ಬಿಲ್ಲವ ಸಂಘಕ್ಕೆ ಜಮೀನು ಕೊಡಿಸಲು ಕ್ರಮ : ಸುನಿಲ್‌ ಕುಮಾರ್

  • ಬಿಲ್ಲವ ಅಸೋಸಿಯೇಷನ್‌ಗೆ ನಾರಾಯಣಗುರು ಶಾಲೆ ಆರಂಭಿಸಲು ಅಗತ್ಯವಿರುವ ಒಂದು ಎಕರೆ ಜಮೀನು ಮಂಜೂರು
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಮಂಜೂರು
Karnataka Govt will allot land for billava sangha says minister sunil kumar snr

ಬೆಂಗಳೂರು (ಅ.04):  ಬಿಲ್ಲವ ಅಸೋಸಿಯೇಷನ್‌ಗೆ (Billava Association ) ನಾರಾಯಣಗುರು ಶಾಲೆ ಆರಂಭಿಸಲು ಅಗತ್ಯವಿರುವ ಒಂದು ಎಕರೆ ಜಮೀನನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರೊಂದಿಗೆ ಚರ್ಚಿಸಿ ಮಂಜೂರು ಮಾಡಿಸಿಕೊಡುವುದಾಗಿ ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ (Sunil Kumar) ಭರವಸೆ ನೀಡಿದರು.

ಬಿಲ್ಲವ ಅಸೋಸಿಯೇಷನ್‌ ಬೆಂಗಳೂರಿನ ಹುಳಿಮಾವಿನ ಬಿಲ್ಲವ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ (Narayana Guru) 167ನೇ ಜಯಂತಿ ಹಾಗೂ ಬಡ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.

ವಿದೇಶಿ ಕಂಪನಿಗಳಲ್ಲಿ ಕನ್ನಡಿಗರಿಗೆ ನೌಕರಿ ಕೊಡಿಸಲು ಸರ್ಕಾರ ಬದ್ಧ

ಬಿಲ್ಲವ ಅಸೋಸಿಯೇಷನ್‌ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ. ಸಮಾಜದ ಬಡ ವರ್ಗದವರಿಗೆ ಸಹಾಯಹಸ್ತ ಚಾಚುತ್ತಿರುವುದು ಶ್ಲಾಘನೀಯ. ಸಂಘದ ಉದ್ದೇಶಿತ ನಾರಾಯಣಗುರು ಶಾಲೆ ಪ್ರಾರಂಭಿಸಲು ಅಗತ್ಯವಿರುವ ಜಮೀನು ಮಂಜೂರಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸುವುದಾಗಿ ತಿಳಿಸಿದರು.

ಸೋಲಾರ್‌ ಪಾರ್ಕ್‌ಗೆ ಭೂಮಿ ಕೊಟ್ಟ ರೈತರ ಕಲ್ಯಾಣಕ್ಕೆ ಆದ್ಯತೆ

ದೇಶದ ಅತಿ ದೊಡ್ಡ ಸೋಲಾರ್‌ ಪಾರ್ಕ್(Solar Park) ನಿರ್ಮಾಣಕ್ಕಾಗಿ ಭೂಮಿ ನೀಡಿದ ಪಾವಗಡ ರೈತರ ಕುಟುಂಬಗಳ ಕಲ್ಯಾಣ ಹಾಗೂ ಆ ಭಾಗದ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌(Sunil Kumar) ಹೇಳಿದ್ದಾರೆ.

ಪಾವಗಡದ ನಾಗಲಮಡಿಕೆಯಲ್ಲಿ 2,050 ಮೆಗಾವ್ಯಾಟ್‌ ಸಾಮರ್ಥ್ಯದ ಸೋಲಾರ್‌ ಪಾರ್ಕ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಯೋಜನೆಗಾಗಿ 12,718 ಎಕರೆ ಜಮೀನನ್ನು ರೈತರು ಗುತ್ತಿಗೆಗೆ ನೀಡಿದ್ದು, ಅವರಿಗೆ ವಾರ್ಷಿಕ 21 ಸಾವಿರ ರು. ನೀಡಲಾಗುತ್ತಿದೆ. ಆದರೆ ಶಾಲೆ, ಕುಡಿಯುವ ನೀರು ಮೊದಲಾದ ಮೂಲಸೌಕರ್ಯ ಅಭಿವೃದ್ಧಿ ಮಾಡಬೇಕೆಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ. ಹೀಗಾಗಿ, ಸೋಲಾರ್‌ ವಿದ್ಯುತ್‌ ಉತ್ಪಾದಕ ಕಂಪನಿಗಳ ಸಿಎಸ್‌ಆರ್‌ ನಿಧಿ ಬಳಸಿ ಮೂಲಸೌಕರ್ಯ ಅಭಿವೃದ್ಧಿ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.

ವಿದ್ಯುತ್‌ ಉತ್ಪಾದಕ ಕಂಪನಿಗಳ ಸಿಎಸ್‌ಆರ್‌ ನಿಧಿಯಿಂದ 67.5 ಕೋಟಿ ರು. ಸಂಗ್ರಹವಾಗಿದೆ. ಈ ಹಣ ಬಳಸಿ ಶಾಲೆ, ರಸ್ತೆಗಳ ನಿರ್ಮಾಣ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಈ ಭಾಗದ ರೈತರು ನೀರಾವರಿ ಇಲ್ಲದೆ ಬರಡಾಗಿದ್ದ ಜಮೀನನ್ನು ಸರ್ಕಾರಕ್ಕೆ ನೀಡಿ ದೇಶದ ಇಂಧನ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಆದ್ದರಿಂದ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ, ಭೂಮಿ ನೀಡಿದ ರೈತರ(Farmers) ಕುಟುಂಬಗಳ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು. 

Latest Videos
Follow Us:
Download App:
  • android
  • ios