ಬೆಂಗಳೂರು, (ಮಾ30):  ಇತ್ತೀಚೆಗಷ್ಟೇ ಹಾಸನ ಜಿಲ್ಲಾಧಿಕಾರಿಗಯಾಗಿ ನೇಮಕವಾಗಿದ್ದ ಆಕ್ರಂ ಪಾಷ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾಧಿಕಾರಿ ಆಕ್ರಂ ಪಾಷ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಮೂಲಕ ಹಾಸನ ಜಿಲ್ಲಾ ಬಿಜೆಪಿ ಮೇಲುಗೈ ಸಾಧಿಸಿದೆ.

ರೋಹಿಣಿ ಸಿಂಧೂರಿ ಸೇರಿ ನಾಲ್ವರು IAS ಅಧಿಕಾರಿಗಳ ಎತ್ತಂಗಡಿ

ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ಜಾಗಕ್ಕೆ ಆಕ್ರಂ ಪಾಷ ಅವರನ್ನು ನಿಯೋಜನೆ ಮಾಡಲಾಗಿತ್ತು. ಇದೀಗ ಅಕ್ರಮ ಪಾಷ ಅವರ ಸ್ಥಾನಕ್ಕೆ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಅವರನ್ನು ನೇಮಿಸಲಾಗಿದೆ.  

ಹಾಸನ ಜಿಲ್ಲಾಧಿಕಾರಿ ಆಕ್ರಂ ಪಾಷ ಅವರು ಜೆಡಿಎಸ್ ಪರವಾಗಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ದೂರು ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗ ಕೂಡಲೇ ಸರ್ಕಾರ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದಿತ್ತು. ಇದರ ಜೊತೆಗೆ ಬೆಳಗಾವಿ ಹಾಗೂ ವಿಜಯಪುರ ಜಿಲ್ಲಾಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ. ಚುನಾವಣೆ ಹೊಸ್ತಿಲಲ್ಲೇ ಜಿಲ್ಲಾಧಿಕಾರಿ ಬದಲಾವಣೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

 3 ಜಿಲ್ಲೆಗಳಿಗೆ ಹೊಸ DCಗಳು
1.ಹಾಸನ DCಯಾಗಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನಿಯೋಜನೆ.
2.ಬೆಳಗಾವಿ ಡಿಸಿಯಾಗಿ ಉಜ್ವಲ್ ಕುಮಾರ್ ಘೋಷ್ ನೇಮಕ.
3.ವಿಜಯಪುರ ಜಿಲ್ಲಾಧಿಕಾರಿಯಾಗಿ ಎಂ.ಕನಗವಲ್ಲಿ ನಿಯೋಜನೆ.