ಬೆಂಗಳೂರು (ಶೆ.15):  ರಾಜ್ಯ ಸರ್ಕಾರವು ಸೋಮವಾರ ಎಂ.ಎಸ್‌. ಶ್ರೀಕರ, ಟಿ.ಎಚ್‌.ಎಂ. ಕುಮಾರ್‌ ಸೇರಿದಂತೆ ನಾಲ್ಕು ಮಂದಿ ಐಎಎಸ್‌ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 

ವಾಣಿಜ್ಯ ತೆರಿಗೆಗಳ ಆಯುಕ್ತರಾಗಿದ್ದ ಎಂ.ಎಸ್‌. ಶ್ರೀಕರ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಹಾಗೂ ಉಳಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಟಿ.ಎಚ್‌.ಎಂ. ಕುಮಾರ್‌ ಅವರನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಳಡಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ನೇಮಿಸಿ ವರ್ಗಾಯಿಸಲಾಗಿದೆ.

ಬಿಬಿಎಂಪಿಗೆ ಗೌರವ್ ಗುಪ್ತಾ ಆಡಳಿತಾಧಿಕಾರಿ, ಚುನಾವಣೆ ನಿರೀಕ್ಷೆಯಲ್ಲಿದ್ದರಿಗೆ ಶಾಕ್! .

ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿಗಮದ ಆಯುಕ್ತರಾಗಿದ್ದ ಅಕ್ರಂ ಪಾಷ ಅವರನ್ನು ಕಾರ್ಮಿಕ ಆಯುಕ್ತ ಹುದ್ದೆಗೆ ಹೆಚ್ಚುವರಿ ಪ್ರಭಾರ ಹುದ್ದೆಗೆ ನೇಮಿಸಲಾಗಿದೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ಬಿ. ಶಿರೂರು ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.