ಬೆಂಗಳೂರು :  ರಾಜ್ಯ ಸರ್ಕಾರ ನಾಲ್ವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಎಂ. ಮಹೇಶ್ವರ ರಾವ್‌-ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಎಂಎಸ್‌ಎಂಇ ಮತ್ತು ಗಣಿ), ರಾಜೇಂದ್ರ ಕುಮಾರ್‌ ಕಠಾರಿಯಾ- ಕಾರ್ಯದರ್ಶಿ, ಕೃಷಿ ಇಲಾಖೆ ಜೊತೆಗೆ ಹೆಚ್ಚುವರಿಯಾಗಿ ಕಾರ್ಯದರ್ಶಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ), ಅಮ್ಲಾನ್‌ ಆದಿತ್ಯ ಬಿಸ್ವಾಸ್‌-(ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ) ಯೋಜನೆ, ಕಾರ್ಯಕ್ರಮ ಉಸ್ತುವಾರಿ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಚಕ್ರವರ್ತಿ ಮೋಹನ್‌ ಅವರಿಗೆ ಹೆಚ್ಚುವರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹೊಣೆಗಾರಿಕೆ ನೀಡಲಾಗಿದೆ. ಎಂ. ಮಂಜುನಾಥ್‌ ನಾಯ್ಕ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.