್ಕಾರ' ಎಂದು ಬರೆದುಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂ. ಅವ್ಯವಹಾರ; ಸಚಿವರ ಹೆಸರು ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ

'ಸಿಎಂ ಸಿದ್ದರಾಮಯ್ಯನವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂಪಾಯಿ ಎಸ್ ಸಿಎಸ್ ಪಿ/ಟಿಎಸ್ ಪಿ ಹಣವನ್ನ ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ' ಎಂದು ಟೀಕೆ ಮಾಡಿದ್ದಾರೆ.

ಮತ್ತೊಂದು ಪ್ಯಾರಾದಲ್ಲಿ 'ಸಿಎಂ ಸಿದ್ದರಾಮಯ್ಯನವರೇ, ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಿ ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ' ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹ ಮಾಡಿದ್ದಾರೆ.

ಪ್ರಕರಣದ ಮಾಹಿತಿ ಏನು? 
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಸುಮಾರು 187 ಕೋಟಿ ರೂ. ಹಣ ವರ್ಗಾವನೆಯಾಗಿದ್ದು, ಈ ಪೈಕಿ 85 ಕೋಟಿ ರೂ. ಹಗರಣ ನಡೆದಿದೆ. ಇಲಾಖಾ ಸಚಿವರ ಸೂಚನೆಯಂತೆ ನಿಗಮದ ಹಿರಿಯ ಅಧಿಕಾರಿಗಳು ಹಣ ವರ್ಗಾವಣೆ ಮಾಡಿದ ತಪ್ಪನ್ನು ನನ್ನ ಮೇಲೆ ಹಾಕುತ್ತಿದ್ದಾರೆಂಬ ಭಯದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ (ಸೂರಿಡೆಂಟ್ ಅಕೌಂಟೆಂಟ್) ಇಲಾಖಾ ಸಚಿವರ ಹೆಸರು ಹಾಗೂ ಹಿರಿಯ ಅಧಿಕಾರಿಗಳ ಹೆಸರನ್ನು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

Big Breaking: ಹಾಸನ ಅಶ್ಲೀಲ ವಿಡಿಯೋ ಕೇಸ್ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

ಮೃತ ಅಕೌಂಟೆಂಟ್ ಸೂಪರಿಡೆಂಟ್  ಚಂದ್ರಶೇಖರ್ ನೇಣಿಗೆ ಶರಣಾದ ಅಧಿಕಾರಿಯಾಗಿದ್ದಾರೆ. ಇವರು ನನ್ನ ಸಾವಿಗೆ ನಿಗಮದ ಅಧಿಕಾರಿಗಳು ಹಾಗೂ ಇಲಾಖೆಯ ಸಚಿವರೇ ಕಾರಣವೆಂದು ಡೆತ್ ನೋಟ್ ಬರೆದಿಟ್ಟಿರುವುದು ಪೊಲೀಸರಿಗೆ ಲಭ್ಯವಾಗಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವ್ಸಸ್ಥಾಪಕ ನಿರ್ದೇಶಕ ಜೆ.ಪದ್ಮನಾಭ, ಅಕೌಂಟ್ ವ್ಯವಸ್ಥಾಪಕ ಪರಶುರಾಮ್ ದುರ್ಗಣ್ಣನವರ್ ಹಾಗೂ ಯೂನಿಯನ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಶುಚಿಸ್ಮಿತ ಕಾರಣವೆಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Latest Videos
Follow Us:
Download App:
  • android
  • ios