ಕಾಂಗ್ರೆಸ್‌ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಬೇಕಾ ಕೂಡಲೇ ಈ ದಿನಾಂಕದೊಳಗೆ ನಿಮ್ಮ ಹಿಂಬಾಕಿ ವಿದ್ಯುತ್‌ ಬಿಲ್‌ ಪಾವತಿಸಿಸಬೇಕು. 

ಬೆಂಗಳೂರು (ಆ.09): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಗೃಹಜ್ಯೋತಿ ಯೋಜನೆ (ಪ್ರತಿ ಮನೆಗೂ 200 ಯೂನಿಟ್‌ವರೆಗೆ ವಿದ್ಯುತ್‌ ಉಚಿತ) ಅರ್ಹ ಫಲಾನುಭವಿಗಳಿಗೆ ಮುಂದಿನ ತಿಂಗಳು ಶೂನ್ಯ ಬಿಲ್‌ ಬರುವುದಿಲ್ಲ. ಈ ದಿನಾಂಕದೊಳಗೆ ಹಿಂದಿನ ಎಲ್ಲ ಬಾಕಿ ಬಿಲ್‌ಗಳನ್ನು ಪಾವತಿಸಿದಲ್ಲಿ ಮಾತ್ರ ಶೂನ್ಯ ಬಿಲ್‌ ಪಡೆಯಬಹುದು. ಒಂದು ವೇಳೆ ಬಾಕಿ ಬಿಲ್‌ ಪಾವತಿಸದ ಗ್ರಾಹಕರಿಗೆ ಗೃಹಜ್ಯೋತಿ ಯೋಜನೆಯ ಶೂನ್ಯ ಬಿಲ್‌ ಬರುವುದಿಲ್ಲ.

ಹೌದು, ಸರ್ಕಾರ ಗೃಹಜ್ಯೋತಿ ಯೋಜನೆ ಲಾಭ ಪಡೆಯಲು ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ (Gruha Jyothi Scheme) ಪ್ರಯೋಜನ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್​​ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಜುಲೈ 25ರಿಂದ ಆಗಸ್ಟ್ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್‌ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು ಸರಾಸರಿ 200 ಯೂನಿಟ್ ಮೀರಬಾರದು ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, ಸೆಪ್ಟೆಂಬರ್​ 30ರೊಳಗೆ ವಿದ್ಯುತ್​ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಈ ಅವಧಿಯಲ್ಲಿ ಬಾಕಿ ಬಿಲ್‌ ಪಾವತಿಸದಿದ್ದರೆ ಗೃಹಜ್ಯೋತಿ ಯೋಜನೆ ಅನ್ವಯ ಆಗುವುದಿಲ್ಲ.

ಗೃಹಜ್ಯೋತಿ ಅರ್ಜಿ ಸ್ಥಿತಿ ತಿಳಿಯಲು ಪ್ರತ್ಯೇಕ ಲಿಂಕ್‌ ಬಿಡುಗಡೆ: ಮೊಬೈಲ್‌ನಲ್ಲೇ ಪರಿಶೀಲನೆ ಮಾಡಿ

ಸರ್ಕಾರದ ಪ್ರಕಟಣೆಯಲ್ಲಿ ಏನಿದೆ?
ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಅವರಿಗೆ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ. ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸಬೇಕು (ಇನ್ನೂ ಒಂದು ತಿಂಗಳು ಕಾಲಾವಕಾಶ ಇದೆ). ನೀವು ಜುಲೈ 25 ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ, ಆಗಸ್ಟ್ ತಿಂಗಳ ಬಿಲ್‌ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25 ರೊಳಗೆ ನೋಂದಾಯಿಸಿಕೊಂಡಲ್ಲಿ, ಸೆಪ್ಟೆಂಬರ್ ತಿಂಗಳ ಬಿಲ್‌ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ (ಬಿಲ್ಲಿಂಗ್ ಅವಧಿ ಪ್ರತಿ ತಿಂಗಳ 25 ನೇ ತಾರೀಖಿನಿಂದ ಮುಂದಿನ ತಿಂಗಳ 25 ತಾರೀಖಿನವರೆಗೆ ಅನ್ವಯ). ಈ ಪ್ರಯೋಜನ ಪಡೆಯಲು ನಿಮ್ಮ ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್‌ ಮೀರಿರಬಾರದು.

ಗೃಹ ಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25 ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್‌ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ ಯೋಜನೆಯ ಪ್ರಯೋಜನವನ್ನು ಅವರು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಯೋಜನೆಯ ನೋಂದಣಿಗೆ ವಿಳಂಬ ಬೇಡ. ಇಂದೇ ನೋಂದಾಯಿಸಿಕೊಳ್ಳಿ ಎಂದು ಬೆಸ್ಕಾಂ ಮನವಿ ಮಾಡಿದೆ. ಇನ್ನು ಸೆಪ್ಟಂಬರ್‌ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಡಿ ಶೂನ್ಯ ಬಿಲ್‌ ಪ್ರಯೋಜನ ಪಡೆಯಬಹದು. ಆದರೆ, ಸೆಪ್ಟಂಬರ್ ತಿಂಗಳ ಮುಕ್ತಾಯದೊಳಗೆ ಹಿಂಬಾಕಿ ಉಳಿಸಿಕೊಂಡಿರುವ ಎಲ್ಲ ಬಿಲ್‌ನ ಮೊತ್ತವನ್ನು ಪಾವತಿಸಬೇಕು. ಇಲ್ಲವಾದಲ್ಲಿ ಗೃಹಜ್ಯೋತಿ ಅನ್ವಯ ಆಗದೇ ಪುನಃ ಬಿಲ್‌ ಪಾವತಿ ಮಾಡಬೇಕಾಗುತ್ತದೆ.

ಗೃಹಲಕ್ಷ್ಮಿ ಯೋಜನೆಗೆ 2000 ರೂ. ಸ್ಮಾರ್ಟ್‌ ಕಾರ್ಡ್‌ ವಿತರಣೆ: ಆ.27ಕ್ಕೆ ಬೆಳಗಾವಿಯಲ್ಲಿ ಚಾಲನೆ

1.4 ಕೋಟಿ ಗ್ರಾಹಕರಿಂದ ಗೃಹಜ್ಯೋತಿಗೆ ಅರ್ಜಿ ಸಲ್ಲಿಕೆ: ಇನ್ನು ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಈವರೆಗೆ ಸುಮಾರು 1.43 ಕೋಟಿಗೂ ಅಧಿಕ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಆಗಸ್ಟ್‌ 5ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಮೂರನೇ ಗ್ಯಾರಂಟಿಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗಿದೆ. 

ಗೃಹಜ್ಯೋತಿ ಅರ್ಜಿ ಸ್ಥಿತಿ ಈಗಲೇ ಪರಿಶೀಲನೆ ಮಾಡಿ: 
ಈವರೆಗೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಂಡಿಲ್ಲ ಎಂದಾದಲ್ಲಿ sevasindhugs.karnataka.gov.in ಲಿಂಕ್‌ ಮೇಲೆ ಕ್ಲಿಕ್‌ ಮಾಡಿ ಸುಲಭವಾಗಿ ನೋಂದಣಿ ಮಾಡಬಹುದು. ಇನ್ನು ಗೃಹಜ್ಯೋತಿ ಯೋಜನೆ ಅರ್ಜಿ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ತಿಳಿಯಲು https://sevasindhu.karnataka.gov.in/StatucTrack/Track_Status ಈ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಪರಿಶೀಲನೆ ಮಾಡಿಕೊಳ್ಳಬಹುದು.