ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಿದ್ದರೆ ರಾಜ್ಯ ಸರ್ಕಾರ ಡಿಸ್ಮಿಸ್ ಆಗುತ್ತೆ: ಸಿಎಂ ಸಿದ್ದರಾಮಯ್ಯ
ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವ ಆದೇಶವನ್ನು ಪಾಲನೆ ಮಾಡದಿದ್ದರೆ ರಾಜ್ಯ ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಬೆಂಗಳೂರು (ಸೆ.29): ನಾವು ಕಾವೇರಿ ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, ನ್ಯಾಯಾಲಯ ಆದೇಶ ಉಲ್ಲಂಘನೆ (contempt of court) ಆಗುತ್ತದೆ. ಆಗ ಕರ್ನಾಟಕ ರಾಜ್ಯ ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಕಾವೇರಿ ವಿವಾದ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಶುಕ್ರವಾರ ನಡೆದ ನಡೆದ ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ. ನಾವು ಕಾವೇರಿ ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, ನ್ಯಾಯಾಲಯ ಆದೇಶ ಉಲ್ಲಂಘನೆ (contempt of court) ಆಗುತ್ತದೆ. ಆಗ ಕರ್ನಾಟಕ ರಾಜ್ಯ ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು. ಇದಕ್ಕೆ ಇಂದು ಸಂಜೆ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಸಭೆ ಕರೆಯಲಾಗಿದೆ. ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು.
Breaking: ಎರಡೆರಡು ಬಂದ್ ಮಾಡಿದರೂ ತಲೆಕೆಡಿಸಿಕೊಳ್ಳದ ಪ್ರಾಧಿಕಾರ, ನೀರು ಬಿಡಿ ಎಂದು ಕರ್ನಾಟಕಕ್ಕೆ ಮತ್ತೆ ಸೂಚನೆ!
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರತಿ ಬಾರಿ ಸಭೆ ಕರೆದಾಗಲೂ ಪ್ರತಿಭಟಿಸುತ್ತಲೇ ಬಂದಿದ್ದೇವೆ. ಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು ಎಂದು ಮಾಹಿತಿ ನೀಡಿದರು.
ತಮಿಳು ನಟ ಸಿದ್ಧಾರ್ಥನಿಗೆ ಕಾವೇರಿ ಹೋರಾಟದ ವೇದಿಕೆಯಲ್ಲಿಯೇ ಕ್ಷಮೆ ಕೇಳಿದ ನಟ ಶಿವರಾಜ್ ಕುಮಾರ್!
ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿಎಂಸಿ ಕುಡಿಯುವ ನೀರಿಗೆ ಅಗತ್ಯ. ಜೊತೆಗೆ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಾಗಿದೆ. ರಾಜ್ಯಕ್ಕೆ ಒಟ್ಟು 106 ಟಿಎಂಸಿ ಅವಶ್ಯಕತೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ವಿವರಿಸಿದರು.